AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Road Accidents: 2021ರಲ್ಲಿ ವಾಹನ ಚಲಾಯಿಸುವಾಗ ಮೊಬೈಲ್ ಬಳಸಿ 1,997 ಅಪಘಾತ, 1,040 ಮಂದಿ ಸಾವು

ವಾಹನ ಚಲಾಯಿಸುವಾಗ ಮೊಬೈಲ್ ಫೋನ್ ಬಳಕೆಯಿಂದಾಗಿ 2021ರಲ್ಲಿ 1,997 ರಸ್ತೆ ಅಪಘಾತಗಳು ಸಂಭವಿಸಿವೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ನೀಡಿರುವ ಭಾರತದಲ್ಲಿ ರಸ್ತೆ ಅಪಘಾತಗಳು 2021ರ ಶೀರ್ಷಿಕೆಯ ವರದಿಯಲ್ಲಿ ಹೇಳಿದೆ.

Road Accidents: 2021ರಲ್ಲಿ ವಾಹನ ಚಲಾಯಿಸುವಾಗ ಮೊಬೈಲ್ ಬಳಸಿ 1,997 ಅಪಘಾತ, 1,040 ಮಂದಿ ಸಾವು
Mobile
Follow us
TV9 Web
| Updated By: ನಯನಾ ರಾಜೀವ್

Updated on: Jan 01, 2023 | 12:29 PM

ವಾಹನ ಚಲಾಯಿಸುವಾಗ ಮೊಬೈಲ್ ಫೋನ್ ಬಳಕೆಯಿಂದಾಗಿ 2021ರಲ್ಲಿ 1,997 ರಸ್ತೆ ಅಪಘಾತಗಳು ಸಂಭವಿಸಿವೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ನೀಡಿರುವ ಭಾರತದಲ್ಲಿ ರಸ್ತೆ ಅಪಘಾತಗಳು 2021ರ ಶೀರ್ಷಿಕೆಯ ವರದಿಯಲ್ಲಿ ಹೇಳಿದೆ. ಈ ರಸ್ತೆ ಅಪಘಾತಗಳಲ್ಲಿ 1040 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, 2021ರಲ್ಲಿ 222 ಜೀವಗಳನ್ನು ಬಲಿ ತೆಗೆದುಕೊಂಡರೆ ಸಿಗ್ನಲ್ ಜಂಪ್ ಮಾಡಿ 555 ರಸ್ತೆ ಅಪಘಾತಗಳು ಸಂಭವಿಸಿವೆ.

ರಸ್ತೆ ಸಚಿವಾಲಯದ ದತ್ತಾಂಶದ ಪ್ರಕಾರ, 2021ರಲ್ಲಿ ಒಟ್ಟು ಅಪಘಾತಗಳು ಮತ್ತು ಗುಂಡಿಗಳಿಂದ ಸಾವನ್ನಪ್ಪಿದವರ ಸಂಖ್ಯೆ ಕ್ರಮವಾಗಿ 3625 ಹಾಗೂ 1481ರಷ್ಟಿದೆ ಎಂದು ಪಿಟಿಐ ವರದಿ ಮಾಡಿದೆ.

2021ರಲ್ಲಿ ಒಟ್ಟು 4,12,432 ರಸ್ತೆ ಅಪಘಾತಗಳು ಸಂಭವಿಸಿವೆ, ಇದರಲ್ಲಿ 1,53,972 ಮಂದಿ ಸಾವನ್ನಪ್ಪಿದ್ದಾರೆ ಮತ್ತು 3,84,448 ಜನರು ಗಾಯಗೊಂಡಿದ್ದಾರೆ.

ಮತ್ತಷ್ಟು ಓದಿ: ಮಂಡ್ಯ: ಎರಡು ಕಾರುಗಳ ನಡುವೆ ಭೀಕರ ಅಪಘಾತ: ನಾಲ್ವರ ಸಾವು

ಹಲವು ಕಾರಣಗಳಿಂದಾಗಿ ರಸ್ತೆ ಅಪಘಾತಗಳು ಸಂಭವಿಸುತ್ತವೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಎಲ್ಲಾ ಏಜೆನ್ಸಿಗಳ ಸಂಘಟಿತ ಪ್ರಯತ್ನಗಳ ಮೂಲಕ ಸಮಸ್ಯೆಗಳನ್ನು ತಗ್ಗಿಸಲು ಬಹುಮುಖಿ ಕ್ರಮಗಳ ಅಗತ್ಯವಿದೆ ಎಂದು ವರದಿ ಹೇಳಿದೆ. 2021ರಲ್ಲಿ ಒಟ್ಟು 4,12,432 ರಸ್ತೆ ಅಪಘಾತಗಳು ಸಂಭವಿಸಿವೆ. ಈ ಪೈಕಿ 1,53,972 ಜನರು ಸಾವಿಗೀಡಾಗಿದ್ದಾರೆ ಮತ್ತು 3,84,448 ಜನರು ಗಾಯಗೊಂಡಿದ್ದಾರೆ.

ಶಿಕ್ಷಣ, ಎಂಜಿನಿಯರಿಂಗ್,  ಜಾರಿ ಮತ್ತು ತುರ್ತು ಆರೈಕೆಯ ಆಧಾರದ ಮೇಲೆ ರಸ್ತೆ ಸುರಕ್ಷತೆಯ ಸಮಸ್ಯೆಯನ್ನು ಪರಿಹರಿಸಲು ರಸ್ತೆ ಸಚಿವಾಲಯವು ಬಹುಮುಖಿ ಕಾರ್ಯತಂತ್ರವನ್ನು ರೂಪಿಸಿದೆ ಎಂದು ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ