ವಾಹನ ಚಲಾಯಿಸುವಾಗ ಮೊಬೈಲ್ ಫೋನ್ ಬಳಕೆಯಿಂದಾಗಿ 2021ರಲ್ಲಿ 1,997 ರಸ್ತೆ ಅಪಘಾತಗಳು ಸಂಭವಿಸಿವೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ನೀಡಿರುವ ಭಾರತದಲ್ಲಿ ರಸ್ತೆ ಅಪಘಾತಗಳು 2021ರ ಶೀರ್ಷಿಕೆಯ ವರದಿಯಲ್ಲಿ ಹೇಳಿದೆ. ಈ ರಸ್ತೆ ಅಪಘಾತಗಳಲ್ಲಿ 1040 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, 2021ರಲ್ಲಿ 222 ಜೀವಗಳನ್ನು ಬಲಿ ತೆಗೆದುಕೊಂಡರೆ ಸಿಗ್ನಲ್ ಜಂಪ್ ಮಾಡಿ 555 ರಸ್ತೆ ಅಪಘಾತಗಳು ಸಂಭವಿಸಿವೆ.
ರಸ್ತೆ ಸಚಿವಾಲಯದ ದತ್ತಾಂಶದ ಪ್ರಕಾರ, 2021ರಲ್ಲಿ ಒಟ್ಟು ಅಪಘಾತಗಳು ಮತ್ತು ಗುಂಡಿಗಳಿಂದ ಸಾವನ್ನಪ್ಪಿದವರ ಸಂಖ್ಯೆ ಕ್ರಮವಾಗಿ 3625 ಹಾಗೂ 1481ರಷ್ಟಿದೆ ಎಂದು ಪಿಟಿಐ ವರದಿ ಮಾಡಿದೆ.
2021ರಲ್ಲಿ ಒಟ್ಟು 4,12,432 ರಸ್ತೆ ಅಪಘಾತಗಳು ಸಂಭವಿಸಿವೆ, ಇದರಲ್ಲಿ 1,53,972 ಮಂದಿ ಸಾವನ್ನಪ್ಪಿದ್ದಾರೆ ಮತ್ತು 3,84,448 ಜನರು ಗಾಯಗೊಂಡಿದ್ದಾರೆ.
ಮತ್ತಷ್ಟು ಓದಿ: ಮಂಡ್ಯ: ಎರಡು ಕಾರುಗಳ ನಡುವೆ ಭೀಕರ ಅಪಘಾತ: ನಾಲ್ವರ ಸಾವು
ಹಲವು ಕಾರಣಗಳಿಂದಾಗಿ ರಸ್ತೆ ಅಪಘಾತಗಳು ಸಂಭವಿಸುತ್ತವೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಎಲ್ಲಾ ಏಜೆನ್ಸಿಗಳ ಸಂಘಟಿತ ಪ್ರಯತ್ನಗಳ ಮೂಲಕ ಸಮಸ್ಯೆಗಳನ್ನು ತಗ್ಗಿಸಲು ಬಹುಮುಖಿ ಕ್ರಮಗಳ ಅಗತ್ಯವಿದೆ ಎಂದು ವರದಿ ಹೇಳಿದೆ. 2021ರಲ್ಲಿ ಒಟ್ಟು 4,12,432 ರಸ್ತೆ ಅಪಘಾತಗಳು ಸಂಭವಿಸಿವೆ. ಈ ಪೈಕಿ 1,53,972 ಜನರು ಸಾವಿಗೀಡಾಗಿದ್ದಾರೆ ಮತ್ತು 3,84,448 ಜನರು ಗಾಯಗೊಂಡಿದ್ದಾರೆ.
ಶಿಕ್ಷಣ, ಎಂಜಿನಿಯರಿಂಗ್, ಜಾರಿ ಮತ್ತು ತುರ್ತು ಆರೈಕೆಯ ಆಧಾರದ ಮೇಲೆ ರಸ್ತೆ ಸುರಕ್ಷತೆಯ ಸಮಸ್ಯೆಯನ್ನು ಪರಿಹರಿಸಲು ರಸ್ತೆ ಸಚಿವಾಲಯವು ಬಹುಮುಖಿ ಕಾರ್ಯತಂತ್ರವನ್ನು ರೂಪಿಸಿದೆ ಎಂದು ಹೇಳಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ