AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೊಂಚ ತಡವಾಗಿದ್ದರೂ ಜಲಪಾತದಲ್ಲಿ ಕೊಚ್ಚಿ ಹೋಗುತ್ತಿದ್ದರು ತಾಯಿ-ಮಗು; ಶಾಕಿಂಗ್ ವಿಡಿಯೋ ಇಲ್ಲಿದೆ

ತಮಿಳುನಾಡಿನ ಅನೈವಾರಿ ಮುಟ್ಟಲ್ ಜಲಪಾತವಾಗಿ ಧುಮ್ಮಿಕ್ಕುತ್ತಿದ್ದ ನೀರಿನಿಂದ ಕೆಲವೇ ಮೀಟರ್ ದೂರದಲ್ಲಿ ತಾಯಿ ಮತ್ತು ಮಗು ಸಿಲುಕಿದ್ದರು. ಬಂಡೆಯೊಂದನ್ನು ಹಿಡಿದುಕೊಂಡು ಪ್ರಾಣ ರಕ್ಷಣೆಗಾಗಿ ಹೋರಾಡುತ್ತಿದ್ದ ತಾಯಿ-ಮಗುವನ್ನು ಅರಣ್ಯಾಧಿಕಾರಿಗಳು ರಕ್ಷಿಸಿದ್ದಾರೆ.

Viral Video: ಕೊಂಚ ತಡವಾಗಿದ್ದರೂ ಜಲಪಾತದಲ್ಲಿ ಕೊಚ್ಚಿ ಹೋಗುತ್ತಿದ್ದರು ತಾಯಿ-ಮಗು; ಶಾಕಿಂಗ್ ವಿಡಿಯೋ ಇಲ್ಲಿದೆ
ತಮಿಳುನಾಡಿನ ಜಲಪಾತದಿಂದ ತಾಯ-ಮಗುವಿನ ರಕ್ಷಣೆ
TV9 Web
| Edited By: |

Updated on:Oct 27, 2021 | 4:49 PM

Share

ಚೆನ್ನೈ: ಜಲಪಾತದ ಬಳಿ ಸಿಲುಕಿಕೊಂಡಿದ್ದ ತಾಯಿ ಮತ್ತು ಮಗುವನ್ನು ಸಿನಿಮೀಯ ರೀತಿಯಲ್ಲಿ ರಕ್ಷಣೆ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ತಮಿಳುನಾಡಿನ ಅರಣ್ಯಾಧಿಕಾರಿಗಳು ಜಲಪಾತದಿಂದ ತಾಯಿ ಮತ್ತು ಮಗುವನ್ನು ರಕ್ಷಿಸುತ್ತಿರುವ ಈ ವಿಡಿಯೋವನ್ನು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಕೂಡ ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದ್ದಾರೆ.

ತಮಿಳುನಾಡಿನ ಅನೈವಾರಿ ಮುಟ್ಟಲ್ ಜಲಪಾತವಾಗಿ ಧುಮ್ಮಿಕ್ಕುತ್ತಿದ್ದ ನೀರಿನಿಂದ ಕೆಲವೇ ಮೀಟರ್ ದೂರದಲ್ಲಿ ತಾಯಿ ಮತ್ತು ಮಗು ಸಿಲುಕಿದ್ದರು. ಬಂಡೆಯೊಂದನ್ನು ಹಿಡಿದುಕೊಂಡು ಪ್ರಾಣ ರಕ್ಷಣೆಗಾಗಿ ಹೋರಾಡುತ್ತಿದ್ದ ತಾಯಿ-ಮಗುವನ್ನು ಅರಣ್ಯಾಧಿಕಾರಿಗಳು ರಕ್ಷಿಸಿದ್ದಾರೆ. ಈ ಜಲಪಾತವು ಸೇಲಂ ಜಿಲ್ಲೆಯ ಸಮೀಪದ ಕಲ್ಲವರಾಯನ ಬೆಟ್ಟಗಳ ಬಳಿಯಿದೆ. ಎರಡು ತಿಂಗಳ ಹಿಂದೆ ಈ ಜಲಪಾತಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ಅನುಮತಿ ನೀಡಲಾಗಿತ್ತು.

ಮಹಿಳೆ ತನ್ನ ಮಗುವನ್ನು ಹಿಡಿದುಕೊಂಡು ಬಂಡೆಯ ಮೇಲೆ ಕುಳಿತಾಗ ಅರಣ್ಯಾಧಿಕಾರಿಗಳು ನಿಧಾನವಾಗಿ ಅವಳ ಬಳಿಗೆ ಹೋಗಿ, ಹಗ್ಗದ ಸಹಾಯದಿಂದ ಆಕೆಯ ಮಗುವನ್ನು ಮೊದಲು ಎಳೆದುಕೊಂಡು ಮೇಲಿನವರಿಗೆ ವರ್ಗಾಯಿಸಿದ್ದಾರೆ. ಬಳಿಕ ಆ ಮಹಿಳೆಯನ್ನು ಕೂಡ ರಕ್ಷಿಸಲಾಗಿದೆ. ಜಲಪಾತದ ಇನ್ನೊಂದು ಬದಿಯಲ್ಲಿ ಜನರು ಕಿರುಚುತ್ತಿರುವುದನ್ನು ಈ ವಿಡಿಯೋದಲ್ಲಿ ಕಾಣಬಹುದು.

ಅರಣ್ಯಾಧಿಕಾರಿಗಳ ಧೈರ್ಯ ಮತ್ತು ಸಮಯಪ್ರಜ್ಞೆ ಭಾರೀ ಮೆಚ್ಚುಗೆಗೆ ಪಾತ್ರವಾಗಿದ್ದು, ಹಲವರು ಈ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ. ಅರಣ್ಯಾಧಿಕಾರಿಗಳು ಮೇಲಿನ ಮರಕ್ಕೆ ಕಟ್ಟಿದ್ದ ಹಗ್ಗದ ಸಹಾಯದಿಂದ ಮಗು ಮತ್ತು ಮಹಿಳೆಯನ್ನು ಮೇಲಕ್ಕೆತ್ತುವ ಮೂಲಕ ರಕ್ಷಣೆ ಮಾಡಿದ್ದಾರೆ. ಅವರು ಅಲ್ಲಿಗೆ ತಲುಪುವುದು ಕೊಂಚ ತಡವಾಗಿದ್ದರೂ ತಾಯಿ-ಮಗು ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದರು.

‘ತಾಯಿ ಮತ್ತು ಮಗುವನ್ನು ರಕ್ಷಿಸಿದವರ ಧೈರ್ಯದ ಈ ಕೆಲಸ ಬಹಳ ಶ್ಲಾಘನೀಯವಾಗಿದೆ. ಈ ಸಿಬ್ಬಂದಿಗೆ ನಮ್ಮ ಸರ್ಕಾರ ಧನ್ಯವಾದ ತಿಳಿಸುತ್ತಿದೆ. ಇತರರ ಪ್ರಾಣವನ್ನು ಉಳಿಸುವ ಮೂಲಕ ಅವರು ಧೈರ್ಯದ ಜೊತೆಗೆ ಮಾನವೀಯತೆ ಮೆರೆದಿದ್ದಾರೆ. ಸಾರ್ವಜನಿಕರು ವಿಪತ್ತುಗಳ ಸಮಯದಲ್ಲಿ ಹೆಚ್ಚು ಜಾಗರೂಕರಾಗಿರಬೇಕು’ ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Viral Video: ಬೆಂಗಳೂರು ಏರ್​ಪೋರ್ಟ್​ನಲ್ಲಿ ಕಂಡ ಸೈನಿಕರಿಗೆ ಸಲ್ಯೂಟ್ ಮಾಡಿದ 4 ವರ್ಷದ ಬಾಲಕ; ವಿಡಿಯೋ ವೈರಲ್

Viral Video: ಮನೆ ಎದುರು ಲಾಲೂಪ್ರಸಾದ್ ಯಾದವ್ ಪಾದ ತೊಳೆದ ಮಗ ತೇಜ್ ಪ್ರತಾಪ್

Published On - 4:45 pm, Wed, 27 October 21

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?