ಚೆನ್ನೈ: ಜಲಪಾತದ ಬಳಿ ಸಿಲುಕಿಕೊಂಡಿದ್ದ ತಾಯಿ ಮತ್ತು ಮಗುವನ್ನು ಸಿನಿಮೀಯ ರೀತಿಯಲ್ಲಿ ರಕ್ಷಣೆ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ತಮಿಳುನಾಡಿನ ಅರಣ್ಯಾಧಿಕಾರಿಗಳು ಜಲಪಾತದಿಂದ ತಾಯಿ ಮತ್ತು ಮಗುವನ್ನು ರಕ್ಷಿಸುತ್ತಿರುವ ಈ ವಿಡಿಯೋವನ್ನು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಕೂಡ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ.
ತಮಿಳುನಾಡಿನ ಅನೈವಾರಿ ಮುಟ್ಟಲ್ ಜಲಪಾತವಾಗಿ ಧುಮ್ಮಿಕ್ಕುತ್ತಿದ್ದ ನೀರಿನಿಂದ ಕೆಲವೇ ಮೀಟರ್ ದೂರದಲ್ಲಿ ತಾಯಿ ಮತ್ತು ಮಗು ಸಿಲುಕಿದ್ದರು. ಬಂಡೆಯೊಂದನ್ನು ಹಿಡಿದುಕೊಂಡು ಪ್ರಾಣ ರಕ್ಷಣೆಗಾಗಿ ಹೋರಾಡುತ್ತಿದ್ದ ತಾಯಿ-ಮಗುವನ್ನು ಅರಣ್ಯಾಧಿಕಾರಿಗಳು ರಕ್ಷಿಸಿದ್ದಾರೆ. ಈ ಜಲಪಾತವು ಸೇಲಂ ಜಿಲ್ಲೆಯ ಸಮೀಪದ ಕಲ್ಲವರಾಯನ ಬೆಟ್ಟಗಳ ಬಳಿಯಿದೆ. ಎರಡು ತಿಂಗಳ ಹಿಂದೆ ಈ ಜಲಪಾತಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ಅನುಮತಿ ನೀಡಲಾಗಿತ್ತು.
Brave effort by forest staff while saving life of a mother with infant at #Anaivari waterfalls in #Salem district of #TamilNadu #TNForesters
Via:@Shilpa1308 @supriyasahuias @SudhaRamenIFS pic.twitter.com/TN1maKbWsv— Surender Mehra IFS (@surenmehra) October 26, 2021
ಮಹಿಳೆ ತನ್ನ ಮಗುವನ್ನು ಹಿಡಿದುಕೊಂಡು ಬಂಡೆಯ ಮೇಲೆ ಕುಳಿತಾಗ ಅರಣ್ಯಾಧಿಕಾರಿಗಳು ನಿಧಾನವಾಗಿ ಅವಳ ಬಳಿಗೆ ಹೋಗಿ, ಹಗ್ಗದ ಸಹಾಯದಿಂದ ಆಕೆಯ ಮಗುವನ್ನು ಮೊದಲು ಎಳೆದುಕೊಂಡು ಮೇಲಿನವರಿಗೆ ವರ್ಗಾಯಿಸಿದ್ದಾರೆ. ಬಳಿಕ ಆ ಮಹಿಳೆಯನ್ನು ಕೂಡ ರಕ್ಷಿಸಲಾಗಿದೆ. ಜಲಪಾತದ ಇನ್ನೊಂದು ಬದಿಯಲ್ಲಿ ಜನರು ಕಿರುಚುತ್ತಿರುವುದನ್ನು ಈ ವಿಡಿಯೋದಲ್ಲಿ ಕಾಣಬಹುದು.
ಅರಣ್ಯಾಧಿಕಾರಿಗಳ ಧೈರ್ಯ ಮತ್ತು ಸಮಯಪ್ರಜ್ಞೆ ಭಾರೀ ಮೆಚ್ಚುಗೆಗೆ ಪಾತ್ರವಾಗಿದ್ದು, ಹಲವರು ಈ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ. ಅರಣ್ಯಾಧಿಕಾರಿಗಳು ಮೇಲಿನ ಮರಕ್ಕೆ ಕಟ್ಟಿದ್ದ ಹಗ್ಗದ ಸಹಾಯದಿಂದ ಮಗು ಮತ್ತು ಮಹಿಳೆಯನ್ನು ಮೇಲಕ್ಕೆತ್ತುವ ಮೂಲಕ ರಕ್ಷಣೆ ಮಾಡಿದ್ದಾರೆ. ಅವರು ಅಲ್ಲಿಗೆ ತಲುಪುವುದು ಕೊಂಚ ತಡವಾಗಿದ್ದರೂ ತಾಯಿ-ಮಗು ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದರು.
தாயையும் சேயையும் காப்பாற்றியவர்களின் தீரமிக்க செயல் பாராட்டுக்குரியது; அரசால் சிறப்பிக்கப்படுவார்கள்.
தன்னுயிர் பாராது பிறரது உயிர் காக்க துணிந்த அவர்களது தீரத்தில் மனிதநேயமே ஒளிர்கிறது!
பேரிடர்களின்போது பொதுமக்கள் கவனமுடன் இருக்க வேண்டும்.
பண்புடையார்ப் பட்டுண்டு உலகம்! pic.twitter.com/NRCb8OE8l3
— M.K.Stalin (@mkstalin) October 26, 2021
‘ತಾಯಿ ಮತ್ತು ಮಗುವನ್ನು ರಕ್ಷಿಸಿದವರ ಧೈರ್ಯದ ಈ ಕೆಲಸ ಬಹಳ ಶ್ಲಾಘನೀಯವಾಗಿದೆ. ಈ ಸಿಬ್ಬಂದಿಗೆ ನಮ್ಮ ಸರ್ಕಾರ ಧನ್ಯವಾದ ತಿಳಿಸುತ್ತಿದೆ. ಇತರರ ಪ್ರಾಣವನ್ನು ಉಳಿಸುವ ಮೂಲಕ ಅವರು ಧೈರ್ಯದ ಜೊತೆಗೆ ಮಾನವೀಯತೆ ಮೆರೆದಿದ್ದಾರೆ. ಸಾರ್ವಜನಿಕರು ವಿಪತ್ತುಗಳ ಸಮಯದಲ್ಲಿ ಹೆಚ್ಚು ಜಾಗರೂಕರಾಗಿರಬೇಕು’ ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: Viral Video: ಬೆಂಗಳೂರು ಏರ್ಪೋರ್ಟ್ನಲ್ಲಿ ಕಂಡ ಸೈನಿಕರಿಗೆ ಸಲ್ಯೂಟ್ ಮಾಡಿದ 4 ವರ್ಷದ ಬಾಲಕ; ವಿಡಿಯೋ ವೈರಲ್
Viral Video: ಮನೆ ಎದುರು ಲಾಲೂಪ್ರಸಾದ್ ಯಾದವ್ ಪಾದ ತೊಳೆದ ಮಗ ತೇಜ್ ಪ್ರತಾಪ್
Published On - 4:45 pm, Wed, 27 October 21