AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ ಅಮಾನವೀಯ ಕೃತ್ಯ: ಮಹಿಳೆಯನ್ನು ಥಳಿಸಿ ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ ಪತಿ ಮತ್ತು ಕುಟುಂಬಸ್ಥರು

ಮಹಿಳೆಯೊಬ್ಬರನ್ನು ಆಕೆಯ ಪತಿ ಮತ್ತು ಆತನ ಕುಟುಂಬ ಸದಸ್ಯರು ಸಾರ್ವಜನಿಕವಾಗಿ ಥಳಿಸಿ ವಿವಸ್ತ್ರಗೊಳಿಸಿದ ಅಮಾನವೀಯ ಕೃತ್ಯ ರಾಜಸ್ಥಾನದ ಪ್ರತಾಪ್‌ಗಢ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸೋಮವಾರ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಆರೋಪಿಗಳನ್ನು ಶೀಘ್ರವೇ ಬಂಧಿಸಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ರಾಜಸ್ಥಾನದಲ್ಲಿ ಅಮಾನವೀಯ ಕೃತ್ಯ: ಮಹಿಳೆಯನ್ನು ಥಳಿಸಿ ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ ಪತಿ ಮತ್ತು ಕುಟುಂಬಸ್ಥರು
ಮಹಿಳೆಯೊಬ್ಬರನ್ನು ಆಕೆಯ ಪತಿ ಮತ್ತು ಆತನ ಕುಟುಂಬಸ್ಥರು ಸಾರ್ವಜನಿಕವಾಗಿ ಥಳಿಸಿ ವಿವಸ್ತ್ರಗೊಳಿಸಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ
Rakesh Nayak Manchi
Rakesh Nayak Manchi|

Updated on:Sep 02, 2023 | 7:28 AM

Share

ಜೈಪುರ, ಸೆ.2: ಮಹಿಳೆಯೊಬ್ಬರನ್ನು ಆಕೆಯ ಪತಿ ಮತ್ತು ಆತನ ಕುಟುಂಬ ಸದಸ್ಯರು ಸಾರ್ವಜನಿಕವಾಗಿ ಥಳಿಸಿ ವಿವಸ್ತ್ರಗೊಳಿಸಿದ ಘಟನೆ ರಾಜಸ್ಥಾನದ (Rajasthan) ಪ್ರತಾಪ್‌ಗಢ ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ ನಡೆದ ಘಟನೆ ಇದಾಗಿದೆ ಎಂದು ಹೇಳಲಾಗುತ್ತಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗುತ್ತಿದೆ. ಈ ಬಗ್ಗೆ ಟ್ವೀಟ್ ಮಾಡಿದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot), ಆರೋಪಿಗಳನ್ನು ಶೀಘ್ರವೇ ಬಂಧಿಸಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದರು.

ಕಳೆದ ವರ್ಷ ವಿವಾಹವಾಗಿದ್ದ ಮಹಿಳೆ, ನೆರೆಹೊರೆಯ ಪುರುಷನೊಂದಿಗೆ ಓಡಿಹೋಗಿದ್ದಾಳೆ ಎಂದು ಆರೋಪಿಸಿ ಆಕೆಯ ಪತಿ ಮತ್ತು ಅತ್ತೆ ಥಳಿಸಿದ್ದಾರೆ. ಅಷ್ಟೇ ಅಲ್ಲದೆ, ಆಕೆಯನ್ನು ವಿವಸ್ತ್ರಗೊಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಎಫ್‌ಐಆರ್ ದಾಖಲಾಗಿದ್ದು, ತನಿಖೆಗಾಗಿ ಆರು ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ಸಿಬಿಐ ತನಿಖೆ ನಡೆಸುತ್ತಿರುವ ಎಲ್ಲ ಪ್ರಕರಣಗಳ ವಿಚಾರಣೆ ಅಸ್ಸಾಂ ಹೈಕೋರ್ಟ್​ಗೆ ವರ್ಗಾಯಿಸಿದ ಸುಪ್ರೀಂ

ಈ ಬಗ್ಗೆ ಟ್ವೀಟ್‌ ಮಾಡಿದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಪ್ರತಾಪಗಢ ಜಿಲ್ಲೆಯಲ್ಲಿ ಪತಿ ಮತ್ತು ಅತ್ತೆ-ಮಾವನ ನಡುವಿನ ಕೌಟುಂಬಿಕ ಕಲಹದಲ್ಲಿ ಮಹಿಳೆಯನ್ನು ಆಕೆಯ ಅತ್ತೆ-ಮಾವ ಬೆತ್ತಲೆಗೊಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಾಗರಿಕ ಸಮಾಜದಲ್ಲಿ ಇಂತಹ ಅಪರಾಧಿಗಳಿಗೆ ಸ್ಥಳವಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದರು.

ಘಟನೆಯ ಕುರಿತು ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕಿ ವಸುಂಧರಾ ರಾಜೆ, ಮಹಿಳೆಯರ ವಿರುದ್ಧದ ಅಪರಾಧಗಳು ರಾಜ್ಯದಲ್ಲಿ ಎಷ್ಟು ಹರಡಿವೆಯೆಂದರೆ ರಾಜಸ್ಥಾನವು ದಿನದಿಂದ ದಿನಕ್ಕೆ ನಾಚಿಕೆಪಡಬೇಕಾಗಿದೆ. ಮಹಿಳಾ ದೌರ್ಜನ್ಯದಲ್ಲಿ ರಾಜ್ಯವನ್ನು ದೇಶದಲ್ಲಿಯೇ ನಂಬರ್ ಒನ್ ಮಾಡಲು ಕಾಂಗ್ರೆಸ್ ಸರ್ಕಾರವೇ ಕಾರಣವಾಗಿದೆ. ರಾಜಸ್ಥಾನದಲ್ಲಿ ಹೆಣ್ಣುಮಕ್ಕಳ ಲೂಟಿ ಮತ್ತು ಕಿರುಚಾಟವನ್ನು ನಿಮ್ಮ ಕಾಂಗ್ರೆಸ್ ಸರ್ಕಾರ ಕೇಳದಿರುವುದು ಯಾಕೆ ಎಂದು ಅಶೋಕ್ ಗೆಹ್ಲೋಟ್ ಅವರನ್ನು ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯ ವಿಡಿಯೋವನ್ನು ಹಂಚಿಕೊಳ್ಳದಂತೆ ಪ್ರತಾಪಗಢ ಪೊಲೀಸರು ಮನವಿ ಮಾಡಿದ್ದಾರೆ.

“ಪ್ರತಾಪ್‌ಗಢದಲ್ಲಿ ಬುಡಕಟ್ಟು ಮಹಿಳೆಯೊಂದಿಗಿನ ಅನುಚಿತ ವರ್ತನೆಯ ವೀಡಿಯೊವನ್ನು ನೋಡಿದ ನಂತರ ಹೃದಯ ಮುರಿದಿದೆ. ಆರೋಪಿಗಳು ಕೃತ್ಯದ ವೀಡಿಯೋವನ್ನು ಬಹಿರಂಗವಾಗಿ ಮಾಡುತ್ತಿದ್ದಾರೆ. ಘಟನೆಯ ಹಿಂದಿರುವವರ ವಿರುದ್ಧ ಕಾಂಗ್ರೆಸ್ ನೇತೃತ್ವದ ರಾಜಸ್ಥಾನ ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ಬಿಜೆಪಿ ನಾಯಕ ಸತೀಶ್ ಪೂನಿಯಾ ಅವರು ಎಕ್ಸ್ (ಟ್ವಿಟರ್)ನಲ್ಲಿ ಬರೆದುಕೊಂಡಿದ್ದಾರೆ.

ಏತನ್ಮಧ್ಯೆ, ಬಿಜೆಪಿ ನಾಯಕ ಗಜೇಂದ್ರ ಸಿಂಗ್ ಶೇಖಾವತ್ ಅವರು ಮಹಿಳೆಯರ ಅಸುರಕ್ಷತೆಯ ಬಗ್ಗೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಅವರನ್ನು ತರಾಟೆಗೆ ತೆಗೆದುಕೊಂಡರು. ಅಶೋಕ್ ಗೆಹ್ಲೋಟ್ ಅವರ ರಾಜೀನಾಮೆಯನ್ನು ಯಾವಾಗ ಕೇಳುತ್ತೀರಿ? ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಯಾವಾಗ ಒತ್ತಾಯಿಸುತ್ತೀರಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಪ್ರಶ್ನಿಸಿದ್ದಾರೆ.

ಘಟನೆ ಸಂಬಂಧ ಮಾಹಿತಿ ತಿಳಿದ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್, ಪ್ರತಾಪಗಢದ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಡಿಜಿಪಿ ಉಮೇಶ್ ಮಿಶ್ರಾ ನಿರ್ದೇಶನ ನೀಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:27 am, Sat, 2 September 23

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ