ಜೈಪುರ, ಸೆ.2: ಮಹಿಳೆಯೊಬ್ಬರನ್ನು ಆಕೆಯ ಪತಿ ಮತ್ತು ಆತನ ಕುಟುಂಬ ಸದಸ್ಯರು ಸಾರ್ವಜನಿಕವಾಗಿ ಥಳಿಸಿ ವಿವಸ್ತ್ರಗೊಳಿಸಿದ ಘಟನೆ ರಾಜಸ್ಥಾನದ (Rajasthan) ಪ್ರತಾಪ್‌ಗಢ ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ ನಡೆದ ಘಟನೆ ಇದಾಗಿದೆ ಎಂದು ಹೇಳಲಾಗುತ್ತಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗುತ್ತಿದೆ. ಈ ಬಗ್ಗೆ ಟ್ವೀಟ್ ಮಾಡಿದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot), ಆರೋಪಿಗಳನ್ನು ಶೀಘ್ರವೇ ಬಂಧಿಸಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದರು.
ಕಳೆದ ವರ್ಷ ವಿವಾಹವಾಗಿದ್ದ ಮಹಿಳೆ, ನೆರೆಹೊರೆಯ ಪುರುಷನೊಂದಿಗೆ ಓಡಿಹೋಗಿದ್ದಾಳೆ ಎಂದು ಆರೋಪಿಸಿ ಆಕೆಯ ಪತಿ ಮತ್ತು ಅತ್ತೆ ಥಳಿಸಿದ್ದಾರೆ. ಅಷ್ಟೇ ಅಲ್ಲದೆ, ಆಕೆಯನ್ನು ವಿವಸ್ತ್ರಗೊಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಎಫ್‌ಐಆರ್ ದಾಖಲಾಗಿದ್ದು, ತನಿಖೆಗಾಗಿ ಆರು ಪೊಲೀಸ್ ತಂಡಗಳನ್ನು ರಚಿಸಲಾಗಿದೆ.
ಇದನ್ನೂ ಓದಿ: ಮಣಿಪುರ ಹಿಂಸಾಚಾರ: ಸಿಬಿಐ ತನಿಖೆ ನಡೆಸುತ್ತಿರುವ ಎಲ್ಲ ಪ್ರಕರಣಗಳ ವಿಚಾರಣೆ ಅಸ್ಸಾಂ ಹೈಕೋರ್ಟ್ಗೆ ವರ್ಗಾಯಿಸಿದ ಸುಪ್ರೀಂ
ಈ ಬಗ್ಗೆ ಟ್ವೀಟ್ ಮಾಡಿದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಪ್ರತಾಪಗಢ ಜಿಲ್ಲೆಯಲ್ಲಿ ಪತಿ ಮತ್ತು ಅತ್ತೆ-ಮಾವನ ನಡುವಿನ ಕೌಟುಂಬಿಕ ಕಲಹದಲ್ಲಿ ಮಹಿಳೆಯನ್ನು ಆಕೆಯ ಅತ್ತೆ-ಮಾವ ಬೆತ್ತಲೆಗೊಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಾಗರಿಕ ಸಮಾಜದಲ್ಲಿ ಇಂತಹ ಅಪರಾಧಿಗಳಿಗೆ ಸ್ಥಳವಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದರು.
प्रतापगढ़ जिले में पीहर और ससुराल पक्ष के आपसी पारिवारिक विवाद में ससुराल पक्ष के लोगों द्वारा एक महिला को निर्वस्त्र करने का एक वीडियो सामने आया है।
पुलिस महानिदेशक को एडीजी क्राइम को मौके पर भेजने एवं इस मामले में कड़ी से कड़ी कार्रवाई के निर्देश दिए हैं।
सभ्य समाज में इस…
— Ashok Gehlot (@ashokgehlot51) September 1, 2023
ಘಟನೆಯ ಕುರಿತು ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕಿ ವಸುಂಧರಾ ರಾಜೆ, ಮಹಿಳೆಯರ ವಿರುದ್ಧದ ಅಪರಾಧಗಳು ರಾಜ್ಯದಲ್ಲಿ ಎಷ್ಟು ಹರಡಿವೆಯೆಂದರೆ ರಾಜಸ್ಥಾನವು ದಿನದಿಂದ ದಿನಕ್ಕೆ ನಾಚಿಕೆಪಡಬೇಕಾಗಿದೆ. ಮಹಿಳಾ ದೌರ್ಜನ್ಯದಲ್ಲಿ ರಾಜ್ಯವನ್ನು ದೇಶದಲ್ಲಿಯೇ ನಂಬರ್ ಒನ್ ಮಾಡಲು ಕಾಂಗ್ರೆಸ್ ಸರ್ಕಾರವೇ ಕಾರಣವಾಗಿದೆ. ರಾಜಸ್ಥಾನದಲ್ಲಿ ಹೆಣ್ಣುಮಕ್ಕಳ ಲೂಟಿ ಮತ್ತು ಕಿರುಚಾಟವನ್ನು ನಿಮ್ಮ ಕಾಂಗ್ರೆಸ್ ಸರ್ಕಾರ ಕೇಳದಿರುವುದು ಯಾಕೆ ಎಂದು ಅಶೋಕ್ ಗೆಹ್ಲೋಟ್ ಅವರನ್ನು ಪ್ರಶ್ನಿಸಿದ್ದಾರೆ.
प्रतापगढ़ जिले की पहाड़ा ग्राम पंचायत, धरियावाद में एक गर्भवती युवती को सरेआम निर्वस्त्र करने का अश्लील वीडियो वायरल होता रहा और घटना की प्रशासन को खबर तक नहीं थी।
प्रदेश में महिलाओं के खिलाफ अपराध ने इस कदर पैर पसारे है कि आए दिन राजस्थान को शर्मिंदा होना पड़ रहा है। महिला…
— Vasundhara Raje (@VasundharaBJP) September 1, 2023
ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯ ವಿಡಿಯೋವನ್ನು ಹಂಚಿಕೊಳ್ಳದಂತೆ ಪ್ರತಾಪಗಢ ಪೊಲೀಸರು ಮನವಿ ಮಾಡಿದ್ದಾರೆ.
“ಪ್ರತಾಪ್‌ಗಢದಲ್ಲಿ ಬುಡಕಟ್ಟು ಮಹಿಳೆಯೊಂದಿಗಿನ ಅನುಚಿತ ವರ್ತನೆಯ ವೀಡಿಯೊವನ್ನು ನೋಡಿದ ನಂತರ ಹೃದಯ ಮುರಿದಿದೆ. ಆರೋಪಿಗಳು ಕೃತ್ಯದ ವೀಡಿಯೋವನ್ನು ಬಹಿರಂಗವಾಗಿ ಮಾಡುತ್ತಿದ್ದಾರೆ. ಘಟನೆಯ ಹಿಂದಿರುವವರ ವಿರುದ್ಧ ಕಾಂಗ್ರೆಸ್ ನೇತೃತ್ವದ ರಾಜಸ್ಥಾನ ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ಬಿಜೆಪಿ ನಾಯಕ ಸತೀಶ್ ಪೂನಿಯಾ ಅವರು ಎಕ್ಸ್ (ಟ್ವಿಟರ್)ನಲ್ಲಿ ಬರೆದುಕೊಂಡಿದ್ದಾರೆ.
ಏತನ್ಮಧ್ಯೆ, ಬಿಜೆಪಿ ನಾಯಕ ಗಜೇಂದ್ರ ಸಿಂಗ್ ಶೇಖಾವತ್ ಅವರು ಮಹಿಳೆಯರ ಅಸುರಕ್ಷತೆಯ ಬಗ್ಗೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಅವರನ್ನು ತರಾಟೆಗೆ ತೆಗೆದುಕೊಂಡರು. ಅಶೋಕ್ ಗೆಹ್ಲೋಟ್ ಅವರ ರಾಜೀನಾಮೆಯನ್ನು ಯಾವಾಗ ಕೇಳುತ್ತೀರಿ? ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಯಾವಾಗ ಒತ್ತಾಯಿಸುತ್ತೀರಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಪ್ರಶ್ನಿಸಿದ್ದಾರೆ.
ಘಟನೆ ಸಂಬಂಧ ಮಾಹಿತಿ ತಿಳಿದ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್, ಪ್ರತಾಪಗಢದ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಡಿಜಿಪಿ ಉಮೇಶ್ ಮಿಶ್ರಾ ನಿರ್ದೇಶನ ನೀಡಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:27 am, Sat, 2 September 23