ಎಂಥಾ ಕಾರಣ: ತನಗೆ ಹೇಳದೆ ಅತ್ತೆ ತನ್ನ ಮೇಕ್​ಅಪ್​ ಕಿಟ್​ ಬಳಸಿದ್ದಕ್ಕೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಮಹಿಳೆ

ತನಗೆ ಹೇಳದೆ ಅತ್ತೆ ತನ್ನ ಮೇಕ್​ಅಪ್​ ಕಿಟ್ ಬಳಸಿದ್ದಕ್ಕೆ ಕೋಪಗೊಂಡ ಮಹಿಳೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವ ಘಟನೆ ಆಗ್ರಾದಲ್ಲಿ ನಡೆದಿದೆ. ಈ ವಿಚಾರವಾಗಿ ಅತ್ತೆಯೊಂದಿಗೆ ಜಗಳವಾಡಿದ ನಂತರ ಪತಿ ತನ್ನನ್ನು ಮತ್ತು ತನ್ನ ಸಹೋದರಿಯನ್ನು ಮನೆಯಿಂದ ಹೊರಹಾಕಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ.

ಎಂಥಾ ಕಾರಣ: ತನಗೆ ಹೇಳದೆ ಅತ್ತೆ ತನ್ನ ಮೇಕ್​ಅಪ್​ ಕಿಟ್​ ಬಳಸಿದ್ದಕ್ಕೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಮಹಿಳೆ
ಮೇಕ್​ಅಪ್​Image Credit source: Derma companies
Follow us
ನಯನಾ ರಾಜೀವ್
|

Updated on: Jan 30, 2024 | 2:17 PM

ತನಗೆ ಹೇಳದೆ ಅತ್ತೆ ತನ್ನ ಮೇಕ್​ಅಪ್​ ಕಿಟ್ ಬಳಸಿದ್ದಕ್ಕೆ ಕೋಪಗೊಂಡ ಮಹಿಳೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವ ಘಟನೆ ಆಗ್ರಾದಲ್ಲಿ ನಡೆದಿದೆ. ಈ ವಿಚಾರವಾಗಿ ಅತ್ತೆಯೊಂದಿಗೆ ಜಗಳವಾಡಿದ ನಂತರ ಪತಿ ತನ್ನನ್ನು ಮತ್ತು ತನ್ನ ಸಹೋದರಿಯನ್ನು ಮನೆಯಿಂದ ಹೊರಹಾಕಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ.

ಮಹಿಳೆ ಮತ್ತು ಆಕೆಯ ಸಹೋದರಿ ಕಳೆದ ವರ್ಷ ಇಬ್ಬರು ಸಹೋದರರನ್ನು ವಿವಾಹವಾಗಿದ್ದರು. ಅತ್ತೆ ಆಕೆಯ ಮೇಕ್​ ಅಪ್​ ಬಳಸಿದ್ದಕ್ಕಾಗಿ ಹೊರಗೆ ಹೋಗುವಾಗ ಮೇಕ್​ಅಪ್​ ಮಾಡಿಕೊಳ್ಳಲು ತಮ್ಮ ಬಳಿ ವಸ್ತುಗಳಿರಲಿಲ್ಲ. ಮನೆಯಲ್ಲಿದ್ದರೂ ಅತ್ತೆ ಮೇಕ್​ಅಪ್​ ಮಾಡಿಕೊಳ್ಳುತ್ತಲೇ ಇರುತ್ತಾರೆ  ಎಂದು ಸೊಸೆ ಹೇಳಿದ್ದಾರೆ.

ಮನೆಯಲ್ಲಿದ್ದಾಗ ಮೇಕ್ಅಪ್ ಬಳಸಬೇಡಿ ಎಂದು ಮಹಿಳೆ ತನ್ನ ಅತ್ತೆಯನ್ನು ಕೇಳಿದಾಗ, ಜಗಳ ಶುರುವಾಗಿದೆ, ನಂತರ ಅತ್ತೆ ತನ್ನ ಪತಿಗೆ ಘಟನೆಯ ಬಗ್ಗೆ ದೂರು ನೀಡಿದ್ದಾಳೆ. ಪತಿ ಆಕೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಆಕೆ ಹಾಗೂ ತಂಗಿಯನ್ನು ಮನೆಯಿಂದ ಹೊರ ಹಾಕಿದ್ದರಿಂದ ಪರಿಸ್ಥಿತಿ ಬಿಗಡಾಯಿಸಿತು. ಇಬ್ಬರು ಮಹಿಳೆಯರು ಎರಡು ತಿಂಗಳಿನಿಂದ ತಮ್ಮ ತಾಯಿಯ ಮನೆಯಲ್ಲಿ ವಾಸವಿದ್ದಾರೆ.

ಎಕ್ಸ್​ನಲ್ಲಿ ಕೆಲವು ಬಳಕೆದಾರರು ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ, ಯಾರಾದರೂ ಮೇಕ್​ ಅಪ್​ ಕಿಟ್ ಬಳಕೆ ಮಾಡಿದ್ದಕ್ಕೆ ಜಗಳವಾಡ್ತಾರಾ ಎಂದು ಕೇಳಿದ್ದಾರೆ, ಇನ್ನೂ ಕೆಲವರು ಅವರ ಅತ್ತೆಗೆ ಸ್ವಂತ ಮೇಕ್​ಅಪ್​ ಕಿಟ್ ತೆಗೆದುಕೊಳ್ಳಲು ಸಾಧ್ಯವಿಲ್ಲವೇ ಎಂದೂ ಪ್ರಶ್ನಿಸಿದ್ದಾರೆ.

ಮತ್ತಷ್ಟು ಓದಿ: ಮಧ್ಯ ಪ್ರದೇಶ: ಹನಿಮೂನ್​​​ಗೆ ಗೋವಾ ಬದಲು ಅಯೋಧ್ಯೆಗೆ ಕರೆದೊಯ್ದ ಪತಿ; ವಿಚ್ಛೇದನ ಕೋರಿದ ಪತ್ನಿ

ಮಹಿಳೆ ಮತ್ತು ಆಕೆಯ ಅತ್ತೆಯ ಕೌನ್ಸೆಲಿಂಗ್ ಮಾಡಲಾಯಿತು, ಆದರೆ ಮಹಿಳೆ ವಿಚ್ಛೇದನ ಪಡೆಯುವ ನಿರ್ಧಾರ ದೃಢವಾಗಿದೆ ಎಂದು ಕೌನ್ಸೆಲರ್ ಅಮಿತ್ ಕುಮಾರ್ ತಿಳಿಸಿದ್ದಾರೆ. ಅನುಮತಿಯಿಲ್ಲದೆ ತನ್ನ ಮೇಕ್ಅಪ್ ಅನ್ನು ಬಳಸುವುದರ ಬಗ್ಗೆ ಸಮಸ್ಯೆ ಇಲ್ಲ ಎಂದು ಅವರು ಪ್ರತಿಪಾದಿಸಿದರು. ತನ್ನ ಪತಿ ತನ್ನ ತಾಯಿಯ ಪ್ರಭಾವಕ್ಕೆ ಒಳಗಾಗಿ ತನ್ನ ಮೇಲೆ ಕೌಟುಂಬಿಕ ದೌರ್ಜನ್ಯವೆಸಗಿದ್ದಾರೆ ಎಂದು ಹೇಳಿದ್ದಾರೆ.

ಮಹಿಳೆ ಮತ್ತು ಆಕೆಯ ಪತಿ ಇಬ್ಬರನ್ನೂ ಹೆಚ್ಚುವರಿ ಕೌನ್ಸೆಲಿಂಗ್ ಸೆಷನ್‌ಗಳಿಗೆ ಕರೆಯಲಾಗುವುದು ಎಂದು ಗೌರ್ ಹೇಳಿದರು. ಇತ್ತೀಚಿನ ದಿನಗಳಲ್ಲಿ ಸಣ್ಣ ಪುಟ್ಟ ವಿಚಾರಕ್ಕೆ ವಿಚ್ಛೇದನ ಪಡೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಈ ಹಿಂದೆ ಮಹಿಳೆಯೊಬ್ಬರು ತನ್ನ ಪತಿ ಹನಿಮೂನ್​ಗೆ ಗೋವಾಗೆ ಕರೆದುಕೊಂಡು ಹೋಗುತ್ತೇನೆಂದು ಹೇಳಿ ಅಯೋಧ್ಯೆಗೆ ಕರೆದುಕೊಂಡು ಹೋಗಿದ್ದಕ್ಕೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್