AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲ್ಕನಿಯಿಂದ ಬೀಳುತ್ತಿದ್ದ ಮಗುವನ್ನು ರಕ್ಷಣೆ ಮಾಡಿದ ವಾರಗಳ ಬಳಿಕ ಮಗುವಿನ ತಾಯಿ ಶವವಾಗಿ ಪತ್ತೆ

ಬಾಲ್ಕನಿಯಿಂದ ಬೀಳುತ್ತಿದ್ದ ಮಗುವನ್ನು ರಕ್ಷಣೆ ಮಾಡಿದ ವಾರಗಳ ಬಳಿಕ ಮಗುವಿನ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಗುವನ್ನು ಚೆನ್ನಾಗಿ ನೋಡಿಕೊಳ್ಳುತ್ತಿಲ್ಲ ಎಂದು ಸಾಮಾಜಿಕ ಜಾಲತಾನಗಳಲ್ಲಿ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಕೆಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಘಟನೆ ಹಾಗೂ ಸಂದರ್ಭಗಳ ಬಗ್ಗೆ ಅರಿಯದೇ ಯಾರೂ ಕೂಡ ಮಾತನಾಡಬಾರದು ಎಂಬುದಕ್ಕೆ ಇದೊಂದು ನಿದರ್ಶನ.

ಬಾಲ್ಕನಿಯಿಂದ ಬೀಳುತ್ತಿದ್ದ ಮಗುವನ್ನು ರಕ್ಷಣೆ ಮಾಡಿದ ವಾರಗಳ ಬಳಿಕ ಮಗುವಿನ ತಾಯಿ ಶವವಾಗಿ ಪತ್ತೆ
ನಯನಾ ರಾಜೀವ್
|

Updated on:May 20, 2024 | 11:30 AM

Share

ಚೆನ್ನೈನ ಅಪಾರ್ಟ್​ಮೆಂಟ್​ನ ಬಾಲ್ಕನಿಯೊಂದರಿಂದ ಬೀಳುತ್ತಿದ್ದ ಮಗುವನ್ನು ರಕ್ಷಣೆ ಮಾಡಿ ವಾರಗಳ ಬಳಿಕ ಮಗುವಿನ ತಾಯಿ ಶವವಾಗಿ ಪತ್ತೆಯಾಗಿದ್ದಾರೆ. ಏಪ್ರಿಲ್​ 28ರಂದು ಎಂಟು ತಿಂಗಳ ಪುಟ್ಟ ಮಗು ಅಪಾರ್ಟ್​ಮೆಂಟ್​ನ ಮೇಲ್ಛಾವಣಿಯ ಶೀಟ್​ ಮೇಲೆ ನೇತಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು.

ಅಕ್ಕಪಕ್ಕದವರು ಮಗು ಬಿದ್ದರೆ ಬೆಡ್​ಶೀಟ್​ ಮೇಲೆ ಬೀಳಲಿ ಎಂದು ಕೆಳಗೆ ಬೆಡ್​ಶೀಟ್​ ಹಿಡಿದು ನಿಂತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಹಾಗೆಯೇ ಯಾರೂ ಮಗುವನ್ನು ರಕ್ಷಿಸುವುದರಲ್ಲಿ ಯಶಸ್ವಿಯಾಗಿದ್ದರು.

ರಕ್ಷಣೆ ಮಾಡಿದವರನ್ನು ಪ್ರಶಂಸೆ ಮಾಡಲಾಯಿತಾದರೂ ಮಗುವಿನ ತಾಯಿಯ ನಿರ್ಲಕ್ಷ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗಿದ್ದವು.

ಮತ್ತಷ್ಟು ಓದಿ: Viral Video: ಅಪಾರ್ಟ್ಮೆಂಟ್ ರೂಫ್ ಶೀಟ್ ಮೇಲೆ ಸಿಲುಕಿದ ಪುಟ್ಟ ಕಂದಮ್ಮ, ಪ್ರಾಣವನ್ನೇ ಪಣಕ್ಕಿಟ್ಟು ಮಗುವಿನ ರಕ್ಷಣೆಗೆ ಧಾವಿಸಿದ ನೆರೆಯ ನಿವಾಸಿಗಳು

ಆಕೆ ಮಗುವನ್ನು ತುಂಬಾ ಚೆನ್ನಾಗಿ ನೋಡಿಕೊಂಡಿದ್ದಾರೆ ಆದರೆ ಇದು ಕೇವಲ ಒಂದು ಅಪಘಾತ ಎಂದು ಅಕ್ಕಪಕ್ಕದ ಮನೆಯವರು ಹೇಳಿದ್ದರು.

ಘಟನೆಯ ನಂತರ ರಮ್ಯಾ ತನ್ನ ಮಗುವನ್ನು ಕರಮಡೈನಲ್ಲಿರುವ ತನ್ನ ಪೋಷಕರ ಮನೆಗೆ ಕರೆದುಕೊಂಡು ಹೋಗಿದ್ದರು. ಭಾನುವಾರ ಮನೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರಮ್ಯಾ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.

ಮಗುವಿನ ತಾಯಿಯ ಸಾವಿನ ಬಗ್ಗೆ ಗಾಯಕಿ ಚಿನ್ಮಯಿ ಶ್ರೀಪಾದ ನಟ ಪ್ರಶಾಂತ್ ರಂಗಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಘಟನೆಯಿಂದ ಅವಮಾನಗೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿದ್ದಾರೆ.

@itisprashanth ಅವರಂತಹ ಜನರು ಪೋಷಕರನ್ನು ಅವಮಾನಿಸಿದವರು, ಈ ಮಗುವಿನ ತಾಯಿ ಈಗ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ಇವರೆಲ್ಲರು ಈಗ ಸಂಭ್ರಮಿಸಬಹುದು ಎಂದು ಬರೆದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:25 am, Mon, 20 May 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ