AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಶಾಸಕರ ಕಾರು ತೊಳೆಯಲು ಅಗ್ನಿಶಾಮಕ ವಾಹನ ಬಳಕೆ, ವಿಡಿಯೋ ವೈರಲ್

ಮಧ್ಯಪ್ರದೇಶದ ಸಿಂಗ್ರೌಲಿಯಲ್ಲಿ ಬಿಜೆಪಿ ಶಾಸಕರ ಇನ್ನೋವಾ ಕಾರನ್ನು ಸರ್ಕಾರಿ ಅಗ್ನಿಶಾಮಕ ವಾಹನದಿಂದ ತೊಳೆಯುವ ವಿಡಿಯೋ ವೈರಲ್ ಆಗಿದ್ದು, ಭಾರಿ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ತುರ್ತು ಸೇವೆಗೆ ಮೀಸಲಾದ ಸಂಪನ್ಮೂಲಗಳ ದುರ್ಬಳಕೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಶಾಸಕರ ಸಮರ್ಥನೆ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಈ ಘಟನೆ ಅಧಿಕಾರ ದುರ್ಬಳಕೆ ಮತ್ತು ಹೊಣೆಗಾರಿಕೆಯ ಕೊರತೆಯನ್ನು ಎತ್ತಿ ತೋರಿಸಿದೆ.

ಬಿಜೆಪಿ ಶಾಸಕರ ಕಾರು ತೊಳೆಯಲು ಅಗ್ನಿಶಾಮಕ ವಾಹನ ಬಳಕೆ, ವಿಡಿಯೋ ವೈರಲ್
ಕಾರು
ನಯನಾ ರಾಜೀವ್
|

Updated on: Aug 26, 2026 | 12:36 PM

Share

ಸಿಂಗ್ರೌಲಿ, ಆಗಸ್ಟ್​ 26: ತುರ್ತು ಸಂದರ್ಭಗಳಲ್ಲಿ ಜನರ ಜೀವ ಮತ್ತು ಆಸ್ತಿಪಾಸ್ತಿ ರಕ್ಷಿಸಬೇಕಾದ ಸರ್ಕಾರಿ ಅಗ್ನಿಶಾಮಕ ದಳದ ವಾಹನವನ್ನು ಶಾಸಕರೊಬ್ಬರ  ಇನ್ನೋವಾ ಕಾರು ತೊಳೆಯಲು ಬಳಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರಿ ರಾಜಕೀಯ ವಿವಾದವನ್ನು ಹುಟ್ಟುಹಾಕಿದೆ.

ಮಧ್ಯಪ್ರದೇಶದ ಸಿಂಗ್ರೌಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ರಾಮ್‌ನಿವಾಸ್ ಶಾ ಅವರ ಬಿಲೌಂಜಿಯಲ್ಲಿರುವ ಸರ್ಕಾರಿ ನಿವಾಸದ ಮುಂಭಾಗ ಈ ಘಟನೆ ನಡೆದಿದ್ದು, ಮುನ್ಸಿಪಲ್ ಕಾರ್ಪೊರೇಷನ್‌ನ ಮೂವರು ಸಿಬ್ಬಂದಿ ಅಗ್ನಿಶಾಮಕ ವಾಹನದ ಪೈಪ್ ಮೂಲಕ ಶಾಸಕರ ಕಾರಿಗೆ ಪ್ರೆಶರ್ ನೀರು ಸಿಂಪಡಿಸಿ ತೊಳೆಯುತ್ತಿರುವುದು ದೃಶ್ಯಗಳಲ್ಲಿ ಸೆರೆಯಾಗಿದೆ.

ವಿಡಿಯೋ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಉತ್ತರಿಸಿದ ಶಾಸಕ ರಾಮ್‌ನಿವಾಸ್ ಶಾ, ಜನರು ಮೊದಲು ಅರ್ಥಮಾಡಿಕೊಳ್ಳಬೇಕು, ಒಬ್ಬ ಶಾಸಕ ತನ್ನ ವಾಹನವನ್ನು ತಾನೇ ತೊಳೆಯಲು ಸಾಧ್ಯವೇ? ಎಂದು ಮರುಪ್ರಶ್ನಿಸುವ ಮೂಲಕ ಉಡಾಫೆಯಾಗಿ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಎನ್​ಡಿಟಿವಿ ವರದಿ ಮಾಡಿದೆ.

ವಿಡಿಯೋ

ಆ ಸಮಯದಲ್ಲಿ ತಾನು ಸ್ಥಳೀಯ ಕಾರ್ಯಕ್ರಮಗಳಲ್ಲಿದ್ದ ಕಾರಣ ನಿವಾಸದಲ್ಲಿ ಇರಲಿಲ್ಲ ಎಂದು ಹೇಳಿಕೊಂಡ ಅವರು, ಮಹಾನಗರ ಪಾಲಿಕೆ ಕಚೇರಿಗೆ ನೀರು ಸರಬರಾಜು ಮಾಡಲು ಬಂದಿದ್ದ ವಾಹನವನ್ನು ಚಾಲಕ ಕಾರು ತೊಳೆಯಲು ಬಳಸಿಕೊಂಡಿರಬಹುದು ಎಂದು ಸಮರ್ಥಿಸಿಕೊಂಡಿದ್ದಾರೆ.

ಉಮಾಂಗ್ ಸಿಂಘರ್ ಕಿಡಿ: ಮಧ್ಯಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಉಮಾಂಗ್ ಸಿಂಘರ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, ಸಾಮಾನ್ಯ ಜನರ ಮನೆಗೆ ಬೆಂಕಿ ಬಿದ್ದಾಗ ಸಕಾಲಕ್ಕೆ ಬಾರದ ಅಗ್ನಿಶಾಮಕ ವಾಹನಗಳು, ಬಿಜೆಪಿ ಶಾಸಕರ ಕಾರು ತೊಳೆಯುವ ಖಾಸಗಿ ವಾಷಿಂಗ್ ಸೆಂಟರ್ ಆಗಿ ಮಾರ್ಪಟ್ಟಿವೆ ಎಂದು ಟೀಕಿಸಿದ್ದಾರೆ.

ಮತ್ತಷ್ಟು ಓದಿ: ಪಿಎಸ್‌ಐ ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; 10 ದಿನಗಳ ಬಳಿಕ ವೀಡಿಯೋ ವೈರಲ್

ನೆಟ್ಟಿಗರ ವ್ಯಂಗ್ಯ: ಸಾರ್ವಜನಿಕರ ತೆರಿಗೆ ಹಣ ಮತ್ತು ತುರ್ತು ಸಂಪನ್ಮೂಲಗಳನ್ನು ರಾಜಕಾರಣಿಗಳು ತಮ್ಮ ವೈಯಕ್ತಿಕ ಪ್ರತಿಷ್ಠೆಗೆ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ತುರ್ತು ಸೇವಾ ನಿಯಮಗಳ ಉಲ್ಲಂಘನೆ: ನಿಯಮಗಳ ಪ್ರಕಾರ, ಅಗ್ನಿಶಾಮಕ ವಾಹನಗಳನ್ನು ಕೇವಲ ಬೆಂಕಿ ಅವಘಡಗಳು, ಪ್ರವಾಹ ಅಥವಾ ತುರ್ತು ರಕ್ಷಣಾ ಕಾರ್ಯಾಚರಣೆಗಳಿಗೆ ಮಾತ್ರ ಬಳಸಲು ಅನುಮತಿಯಿದೆ. ಯಾವುದೇ ವ್ಯಕ್ತಿಯ ಖಾಸಗಿ ವಾಹನ ತೊಳೆಯಲು ಅಥವಾ ವೈಯಕ್ತಿಕ ಬಳಕೆಗೆ ಇವುಗಳನ್ನು ಬಳಸುವುದು ಅಧಿಕಾರ ದುರುಪಯೋಗ ಹಾಗೂ ಶಿಕ್ಷಾರ್ಹ ಅಪರಾಧವಾಗಿದೆ.

ಅಧಿಕಾರಿಗಳ ಮೌನ: ಘಟನೆ ಸಾರ್ವಜನಿಕವಾಗಿ ಬಯಲಾಗಿದ್ದರೂ, ಸ್ಥಳೀಯ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಜಿಲ್ಲಾಡಳಿತವು ಘಟನೆಯ ಬಗ್ಗೆ ಸ್ಪಷ್ಟ ತನಿಖೆ ನಡೆಸದೆ ಜಾಣಮೌನ ವಹಿಸಿರುವುದು ಸ್ಥಳೀಯ ಆಡಳಿತದ ಮೇಲಿನ ಹೊಣೆಗಾರಿಕೆಯನ್ನು ಪ್ರಶ್ನಿಸುವಂತೆ ಮಾಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ