ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋ ನೋಡಿ ತಂಗಿ ಮೇಲೆ ಅತ್ಯಾಚಾರ, ಕೊಲೆ, ಅಪರಾಧ ಮರೆಮಾಚಲು ತಾಯಿಯ ಬೆಂಬಲ

ಅಪ್ರಾಪ್ತ ಬಾಲಕನೊಬ್ಬ ತನ್ನ ತಂಗಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ, ಈ ಕೃತ್ಯವನ್ನು ಮರೆ ಮಾಚಲು ಆತನ ಹಿರಿಯ ಸಹೋದರಿ ಹಾಗೂ ತಾಯಿ ಸಹಾಯ ಮಾಡಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಆತ ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿ ಬಳಿಕ ತಂಗಿ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿದ್ದ.

ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋ ನೋಡಿ ತಂಗಿ ಮೇಲೆ ಅತ್ಯಾಚಾರ, ಕೊಲೆ, ಅಪರಾಧ ಮರೆಮಾಚಲು ತಾಯಿಯ ಬೆಂಬಲ
ಅಪರಾಧ

Updated on: Jul 28, 2024 | 9:50 AM

ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋ ನೋಡಿ 9 ವರ್ಷದ ಅಪ್ರಾಪ್ತ ತಂಗಿಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿದ್ದ ಪ್ರಕರಣದಲ್ಲಿ ಈ ಕೃತ್ಯ ಮರೆ ಮಾಚಲು ಆತನ ತಾಯಿಯೇ ಸಹಾಯ ಮಾಡಿದ್ದಳು ಎನ್ನುವ ಮಾಹಿತಿ ಲಭ್ಯವಾಗಿದೆ.

13 ವರ್ಷದ ಬಾಲಕನೊಬ್ಬ ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋವನ್ನು ನೋಡಿ ತಂಗಿಯ ಮೇಲೆ ಅತ್ಯಾಚಾರವೆಸಗಿದ್ದ ಬಳಿಕ ಆಕೆ ಈ ವಿಚಾರವನ್ನು ಎಲ್ಲಾದರೂ ಬಾಯಿಬಿಟ್ಟಾಳು ಎನ್ನುವ ಭಯದಿಂದ ಆಕೆಯನ್ನು ಹತ್ಯೆ ಮಾಡಿದ್ದ.

ಈ ಘಟನೆಯನ್ನು ಮುಚ್ಚಿಡಲು ಆತನ ತಾಯಿ ಹಾಗೂ ಸಹೋದರಿ ಸಹಾಯ ಮಾಡಿದ್ದರು ಎಂದು ಮಧ್ಯಪ್ರದೇಶದ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸರು 50 ಜನರ ವಿಚಾರಣೆ ನಡೆಸಿದ್ದಾರೆ, ಕೆಲವು ಸಾಕ್ಷ್ಯಾಧಾರ ಆಧಾರದ ಮೇಲೆ ತಾಯಿ ಹಾಗೂ ಸಹೋದರಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ಓದಿ: Shocking News: 1 ವರ್ಷದಿಂದ ಅತ್ಯಾಚಾರ; ಸ್ವಂತ ಅಣ್ಣಂದಿರಿಂದಲೇ ಗರ್ಭಿಣಿಯಾದ ಬಾಲಕಿ

ಏಪ್ರಿಲ್ 24ರಂದು ಮಧ್ಯಪ್ರದೇಶದ ರೇವಾ ಜಿಲ್ಲೆಯ ಮನೆಯೊಂದರಲ್ಲಿ 9 ವರ್ಷದ ಅಪ್ರಾಪ್ತ ಬಾಲಕಿಯ ಶವ ಸಿಕ್ಕಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆದಿದೆ ಎಂಬುದು ತಿಳಿದುಬಂದಿತ್ತು.

ಕುಟುಂಬ ಸದಸ್ಯರ ತೀವ್ರ ವಿಚಾರಣೆ ಬಳಿಕ ಸಂತ್ರಸ್ತೆಯ 13 ವರ್ಷದ ಸಹೋದರ ರಾತ್ರಿ ಆಕೆಯ ಪಕ್ಕದಲ್ಲಿ ಮಲಗಿದ್ದ, ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿದ್ದಾನೆ, ಬಳಿಕ ಆಕೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಎಂಬುದು ತಿಳಿದುಬಂದಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us