AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MP Raghav Chadha: ರಾಜ್ಯಸಭೆಯಲ್ಲಿ ಎಎಪಿ ಪಕ್ಷದ ನಾಯಕನಾಗಿ ಸಂಸದ ರಾಘವ್ ಚಡ್ಡಾ ನೇಮಕ

Rajya Sabha: ರಾಘವ್ ಚಡ್ಡಾ ರಾಜ್ಯಸಭೆಯ ಕಿರಿಯ ಸದಸ್ಯರಲ್ಲಿ ಒಬ್ಬರು. ಪ್ರಸ್ತುತ ಮೇಲ್ಮನೆಯಲ್ಲಿ ಎಎಪಿ ಒಟ್ಟು 10 ಸಂಸದರನ್ನು ಹೊಂದಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಟಿಎಂಸಿ ನಂತರ ಎಎಪಿ ರಾಜ್ಯಸಭೆಯಲ್ಲಿ ನಾಲ್ಕನೇ ದೊಡ್ಡ ಪ್ರಬಲ ಪಕ್ಷವಾಗಿ ಹೊರಹೊಮ್ಮಿದೆ. ಇದೀಗ ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯಲ್ಲಿ ಎಎಪಿ ಪಕ್ಷದ ನಾಯಕನಾಗಿ ನೇಮಕ ಮಾಡಿದೆ.

MP Raghav Chadha: ರಾಜ್ಯಸಭೆಯಲ್ಲಿ ಎಎಪಿ ಪಕ್ಷದ ನಾಯಕನಾಗಿ ಸಂಸದ ರಾಘವ್ ಚಡ್ಡಾ ನೇಮಕ
ಸಂಸದ ರಾಘವ್ ಚಡ್ಡಾ
ಅಕ್ಷಯ್​ ಪಲ್ಲಮಜಲು​​
|

Updated on: Dec 16, 2023 | 5:23 PM

Share

ದೆಹಲಿ, ಡಿ.16: ರಾಜ್ಯಸಭೆಯಲ್ಲಿ ಎಎಪಿ ಪಕ್ಷದ ನಾಯಕನಾಗಿ ಸಂಸದ ರಾಘವ್ ಚಡ್ಡಾ (Raghav Chadha) ಅವರನ್ನು ಪಕ್ಷ ನೇಮಿಸಿದೆ. ಈ ಹಿಂದೆ ಸಂಜಯ್ ಸಿಂಗ್ ಅವರು ರಾಜ್ಯಸಭೆಯಲ್ಲಿ ಎಎಪಿ ನಾಯಕನಾಗಿದ್ದರು. ಆದರೆ ಅವರ ಅನುಪಸ್ಥಿತಿಯಿಂದ ರಾಜ್ಯಸಭೆಯಲ್ಲಿ ಎಎಪಿ ಪಕ್ಷದ ನಾಯಕನಾಗಿ ಸಂಸದ ರಾಘವ್ ಚಡ್ಡಾ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ ರಾಜ್ಯಸಭೆ ಸಭಾಧ್ಯಕ್ಷರಿಗೆ ಪತ್ರ ಬರೆಯಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿದೆ.

ಎಎಪಿ ಸಂಸದ ಸಂಜಯ್ ಸಿಂಗ್ ಸದ್ಯ ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಈ ಕಾರಣದಿಂದ ರಾಜ್ಯಸಭೆಯಲ್ಲಿ ಎಎಪಿ ಪಕ್ಷದ ನಾಯಕ ಇಲ್ಲದಂತಾಗಿತ್ತು. ಇದನ್ನು ಗಮನಿಸಿ ಪಕ್ಷದ ವರಿಷ್ಠರು ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯ ನಾಯಕನಾಗಿ ನೇಮಿಸಿದೆ. ಈ ಮನವಿಗೆ ರಾಜ್ಯಸಭೆ ಸಭಾಧ್ಯಕ್ಷರು ಕೂಡ ಒಪ್ಪಿಗೆಯನ್ನು ಸೂಚಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಮದ್ಯ ನೀತಿ ಪ್ರಕರಣ, ಆರೋಪಪಟ್ಟಿಯಲ್ಲಿ ರಾಘವ್ ಚಡ್ಡಾ ಹೆಸರು

ಚಡ್ಡಾ ರಾಜ್ಯಸಭೆಯ ಕಿರಿಯ ಸದಸ್ಯರಲ್ಲಿ ಒಬ್ಬರು. ಪ್ರಸ್ತುತ ಮೇಲ್ಮನೆಯಲ್ಲಿ ಎಎಪಿ ಒಟ್ಟು 10 ಸಂಸದರನ್ನು ಹೊಂದಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಟಿಎಂಸಿ ನಂತರ ಎಎಪಿ ರಾಜ್ಯಸಭೆಯಲ್ಲಿ ನಾಲ್ಕನೇ ದೊಡ್ಡ ಪ್ರಬಲ ಪಕ್ಷವಾಗಿ ಹೊರಹೊಮ್ಮಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್