ದೆಹಲಿ, ಡಿ.16: ರಾಜ್ಯಸಭೆಯಲ್ಲಿ ಎಎಪಿ ಪಕ್ಷದ ನಾಯಕನಾಗಿ ಸಂಸದ ರಾಘವ್ ಚಡ್ಡಾ (Raghav Chadha) ಅವರನ್ನು ಪಕ್ಷ ನೇಮಿಸಿದೆ. ಈ ಹಿಂದೆ ಸಂಜಯ್ ಸಿಂಗ್ ಅವರು ರಾಜ್ಯಸಭೆಯಲ್ಲಿ ಎಎಪಿ ನಾಯಕನಾಗಿದ್ದರು. ಆದರೆ ಅವರ ಅನುಪಸ್ಥಿತಿಯಿಂದ ರಾಜ್ಯಸಭೆಯಲ್ಲಿ ಎಎಪಿ ಪಕ್ಷದ ನಾಯಕನಾಗಿ ಸಂಸದ ರಾಘವ್ ಚಡ್ಡಾ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ ರಾಜ್ಯಸಭೆ ಸಭಾಧ್ಯಕ್ಷರಿಗೆ ಪತ್ರ ಬರೆಯಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿದೆ.
ಎಎಪಿ ಸಂಸದ ಸಂಜಯ್ ಸಿಂಗ್ ಸದ್ಯ ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಈ ಕಾರಣದಿಂದ ರಾಜ್ಯಸಭೆಯಲ್ಲಿ ಎಎಪಿ ಪಕ್ಷದ ನಾಯಕ ಇಲ್ಲದಂತಾಗಿತ್ತು. ಇದನ್ನು ಗಮನಿಸಿ ಪಕ್ಷದ ವರಿಷ್ಠರು ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯ ನಾಯಕನಾಗಿ ನೇಮಿಸಿದೆ. ಈ ಮನವಿಗೆ ರಾಜ್ಯಸಭೆ ಸಭಾಧ್ಯಕ್ಷರು ಕೂಡ ಒಪ್ಪಿಗೆಯನ್ನು ಸೂಚಿಸಿದ್ದಾರೆ.
ಇದನ್ನೂ ಓದಿ: ದೆಹಲಿ ಮದ್ಯ ನೀತಿ ಪ್ರಕರಣ, ಆರೋಪಪಟ್ಟಿಯಲ್ಲಿ ರಾಘವ್ ಚಡ್ಡಾ ಹೆಸರು
ಚಡ್ಡಾ ರಾಜ್ಯಸಭೆಯ ಕಿರಿಯ ಸದಸ್ಯರಲ್ಲಿ ಒಬ್ಬರು. ಪ್ರಸ್ತುತ ಮೇಲ್ಮನೆಯಲ್ಲಿ ಎಎಪಿ ಒಟ್ಟು 10 ಸಂಸದರನ್ನು ಹೊಂದಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಟಿಎಂಸಿ ನಂತರ ಎಎಪಿ ರಾಜ್ಯಸಭೆಯಲ್ಲಿ ನಾಲ್ಕನೇ ದೊಡ್ಡ ಪ್ರಬಲ ಪಕ್ಷವಾಗಿ ಹೊರಹೊಮ್ಮಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ