ಮತ್ತೊಂದು ರಾಜ್ಯದಲ್ಲಿ ಮುಂದಿನ ಮಾರ್ಚ್​​ 31ರವರೆಗೆ ಶಾಲೆಗಳು ಬಂದ್​!

ಕೊರೊನಾ ವೈರಸ್​​ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸಲು ಪಾಲಕರು ಹಿಂದೇಟು ಹಾಕುತ್ತಿದ್ದಾರೆ. ಶಾಲಾ-ಕಾಲೇಜು ಆರಂಭವಾದರೂ ಮಕ್ಕಳನ್ನು ಪಾಲಕರು ಕಳುಹಿಸುತ್ತಿಲ್ಲ

ಮತ್ತೊಂದು ರಾಜ್ಯದಲ್ಲಿ ಮುಂದಿನ ಮಾರ್ಚ್​​ 31ರವರೆಗೆ ಶಾಲೆಗಳು ಬಂದ್​!
6 ರಿಂದ 9ನೇ ತರಗತಿ ಸ್ಥಗಿತ
Follow us
TV9 Web
| Updated By: ganapathi bhat

Updated on:Apr 07, 2022 | 5:40 PM

ಭೋಪಾಲ್​: ಕೊರೊನಾ ವೈರಸ್​ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಅನೇಕ ರಾಜ್ಯಗಳು ಶಾಲಾ-ಕಾಲೇಜು ಆರಂಭ ದಿನಾಂಕವನ್ನು ಮುಂದೂಡುತ್ತಲೇ ಬಂದಿವೆ. ಈಗ ಮಧ್ಯಪ್ರದೇಶ ಸರ್ಕಾರ ಮಕ್ಕಳ ಹಿತದೃಷ್ಟಿಯಿಂದ ಶಾಲೆಗಳನ್ನು ಮುಂದಿನ ಮಾರ್ಚ್​​ 31ರವರೆಗೂ ತೆರೆಯದೇ ಇರಲು ನಿರ್ಧರಿಸಿದೆ.

ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​ ಈ ರೀತಿಯ ನಿರ್ಧಾರ ಕೈಗೊಂಡಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, “1 ರಿಂದ 8ನೇ ತರಗತಿಯವರಿಗೆ ಮಾರ್ಚ್​ವರೆಗೂ ಶಾಲೆ ಇರುವುದಿಲ್ಲ. ಅವರು ಸಿದ್ಧಪಡಿಸಿದ ಪ್ರಾಜೆಕ್ಟ್​​ಗಳ ಆಧಾರದ ಮೇಲೆ ಮಾರ್ಕ್ಸ್​​ ನೀಡಲಾಗುತ್ತದೆ,” ಎಂದಿದ್ದಾರೆ.

10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳಿಗೆ ಶೀಘ್ರವೇ ತರಗತಿಗಳು ಆರಂಭಗೊಳ್ಳಲಿವೆಯಂತೆ. ” 10 ಹಾಗೂ 12ನೇ ವರ್ಗದವರಿಗೆ ಶಾಲೆ ಆರಂಭಿಸುತ್ತೇವೆ. ಮಾರ್ಚ್​ ಅಥವಾ ಏಪ್ರಿಲ್​ನಲ್ಲಿ ಅವರಿಗೆ ಪರೀಕ್ಷೆ ನಡೆಯಲಿದೆ. ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಂಡು ಪರೀಕ್ಷೆ ಮಾಡಲು ನಿರ್ಧರಿಸಲಾಗಿದೆ. ಇನ್ನು, 9 ಹಾಗೂ 11ನೇ ವರ್ಗದವರಿಗೂ ತರಗತಿ ಇರಲಿದೆ. ಆದರೆ, ಅವರು ವಾರದಲ್ಲಿ ಒಂದು ಅಥವಾ ಎರಡು ದಿನ ಮಾತ್ರ ತರಗತಿಗೆ ಬಂದರೆ ಸಾಕು,” ಎಂದು ಚೌಹಾಣ್​ ತಿಳಿಸಿದ್ದಾರೆ.

ಕೊರೊನಾ ವೈರಸ್​​ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸಲು ಪಾಲಕರು ಹಿಂದೇಟು ಹಾಕುತ್ತಿದ್ದಾರೆ. ಶಾಲಾ-ಕಾಲೇಜು ಆರಂಭವಾದರೂ ಮಕ್ಕಳನ್ನು ಪಾಲಕರು ಕಳುಹಿಸುತ್ತಿಲ್ಲ. ಈ ಕಾರಣಕ್ಕೆ  ಶಾಲಾ ಕಾಲೇಜು ಆರಂಭ ದಿನಾಂಕವನ್ನು ಮಧ್ಯಪ್ರದೇಶ ಸರ್ಕಾರ ಮುಂದೂಡುತ್ತಲೇ ಬಂದಿತ್ತು. ಈಗ ಅದನ್ನು ಮಾರ್ಚ್​ವರೆಗೆ ಮುಂದೂಡುವ ಮೂಲಕ ಪಾಲಕರಿಗೆ ನೆಮ್ಮದಿ ನೀಡಿದೆ.

ಶಾಲಾ ಶುಲ್ಕ ಪಾವತಿಸದಿದ್ರೆ ಆನ್​ಲೈನ್ ಕ್ಲಾಸ್ ಬಂದ್ ಮಾಡ್ತೀವಿ.. ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಧಮ್ಕಿ

Published On - 2:50 pm, Sat, 5 December 20

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ