AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೆನಾಡು ಭಾಗದಲ್ಲಿ ಮಳೆ‌ ಹೆಚ್ಚಳ ಹಿನ್ನೆಲೆ ಚಿಕ್ಕಮಗಳೂರು, ಉಡುಪಿ ಡಿ.ಸಿ. ಜೊತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿಡಿಯೋ ಸಭೆ

ಎರಡು ಜಿಲ್ಲೆಗಳಲ್ಲಿ ಬೀಳುತ್ತಿರುವ ಮಳೆಯ ಪ್ರಮಾಣ, ಇದುವರೆಗೆ ಆಗಿರುವ ನಷ್ಟದ ವರದಿ ಪಡೆದಿದ್ದಾರೆ. ಅಲ್ಲದೆ ಮುಂದಿನ ಕೆಲವು ದಿನಗಳು ಮಳೆ ಆರ್ಭಟ ಮುಂದುವರೆಯುವ ಹಿನ್ನೆಲೆ ಮುಂಜಾಗೃತೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.‌

ಮಲೆನಾಡು ಭಾಗದಲ್ಲಿ ಮಳೆ‌ ಹೆಚ್ಚಳ ಹಿನ್ನೆಲೆ ಚಿಕ್ಕಮಗಳೂರು, ಉಡುಪಿ ಡಿ.ಸಿ. ಜೊತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿಡಿಯೋ ಸಭೆ
ದೆಹಲಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳೊಂದಿಗೆ ಸಚಿವೆ ಶೋಭಾ ಕರಂದ್ಲಾಜೆ ಸಭೆ
TV9 Web
| Edited By: |

Updated on:Jul 16, 2021 | 11:49 AM

Share

ದೆಹಲಿ: ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವರಾದ ಬಳಿಕ ಮೊದಲ ಬಾರಿಗೆ ಶೋಭಾ ಕರಂದ್ಲಾಜೆ ಸ್ವಕ್ಷೇತ್ರದ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆ ನಡೆಸಿದ್ದಾರೆ. ಇಂದು ಬೆಳಿಗ್ಗೆ 9 ಗಂಟೆಗೆ ತಮ್ಮ ದೆಹಲಿಯ ಕಛೇರಿ ಕೃಷಿ ಭವನಕ್ಕೆ ತೆರಳಿ ವಿಡಿಯೋ ಕಾನ್ಫೆರನ್ಸ್ ಮೂಲಕ ತಾವು ಸಂಸದರಾಗಿ ಪ್ರತಿನಿಧಿಸುವ ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಎರಡು ಜಿಲ್ಲೆಗಳಲ್ಲಿ ಬೀಳುತ್ತಿರುವ ಮಳೆಯ ಪ್ರಮಾಣ, ಇದುವರೆಗೆ ಆಗಿರುವ ನಷ್ಟದ ವರದಿ ಪಡೆದಿದ್ದಾರೆ. ಅಲ್ಲದೆ ಮುಂದಿನ ಕೆಲವು ದಿನಗಳು ಮಳೆ ಆರ್ಭಟ ಮುಂದುವರೆಯುವ ಹಿನ್ನೆಲೆ ಮುಂಜಾಗೃತೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.‌ ಮಳೆಯಿಂದ ಯಾವುದೇ ಹಾನಿ ಸಂಭವಿಸಿದರೂ ಕ್ಷಣ ಕ್ಷಣದ ಮಾಹಿತಿ ನೀಡಬೇಕು, ಜನರ ಕಷ್ಟಕ್ಕೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಅಧಿಕಾರಿಗಳಿಗೆ ಸಚಿವೆ ಸಚಿವೆ ಶೋಭಾ ಕರಂದ್ಲಾಜೆ ನಿರ್ದೇಶನ ನೀಡಿದ್ದಾರೆ.

ಬಳಿಕ ಮಾತನಾಡಿದ ಅವರು ಮಳೆಯಿಂದಾಗಲಿರುವ ಪೃಕತಿ ವಿಕೋಪಗಳ ಕುರಿತು, ಜಿಲ್ಲೆಯಲ್ಲಿನ ಕೊವಿಡ್ ನಿರ್ವಹಣೆ, ಮೂರನೇ ಅಲೆಗೆ ಜಿಲ್ಲೆ ನಡೆಸಿರುವ ತಯಾರಿಗಳು ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಚರ್ಚಿಸಿ ಮಾಹಿತಿ ಪಡೆದಿದ್ದಾರೆ.

Mp Shobha Karandlaje

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ

video conference

ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳೊಂದಿಗೆ ಸಭೆ

ಇದನ್ನೂ ಓದಿ: ಕೇಂದ್ರ ಸಚಿವೆಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿದ ಶೋಭಾ ಕರಂದ್ಲಾಜೆ

Karnataka Dams: ವಾಯುಭಾರ ಕುಸಿದು ಮಳೆ ಹೆಚ್ಚು, ಒಂದೊಂದೇ ಅಡಿ ನೀರಿನ ಮಟ್ಟ ಹೆಚ್ಚುತ್ತಿದೆ, 12 ಜಲಾಶಯ ನೀರಿನ ಮಟ್ಟ ಹೀಗಿದೆ

Published On - 11:01 am, Fri, 16 July 21

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?