ದೆಹಲಿ: ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವರಾದ ಬಳಿಕ ಮೊದಲ ಬಾರಿಗೆ ಶೋಭಾ ಕರಂದ್ಲಾಜೆ ಸ್ವಕ್ಷೇತ್ರದ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆ ನಡೆಸಿದ್ದಾರೆ. ಇಂದು ಬೆಳಿಗ್ಗೆ 9 ಗಂಟೆಗೆ ತಮ್ಮ ದೆಹಲಿಯ ಕಛೇರಿ ಕೃಷಿ ಭವನಕ್ಕೆ ತೆರಳಿ ವಿಡಿಯೋ ಕಾನ್ಫೆರನ್ಸ್ ಮೂಲಕ ತಾವು ಸಂಸದರಾಗಿ ಪ್ರತಿನಿಧಿಸುವ ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಬಗ್ಗೆ ಮಾಹಿತಿ ಪಡೆದಿದ್ದಾರೆ.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಎರಡು ಜಿಲ್ಲೆಗಳಲ್ಲಿ ಬೀಳುತ್ತಿರುವ ಮಳೆಯ ಪ್ರಮಾಣ, ಇದುವರೆಗೆ ಆಗಿರುವ ನಷ್ಟದ ವರದಿ ಪಡೆದಿದ್ದಾರೆ. ಅಲ್ಲದೆ ಮುಂದಿನ ಕೆಲವು ದಿನಗಳು ಮಳೆ ಆರ್ಭಟ ಮುಂದುವರೆಯುವ ಹಿನ್ನೆಲೆ ಮುಂಜಾಗೃತೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಳೆಯಿಂದ ಯಾವುದೇ ಹಾನಿ ಸಂಭವಿಸಿದರೂ ಕ್ಷಣ ಕ್ಷಣದ ಮಾಹಿತಿ ನೀಡಬೇಕು, ಜನರ ಕಷ್ಟಕ್ಕೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಅಧಿಕಾರಿಗಳಿಗೆ ಸಚಿವೆ ಸಚಿವೆ ಶೋಭಾ ಕರಂದ್ಲಾಜೆ ನಿರ್ದೇಶನ ನೀಡಿದ್ದಾರೆ.
ಬಳಿಕ ಮಾತನಾಡಿದ ಅವರು ಮಳೆಯಿಂದಾಗಲಿರುವ ಪೃಕತಿ ವಿಕೋಪಗಳ ಕುರಿತು, ಜಿಲ್ಲೆಯಲ್ಲಿನ ಕೊವಿಡ್ ನಿರ್ವಹಣೆ, ಮೂರನೇ ಅಲೆಗೆ ಜಿಲ್ಲೆ ನಡೆಸಿರುವ ತಯಾರಿಗಳು ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಚರ್ಚಿಸಿ ಮಾಹಿತಿ ಪಡೆದಿದ್ದಾರೆ.
ಇದನ್ನೂ ಓದಿ:
ಕೇಂದ್ರ ಸಚಿವೆಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿದ ಶೋಭಾ ಕರಂದ್ಲಾಜೆ
Published On - 11:01 am, Fri, 16 July 21