AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗನ ಆತ್ಮಹತ್ಯೆ ಸುದ್ದಿ ಕೇಳಿ ಹೃದಯಾಘಾತದಿಂದ ಪ್ರಾಣಬಿಟ್ಟ ಮಹಿಳೆ

ಮಗ ಆತ್ಮಹತ್ಯೆ ಮಾಡಿಕೊಂಡಿದ್ದನೆಂದು ತಿಳಿಯುತ್ತಿದ್ದಂತೆ ಆಘಾತಕ್ಕೊಳಗಾಗಿ ತಾಯಿ ಸಾವನ್ನಪ್ಪಿರುವ ಘಟನೆ ಗ್ವಾಲಿಯರ್​ನಲ್ಲಿ ನಡೆದಿದೆ. ನೌಕರಿ ಸಿಗಲಿಲ್ಲ ಎನ್ನುವ ಕಾರಣಕ್ಕೆ 33 ವರ್ಷದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸುದ್ದಿ ತಿಳಿಯುತ್ತಿದ್ದಂತೆ ತಾಯಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಗ್ವಾಲಿಯರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 33 ವರ್ಷದ ಎಂಜಿನಿಯರಿಂಗ್ ಪದವೀಧರ ಶನಿವಾರ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಗನ ಆತ್ಮಹತ್ಯೆ ಸುದ್ದಿ ಕೇಳಿ ಹೃದಯಾಘಾತದಿಂದ ಪ್ರಾಣಬಿಟ್ಟ ಮಹಿಳೆ
ಹೃದಯಾಘಾತ-ಸಾಂದರ್ಭಿಕ ಚಿತ್ರ Image Credit source: Family Heart Foundation
ನಯನಾ ರಾಜೀವ್
|

Updated on: Jan 20, 2025 | 10:16 AM

Share

ಸದಾ ಮಕ್ಕಳ ಶ್ರೇಯಸ್ಸು ಬಯಸುತ್ತಾ ಅವರ ಬೇಕು ಬೇಡಗಳನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಚಿಂತೆಯೂ ಕಾಡದಂತೆ ನೋಡಿಕೊಳ್ಳುವವಳು ತಾಯಿ. ಮಗನ ಆತ್ಮಹತ್ಯೆಯ ಸುದ್ದಿ ಕೇಳುತ್ತಿದ್ದಂತೆ ಆಘಾತಕ್ಕೊಳಗಾಗಿ ಹೃದಯಾಘಾತದಿಂದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಗ್ವಾಲಿಯರ್​ನಲ್ಲಿ ನಡೆದಿದೆ. ನೌಕರಿ ಸಿಗಲಿಲ್ಲ ಎನ್ನುವ ಕಾರಣಕ್ಕೆ 33 ವರ್ಷದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸುದ್ದಿ ತಿಳಿಯುತ್ತಿದ್ದಂತೆ ತಾಯಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗ್ವಾಲಿಯರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 33 ವರ್ಷದ ಎಂಜಿನಿಯರಿಂಗ್ ಪದವೀಧರ ಶನಿವಾರ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತನ ಸಹೋದರ ಶನಿವಾರ ರಾತ್ರಿ ಮದುವೆ ಸಮಾರಂಭದಲ್ಲಿದ್ದಾಗ ತನ್ನ ಕಿರಿಯ ಸಹೋದರ ವಿಷ ಸೇವಿಸಿದ ಬಗ್ಗೆ ತಂದೆಯಿಂದ ಕರೆ ಬಂದಿತ್ತು.ಮನೆಗೆ ತಲುಪಿದಾಗ ರೂಮಿನ ಒಳಗಂಡೆಯಿಂದ ಚಿಲಕ ಹಾಕಿತ್ತು.

ಅಕ್ಕಪಕ್ಕದ ಮನೆಯವರಿಗೆ ವಿಷಯ ತಿಳಿಸಿ ರೂಮಿಗೆ ನುಗ್ಗಿದಾಗ ಮನೀಶ್ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡಿತ್ತು ಎಂದು ಸಹೋದರ ಹೇಳಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರಿನಲ್ಲಿ ಕಾಲೇಜು ಕಟ್ಟಡದಿಂದ ಜಿಗಿದು ಏರೋಸ್ಪೇಸ್ ವಿದ್ಯಾರ್ಥಿ ಆತ್ಮಹತ್ಯೆ

ಸಂಬಂಧಿತ ಪರೀಕ್ಷೆಗಳಿಗೆ ಹಾಜರಾಗಿದ್ದರೂ ನೌಕರಿ ಪಡೆಯಲು ವಿಫಲನಾದ ಕಾರಣ ಆತ ಒತ್ತಡಕ್ಕೊಳಗಾಗಿದ್ದ. ಮೃತನ ತಾಯಿಗೆ ತನ್ನ ಮಗ ಆತ್ಮಹತ್ಯೆ ಮಾಡಿಕೊಂಡಿದ್ದು ತಿಳಿಯುತ್ತಿದ್ದಂತೆ ಆಘಾತ ಸಹಿಸಲಾಗದೆ ಸಾವನ್ನಪ್ಪಿದ್ದಾರೆ ಎಂದು ಸಹೋದರ ತಿಳಿಸಿದ್ದಾರೆ.

ಯುವಕ ಕಳೆದ ಕೆಲವು ವರ್ಷಗಳಿಂದ ಸರ್ಕಾರಿ ನೌಕರಿ ಪಡೆಯಲು ಸಾಕಷ್ಟು ಬಾರಿ ಪ್ರಯತ್ನ ಪಟ್ಟಿದ್ದ, ಆದರೆ ಪದೇ ಪದೇ ವಿಫಲವಾಗುತ್ತಿದ್ದ, ಇದು ಆತ ಈ ರೀತಿಯ ಹೆಜ್ಜೆ ಇಡುವಂತಾಯಿತು. ಮಗನ ಸಾವಿನ ಬಗ್ಗೆ ತಾಯಿಗೆ ತಿಳಿಸಿದಾಗ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್