AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ವಿಜಯ್ ಭೇಟಿ ಮಾಡಿದ MRF ಟೀಮ್: ದಳಪತಿಗೆ ಸಿಕ್ಕಿತು ಕಿಂಗ್ ಕೊಹ್ಲಿ ಸಹಿ ಮಾಡಿದ ರೇರ್ ಬ್ಯಾಟ್ ಗಿಫ್ಟ್!

ಭಾರತದ ಪ್ರಮುಖ ಟೈರ್ ಸಂಸ್ಥೆ MRF, ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ ಅವರನ್ನು ಭೇಟಿ ಮಾಡಿದೆ. ಈ ವೇಳೆ, ವಿರಾಟ್ ಕೊಹ್ಲಿ ಸಹಿ ಮಾಡಿದ ಕ್ರಿಕೆಟ್ ಬ್ಯಾಟ್ ಅನ್ನು ಸಿಎಂಗೆ ಉಡುಗೊರೆಯಾಗಿ ನೀಡಲಾಯಿತು. ರಾಜ್ಯದಲ್ಲಿ ಉದ್ಯಮ ಸ್ನೇಹಿ ವಾತಾವರಣ ಮತ್ತು ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿ ಕುರಿತು ಚರ್ಚಿಸಲಾಯಿತು. ಈ ಸುದ್ದಿ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕ್ರಿಕೆಟ್ ಹಾಗೂ ಸಿನಿಮಾ ಅಭಿಮಾನಿಗಳಿಂದ ಭಾರಿ ಮೆಚ್ಚುಗೆ ಗಳಿಸಿವೆ.

ಸಿಎಂ ವಿಜಯ್ ಭೇಟಿ ಮಾಡಿದ MRF ಟೀಮ್: ದಳಪತಿಗೆ ಸಿಕ್ಕಿತು ಕಿಂಗ್ ಕೊಹ್ಲಿ ಸಹಿ ಮಾಡಿದ ರೇರ್ ಬ್ಯಾಟ್ ಗಿಫ್ಟ್!
ಎಂಆರ್‌ಎಫ್ ಸಿಎಂ ವಿಜಯ್ ಭೇಟಿ
ಅಕ್ಷಯ್​ ಪಲ್ಲಮಜಲು​​
|

Updated on:May 22, 2026 | 4:41 PM

Share

ಚೆನ್ನೈ, ಮೇ,22: ತಮಿಳುನಾಡಿನ ನೂತನ ಮುಖ್ಯಮಂತ್ರಿ ವಿಜಯ್ ಅವರನ್ನು ಭಾರತದ ಮುಂಚೂಣಿಯ ಟೈರ್ ತಯಾರಿಕಾ ಸಂಸ್ಥೆಯಾದ ಎಂಆರ್‌ಎಫ್ (MRF) ತಂಡವು ಸೌಜನ್ಯಯುತವಾಗಿ ಭೇಟಿ ಮಾಡಿದೆ. ಈ ವಿಶೇಷ ಸಂದರ್ಭದಲ್ಲಿ ಎಂಆರ್‌ಎಫ್ ನಿಯೋಗವು ಮುಖ್ಯಮಂತ್ರಿ ವಿಜಯ್ ಅವರಿಗೆ ಭಾರತದ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಸಹಿ ಮಾಡಿರುವ ಕ್ರಿಕೆಟ್ ಬ್ಯಾಟ್ ಅನ್ನು ನೆನಪಿನ ಕಾಣಿಕೆಯಾಗಿ ನೀಡಿ ಗೌರವಿಸಿದೆ. ಈ ಬಗ್ಗೆ ಕ್​ರಿಕಟರ್ ಮುಫದ್ದಲ್ ವೋಹ್ರಾ ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

ಎಂಆರ್‌ಎಫ್ ಸಂಸ್ಥೆಯು ಜಾಗತಿಕ ಮಟ್ಟದಲ್ಲಿ ಕ್ರಿಕೆಟ್ ಹಾಗೂ ಕ್ರೀಡಾಪಟುಗಳಿಗೆ ನಿರಂತರ ಪ್ರೋತ್ಸಾಹ ನೀಡುತ್ತಾ ಬಂದಿದೆ. ಪ್ರಮುಖವಾಗಿ ವಿರಾಟ್ ಕೊಹ್ಲಿ ಅವರು ಕಳೆದ ಹಲವು ವರ್ಷಗಳಿಂದ ಎಂಆರ್‌ಎಫ್ ಬ್ರ್ಯಾಂಡ್ ರಾಯಭಾರಿಯಾಗಿದ್ದಾರೆ. ತಮಿಳುನಾಡಿನಲ್ಲಿ ಉದ್ಯಮ ಸ್ನೇಹಿ ವಾತಾವರಣ ಮತ್ತು ಕ್ರೀಡಾ ಮೂಲಸೌಕರ್ಯಗಳ ಅಭಿವೃದ್ಧಿ ಕುರಿತು ಚರ್ಚಿಸಲು ಸಿಎಂ ವಿಜಯ್ ಅವರ ಅಧಿಕೃತ ಕಚೇರಿಗೆ ಭೇಟಿ ನೀಡಿದ್ದ ಎಂಆರ್‌ಎಫ್ ಉನ್ನತ ಅಧಿಕಾರಿಗಳ ತಂಡ, ಕೊಹ್ಲಿ ಅವರ ಹಸ್ತಾಕ್ಷರವಿರುವ (Autographed Bat) ಬ್ಯಾಟ್ ಅನ್ನು ಸಿಎಂಗೆ ಹಸ್ತಾಂತರಿಸಿತು.

ಇದನ್ನೂ ಓದಿ: ತಮಿಳುನಾಡು ಹೊಸ ಸರ್ಕಾರಕ್ಕೆ ಆಪತ್ತು, ಸಿಎಂ ವಿಜಯ್ ಸರ್ಕಾರ ಅಲುಗಾಡಿಸಿದ ಸಿಪಿಐಎಂ, ಬೆಂಬಲ ವಾಪಸ್ ಬೆದರಿಕೆ

ಇಲ್ಲಿದೆ ನೋಡಿ ಎಕ್ಸ್​​ ಪೋಸ್ಟ್​​:

ದಳಪತಿ ವಿಜಯ್ ಅವರು ಎಂಆರ್‌ಎಫ್ ತಂಡದಿಂದ ಬ್ಯಾಟ್ ಸ್ವೀಕರಿಸುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ. ಕ್ರಿಕೆಟ್ ಪ್ರೇಮಿಗಳು ಹಾಗೂ ಸಿಎಂ ಅಭಿಮಾನಿಗಳು ಈ ಅಪರೂಪದ ಕ್ಷಣಕ್ಕೆ ಭಾರಿ ಲೈಕ್ಸ್ ಮತ್ತು ಕಮೆಂಟ್‌ಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ. ಹಲವು ಇದೊಂದು ಅದ್ಭುತ ಕ್ಷಣ ಎಂದು ಕಮೆಂಟ್ ಮಾಡಿದ್ದಾರೆ. ವಿಜಯ್​​ ಅಭಿಮಾನಿಗಳು ಹಾಗೂ ಕೊಹ್ಲಿ ಅಭಿಮಾನಿಗಳು ಈ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:26 pm, Fri, 22 May 26

Follow Us
ಬೆಂಗಳೂರಲ್ಲಿ ರ್‍ಯಾಪಿಡೋ ಚಾಲಕನ ಎಡವಟ್ಟಿನಿಂದ ಆಸ್ಪತ್ರೆ ಸೇರಿದ ಯುವತಿ
ಬೆಂಗಳೂರಲ್ಲಿ ರ್‍ಯಾಪಿಡೋ ಚಾಲಕನ ಎಡವಟ್ಟಿನಿಂದ ಆಸ್ಪತ್ರೆ ಸೇರಿದ ಯುವತಿ
ಈ ತಿಂಗಳ ಅಂತ್ಯದಲ್ಲಿ ಕ್ಯಾಬಿನೆಟ್ ವಿಸ್ತರಣೆ
ಈ ತಿಂಗಳ ಅಂತ್ಯದಲ್ಲಿ ಕ್ಯಾಬಿನೆಟ್ ವಿಸ್ತರಣೆ
ಗುಂಪು ಸೇರಿಸಿ SIR ಮಾಡ್ತಿರುವ ಸ್ಥಳಕ್ಕೆ ಮಾಜಿ ಸಂಸದರ ಸಪ್ರೈಸ್​​ ಎಂಟ್ರಿ!
ಗುಂಪು ಸೇರಿಸಿ SIR ಮಾಡ್ತಿರುವ ಸ್ಥಳಕ್ಕೆ ಮಾಜಿ ಸಂಸದರ ಸಪ್ರೈಸ್​​ ಎಂಟ್ರಿ!
ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ: ಸಚಿವ ಖಾದರ್​​
ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ: ಸಚಿವ ಖಾದರ್​​
ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ, ಬೆಳಗಾವಿಯಲ್ಲಿ ಪರಿಸ್ಥಿತಿ ಹೇಗಿದೆ?
ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ, ಬೆಳಗಾವಿಯಲ್ಲಿ ಪರಿಸ್ಥಿತಿ ಹೇಗಿದೆ?
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು HMT ವಾಚ್​ ತಯಾರಾಗುತ್ತೆ ಗೊತ್ತಾ?
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು HMT ವಾಚ್​ ತಯಾರಾಗುತ್ತೆ ಗೊತ್ತಾ?
ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ಅಕ್ರಮವಾಗಿ SIR: ಪ್ರಲ್ಹಾದ್ ಜೋಶಿ
ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ಅಕ್ರಮವಾಗಿ SIR: ಪ್ರಲ್ಹಾದ್ ಜೋಶಿ
ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ: ಪ್ರಿಯಾಂಕ್​​ 
ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ: ಪ್ರಿಯಾಂಕ್​​ 
ಮುಂದಿನ ತಿಂಗಳು ಪಿಎಸ್​ಐ, ಕಾನ್ಸ್​ಟೇಬಲ್​ ಹುದ್ದೆ ನೇಮಕಾತಿ ಅಧಿಸೂಚನೆ
ಮುಂದಿನ ತಿಂಗಳು ಪಿಎಸ್​ಐ, ಕಾನ್ಸ್​ಟೇಬಲ್​ ಹುದ್ದೆ ನೇಮಕಾತಿ ಅಧಿಸೂಚನೆ
'ಜನರ ಒಳ್ಳೆಯದಕ್ಕೆ ನಾನು ನಿಷ್ಠುರ ಆದರೂ ಪರವಾಗಿಲ್ಲ'
'ಜನರ ಒಳ್ಳೆಯದಕ್ಕೆ ನಾನು ನಿಷ್ಠುರ ಆದರೂ ಪರವಾಗಿಲ್ಲ'