ಭತ್ತ ಸೇರಿ ಬೇಸಿಗೆ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಶೇ 62ರಷ್ಟು ಹೆಚ್ಚಳ: ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ

ಸಾಮಾನ್ಯವಾಗಿ ಕೇಂದ್ರ ಸರ್ಕಾರವು ಪ್ರತಿ 2 ವರ್ಷಗಳಿಗೆ ಒಮ್ಮೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸುತ್ತದೆ. ಚಳಿಗಾಲದ ಬಿತ್ತನೆಗೂ ಮುನ್ನ ಮತ್ತು ಬೇಸಿಗೆ ಬೆಳೆಗಳ ಕೊಯ್ಲಿನ ಅವಧಿಯಲ್ಲಿ ಈ ಘೋಷಣೆ ಹೊರಬೀಳುವುದು ವಾಡಿಕೆ.

ಭತ್ತ ಸೇರಿ ಬೇಸಿಗೆ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಶೇ 62ರಷ್ಟು ಹೆಚ್ಚಳ: ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ
ಗ್ರಾಮೀಣ ಆರ್ಥಿಕತೆಯ ಜೀವನಾಡಿ ಕೃಷಿ (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 09, 2021 | 6:21 PM

ದೆಹಲಿ: ಬೇಸಿಗೆ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಶೇ 62ರಷ್ಟು ಹೆಚ್ಚಿಸುವ ಮಹತ್ವದ ನಿರ್ಧಾರವನ್ನು ಕೇಂದ್ರ ಸರ್ಕಾರ ಸಚಿವ ಸಂಪುಟ ಬುಧವಾರ ತೆಗೆದುಕೊಂಡಿದೆ. ಬೆಳೆ ಉತ್ಪಾದನೆಗೆ ಆಗಿರುವ ಖರ್ಚಿನ ಮೇಲೆ ಶೇ 50ರಷ್ಟು ಹೆಚ್ಚುವರಿ ದರ ಸಿಗುವಂತೆ ಮಾಡಬೇಕು ಎಂಬ ಕೇಂದ್ರದ ನಿರ್ಧಾರಕ್ಕೆ ಅನುಗುಣವಾಗಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೊಮಾರ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಸಾಮಾನ್ಯವಾಗಿ ಕೇಂದ್ರ ಸರ್ಕಾರವು ಪ್ರತಿ 2 ವರ್ಷಗಳಿಗೆ ಒಮ್ಮೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸುತ್ತದೆ. ಚಳಿಗಾಲದ ಬಿತ್ತನೆಗೂ ಮುನ್ನ ಮತ್ತು ಬೇಸಿಗೆ ಬೆಳೆಗಳ ಕೊಯ್ಲಿನ ಅವಧಿಯಲ್ಲಿ ಈ ಘೋಷಣೆ ಹೊರಬೀಳುವುದು ವಾಡಿಕೆ. ಖಾಸಗಿ ವ್ಯಾಪಾರಿಗಳಿಗೆ ಕನಿಷ್ಠ ಎಷ್ಟು ಬೆಲೆಗೆ ಬೆಳೆಗಳನ್ನು ಖರೀದಿಸಬೇಕು ಎಂಬ ಸೂಚನೆ ನೀಡಲು ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಘೋಷಿಸುತ್ತದೆ. ಸರ್ಕಾರಿ ಸ್ವಾಮ್ಯದ ಭಾರತೀಯ ಆಹಾರ ನಿಗಮದ ಮೂಲಕ ಭಾರಿ ಪ್ರಮಾಣದ ಆಹಾರ ಧಾನ್ಯಗಳನ್ನು ಕನಿಷ್ಠ ಬೆಂಬಲ ಬಲೆ ನೀಡಿ ಖರೀದಿಸುತ್ತದೆ. ಹೀಗೆ ಖರೀದಿಸಿದ ಧಾನ್ಯಗಳನ್ನು ಪಡಿತರ ವಿತರಣೆ ವ್ಯವಸ್ಥೆ ಮೂಲಕ ಸಾರ್ವಜನಿಕರಿಗೆ ತಲುಪಿಸಲಾಗುತ್ತಿದೆ.

ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಜಾರಿ ಮಾಡಿರುವ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಅವಿರತ ಹೋರಾಟಗಳ ಮಧ್ಯೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ.

ಪ್ರತಿಭಟನಾನಿರತ ರೈತರ ಜೊತೆಗಿನ ಮಾತುಕತೆಗೆ ಸರ್ಕಾರ ಈಗಲೂ ಸಿದ್ಧವಿದೆ. ಸಂಧಾನದ ಬಾಗಿಲನ್ನು ನಾವು ಮುಚ್ಚಿಲ್ಲ. ಈವರೆಗೆ 11 ಸುತ್ತುಗಳ ಮಾತುಕತೆ ನಡೆದಿದೆ. ಈ ಕಾನೂನುಗಳ ಬಗ್ಗೆ ರೈತರು ತಮ್ಮ ನಿರ್ದಿಷ್ಟ ಆಕ್ಷೇಪಗಳನ್ನು ತಿಳಿಸಬೇಕು. ಆದರೆ ಈವರೆಗೆ ವಿರೋಧಪಕ್ಷದ ನಾಯಕರಾಗಲಿ, ರೈತರಾಗಲಿ ನಿರ್ದಿಷ್ಟ ಅಂಶವನ್ನು ನಮ್ಮ ಮುಂದೆ ತಂದಿಲ್ಲ ಎಂದು ತೊಮಾರ್ ಹೇಳಿದರು.

ಭತ್ತದ ಬೆಂಬಲ ಬೆಲೆಯನ್ನು ಪ್ರತಿ ಕ್ವಿಂಟಲ್​ಗೆ ₹ 1869ರಿಂದ ₹ 1940ಕ್ಕೆ ಹೆಚ್ಚಿಸಲಾಗಿದೆ. ಜೋಳ ಮತ್ತು ಬಾಜ್ರಾ ಧಾರಣೆಯನ್ನು ₹118ರಷ್ಟು ಹೆಚ್ಚಿಸಲಾಗಿದೆ. ಈ ಹಿಂದೆ ಒಂದು ಕ್ವಿಂಟಲ್​ ಬಾಜ್ರಾಕ್ಕೆ ₹ 2,738 ದರವಿತ್ತು. ಈಗ ಇದನ್ನು ₹ 2,250ಕ್ಕೆ ಹೆಚ್ಚಿಸಲಾಗಿದೆ. ಕಾಳುಗಳ ಧಾರಣೆಯನ್ನು ₹300ಕ್ಕೆ ಹೆಚ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಒಂದು ಕ್ವಿಂಟಲ್ ದ್ವಿದಳ ಧಾನ್ಯಕ್ಕೆ ₹ 6300 ಧಾರಣೆ ಇರುತ್ತದೆ.

(MSP for Paddy and other crops increased Govt hikes Minimum Support Price for various kharif crops)

ಇದನ್ನೂ ಓದಿ: ಕನಿಷ್ಠ ಬೆಂಬಲ ಬೆಲೆ, ರೈತರ ಅನಿಶ್ಚಿತ ಆದಾಯ, ಎಪಿಎಂಸಿ ಬಗ್ಗೆ ಪ್ರಕಾಶ್ ಕಮ್ಮರಡಿ ಎಕ್ಸ್​ಕ್ಲೂಸಿವ್ ಸಂದರ್ಶನ

ಇದನ್ನೂ ಓದಿ: ಎಲ್ಲಿದೆ ಕನಿಷ್ಠ ಬೆಂಬಲ ಬೆಲೆ ಎಂದು ಅಂಕಿ-ಅಂಶಗಳ ಜತೆಗೆ ಸರ್ಕಾರದ ವಿರುದ್ಧ ಯೋಗೇಂದ್ರ ಯಾದವ್ ಕಿಡಿ

Published On - 6:20 pm, Wed, 9 June 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್