ಭಾರತದ ಅತ್ಯಂತ ಉದ್ದದ ಸಮುದ್ರ ಸೇತುವೆ ಉದ್ಘಾಟನೆಗೆ ಸಿದ್ಧ, ಈ ವಾಹನಗಳು ಓಡಾಡುವಂತಿಲ್ಲ

ಭಾರತದ ಅತಿ ಉದ್ದದ ಸಮುದ್ರ ಸೇತುವೆ ಸಿದ್ಧವಾಗಿದೆ, ಮುಂಬೈನಿಂದ ನವಿ ಮುಂಬೈಗೆ ಸಂಪರ್ಕ ಕಲ್ಪಿಸುವ ದೇಶದ ಅತಿ ದೊಡ್ಡ ಸಮುದ್ರ ಸೇತುವೆ ಉದ್ಘಾಟನೆಗೊಳ್ಳಲಿದ್ದು, ಇದೀಗ 22 ಕಿ.ಮೀ ಉದ್ದದ ಸೇತುವೆ ಮೂಲಕ ದಕ್ಷಿಣ ಮುಂಬೈನಿಂದ ನವಿ ಮುಂಬೈವರೆಗಿನ ದೂರವನ್ನು ಕ್ರಮಿಸಲು ಕೇವಲ 20 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ. ಆದರೆ ಭಾರತದ ಈ ಉದ್ದದ ಸಮುದ್ರ ಸೇತುವೆಯ ಮೇಲೆ ಎಲ್ಲಾ ವಾಹನಗಳು ಓಡಲು ಸಾಧ್ಯವಾಗುವುದಿಲ್ಲ, ಏಕೆಂದರೆ ಕೆಲವು ವಾಹನಗಳು ಅದರ ಮೇಲೆ ಓಡಲು ಅನುಮತಿ ಇಲ್ಲ.

ಭಾರತದ ಅತ್ಯಂತ ಉದ್ದದ ಸಮುದ್ರ ಸೇತುವೆ ಉದ್ಘಾಟನೆಗೆ ಸಿದ್ಧ, ಈ ವಾಹನಗಳು ಓಡಾಡುವಂತಿಲ್ಲ
ಸಮುದರ ಸೇತುವೆImage Credit source: Moneycontrol
Follow us
ನಯನಾ ರಾಜೀವ್
|

Updated on: Jan 11, 2024 | 8:40 AM

ಭಾರತದ ಅತಿ ಉದ್ದದ ಸಮುದ್ರ ಸೇತುವೆ ಸಿದ್ಧವಾಗಿದೆ, ಮುಂಬೈನಿಂದ ನವಿ ಮುಂಬೈಗೆ ಸಂಪರ್ಕ ಕಲ್ಪಿಸುವ ದೇಶದ ಅತಿ ದೊಡ್ಡ ಸಮುದ್ರ ಸೇತುವೆ ಉದ್ಘಾಟನೆಗೊಳ್ಳಲಿದ್ದು, ಇದೀಗ 22 ಕಿ.ಮೀ ಉದ್ದದ ಸೇತುವೆ ಮೂಲಕ ದಕ್ಷಿಣ ಮುಂಬೈನಿಂದ ನವಿ ಮುಂಬೈವರೆಗಿನ ದೂರವನ್ನು ಕ್ರಮಿಸಲು ಕೇವಲ 20 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ. ಆದರೆ ಭಾರತದ ಈ ಉದ್ದದ ಸಮುದ್ರ ಸೇತುವೆಯ ಮೇಲೆ ಎಲ್ಲಾ ವಾಹನಗಳು ಓಡಲು ಸಾಧ್ಯವಾಗುವುದಿಲ್ಲ, ಏಕೆಂದರೆ ಕೆಲವು ವಾಹನಗಳು ಅದರ ಮೇಲೆ ಓಡಲು ಅನುಮತಿ ಇಲ್ಲ.

ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ (MTHL) ನಲ್ಲಿ ನಾಲ್ಕು ಚಕ್ರಗಳ ಗರಿಷ್ಠ ವೇಗದ ಮಿತಿ ಗಂಟೆಗೆ 100 ಕಿಲೋಮೀಟರ್ ಆಗಿರುತ್ತದೆ ಮತ್ತು ಮೋಟಾರು ಬೈಕುಗಳು, ಆಟೋರಿಕ್ಷಾಗಳು ಮತ್ತು ಟ್ರಾಕ್ಟರ್‌ಗಳು ಸಮುದ್ರ ಸೇತುವೆಯ ಮೇಲೆ ಸಂಚರಿಸಲು ಅನುಮತಿ ನೀಡುವುದಿಲ್ಲ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರಿನಲ್ಲಿ ಅಟಲ್ ಸೇತು ಎಂದೂ ಕರೆಯಲ್ಪಡುವ MTHL ಅನ್ನು ಜನವರಿ 12 ರಂದು ಪ್ರಧಾನಿ ನರೇಂದ್ರ ಮೋದಿ  ಉದ್ಘಾಟಿಸಲಿದ್ದಾರೆ.

ಮತ್ತಷ್ಟು ಓದಿ: ಕಬ್ಬಿಣದ ಸೇತುವೆ ಕದ್ದಾಯ್ತು, ರೈಲ್ವೆ ಎಂಜಿನ್ ಮಾಯವಾಯ್ತು ಈಗ ರಾತ್ರೋ ರಾತ್ರಿ ಕೊಳ ಕೂಡ ನಾಪತ್ತೆ

ಈ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್‌ನಲ್ಲಿ ಕಾರುಗಳು, ಟ್ಯಾಕ್ಸಿಗಳು, ಲಘು ಮೋಟಾರು ವಾಹನಗಳು, ಮಿನಿಬಸ್‌ಗಳು ಮತ್ತು ಎರಡು ಆಕ್ಸಲ್ ಬಸ್‌ಗಳಂತಹ ವಾಹನಗಳ ವೇಗದ ಮಿತಿ ಗಂಟೆಗೆ 100 ಕಿಲೋಮೀಟರ್ ಆಗಿರುತ್ತದೆ. ಸೇತುವೆ ಹತ್ತುವ ಮತ್ತು ಇಳಿಯುವಾಗ ವಾಹನಗಳ ವೇಗದ ಮಿತಿಯನ್ನು ಗಂಟೆಗೆ 40 ಕಿ.ಮೀ.ಗೆ ಸೀಮಿತಗೊಳಿಸಲಾಗುವುದು ಎಂದು ಹೇಳಿದರು.

ಸಾರ್ವಜನಿಕರಿಗೆ ಯಾವುದೇ ಅನಾನುಕೂಲತೆಯನ್ನು ತಪ್ಪಿಸಲು ಮತ್ತು ಸಂಭವನೀಯ ಅಪಾಯ ಮತ್ತು ಅಡೆತಡೆಗಳನ್ನು ತಡೆಗಟ್ಟಲು ಮುಂಬೈ ಪೊಲೀಸರು ಭಾರತದ ಅತಿ ಉದ್ದದ ಸಮುದ್ರ ಸೇತುವೆಯ ಮೇಲೆ ವೇಗದ ಮಿತಿಯನ್ನು ವಿಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

18,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ ಮುಂಬೈನ ಸೆವ್ರಿಯಿಂದ ಪ್ರಾರಂಭವಾಗಿ ರಾಯಗಡ ಜಿಲ್ಲೆಯ ಉರಾನ್ ತಾಲ್ಲೂಕಿನ ನ್ಹವಾ ಶೇವಾದಲ್ಲಿ ಕೊನೆಗೊಳ್ಳುತ್ತದೆ. ಮುಂಬೈ ಮತ್ತು ನವಿ ಮುಂಬೈ ನಡುವಿನ ಅಂತರವನ್ನು ಕೇವಲ 20 ನಿಮಿಷಗಳಲ್ಲಿ ಕ್ರಮಿಸಲಾಗುವುದು, ಈ ಮೊದಲು 2 ಗಂಟೆಗಳನ್ನು ತೆಗೆದುಕೊಳ್ಳುತ್ತಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ