ಮೂಡ್ನಾಕೂಡು ಚಿನ್ನಸ್ವಾಮಿ, ಪದ್ಮರಾಜ ದಂಡಾವತಿ ಅವರ ಕೃತಿಗಳಿಗೆ ಒಲಿದು ಬಂತು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಕನ್ನಡದ ಪ್ರಮುಖ ಲೇಖಕರಾದ ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಅವರ ‘ಬಹುತ್ವದ ಭಾರತ ಮತ್ತು ಬೌದ್ಧ ತಾತ್ತ್ವಿಕತೆ’ ಕೃತಿಯು ಈ ವರ್ಷದ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾಗಿದೆ. ಅನುವಾದ ಪ್ರಶಸ್ತಿಗೆ ಪದ್ಮರಾಜ ದಂಡಾವತಿ ಅವರು ಅನುವಾದಿಸಿದ ‘ಸೀತಾ: ರಾಮಾಯಣದ ಸಚಿತ್ರ ಮರುಕಥನ’ ಕೃತಿ ಆಯ್ಕೆಯಾಗಿದೆ.

ಮೂಡ್ನಾಕೂಡು ಚಿನ್ನಸ್ವಾಮಿ, ಪದ್ಮರಾಜ ದಂಡಾವತಿ ಅವರ ಕೃತಿಗಳಿಗೆ ಒಲಿದು ಬಂತು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಪದ್ಮರಾಜ ದಂಡಾವತಿ, ಮೂಡ್ನಾಕೂಡು ಚಿನ್ನಸ್ವಾಮಿ
Follow us
TV9 Web
| Updated By: ಆಯೇಷಾ ಬಾನು

Updated on:Dec 22, 2022 | 1:47 PM

ದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿಯು (Kendra Sahitya Akademi) ವಿವಿಧ ಪ್ರಕಾರದ ಸಾಹಿತ್ಯ ಕೃತಿಗಳಿಗೆ ಪ್ರಶಸ್ತಿಗಳನ್ನು (Award) ಘೋಷಿಸಿದೆ. ಈ ಪೈಕಿ ಕನ್ನಡದ ಪ್ರಮುಖ ಲೇಖಕರಾದ ಡಾ. ಮೂಡ್ನಾಕೂಡು ಚಿನ್ನಸ್ವಾಮಿ (Mudnakudu Chinnaswamy) ಅವರ ಬಹುತ್ವದ ಭಾರತ ಮತ್ತು ಬೌದ್ಧ ತಾತ್ತ್ವಿಕತೆ ಎಂಬ ಕೃತಿಗೆ ಈ ವರ್ಷದ ಪುಸ್ತಕ ಪ್ರಶಸ್ತಿ ಲಭಿಸಿದೆ. ಅನುವಾದ ಪ್ರಶಸ್ತಿಗೆ ಪದ್ಮರಾಜ ದಂಡಾವತಿ (Padmaraj Dandavati) ಅವರು ಅನುವಾದಿಸಿದ ಸೀತಾ: ರಾಮಾಯಣದ ಸಚಿತ್ರ ಮರುಕಥನ ಕೃತಿ ಆಯ್ಕೆಯಾಗಿದೆ.

ಮುಖ್ಯ ಪ್ರಶಸ್ತಿಯು ಒಂದು ಲಕ್ಷ ರೂ. ಹಾಗೂ ಸನ್ಮಾನ ಒಳಗೊಂಡಿದ್ದರೆ, ಅನುವಾದ ಪ್ರಶಸ್ತಿ 50 ಸಾವಿರ ರೂ ಹಾಗೂ ಸನ್ಮಾನಗಳು ಒಳಗೊಂಡಿದೆ.

mudnakudu chinnaswamy and padmaraja dandavati got kendra sahitya akademi award

‘ಬಹುತ್ವದ ಭಾರತ ಮತ್ತು ಬೌದ್ಧ ತಾತ್ತ್ವಿಕತೆ’ ಕೃತಿಯು ವಿವಿಧ ಪ್ರಬಂಧಗಳ ಸಂಕಲನವಾಗಿದ್ದು ಇದನ್ನು ಗದಗದ ಲಡಾಯಿ ಪ್ರಕಾಶನವು ಪ್ರಕಟಿಸಿದೆ. ಪದ್ಮರಾಜ ದಂಡಾವತಿ ಅವರು ದೇವದತ್ತ ಪಟ್ಟನಾಯಕ ಅವರ ‘ಸೀತಾ’ ಕೃತಿಯನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ಅನುವಾದಿಸಿದ್ದು ಧಾರವಾಡದ ಮನೋಹರ ಗ್ರಂಥಮಾಲೆಯು ಈ ಕೃತಿಯನ್ನು ಪ್ರಕಟಿಸಿದೆ.

ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ವಿಭಾಗದ ಸಂಚಾಲಕರಾಗಿರುವ ಡಾ. ಸರಜೂ ಕಾಟ್ಕರ್ ಅವರ ಉಸ್ತುವಾರಿಯಲ್ಲಿ ಈ ಪ್ರಶಸ್ತಿ ಆಯ್ಕೆಯು ನಡೆಯಿತು. ಅನುವಾದ ಆಯ್ಕೆ ಸಮಿತಿಯ ಜ್ಯೂರಿಗಳಾಗಿ ಜಗದೀಶ್ ಕೊಪ್ಪ, ಕಮಲಾಕರ ಭಟ್ಟ ಹಾಗೂ ಮೋಹನ್ ಕುಂಟಾರ ಕೆಲಸ ನಿರ್ವಹಿಸಿದ್ದರೆ ಮುಖ್ಯ ಪ್ರಶಸ್ತಿ ಆಯ್ಕೆ ಸಮಿತಿಗೆ ಡಾ.ಸಿ ನಾಗಣ್ಣ, ಪದ್ಮರಾಜ ದಂಡಾವತಿ ಹಾಗೂ ಚಂದ್ರಶೇಖರ ವಸ್ತ್ರದ ಅವರು ಜ್ಯೂರಿಗಳಾಗಿದ್ದರು.

ಪ್ರಶಸ್ತಿಗಳನ್ನು 2023 ಮಾರ್ಚ್ ತಿಂಗಳಲ್ಲಿ ದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ ವಿಜೇತರರನ್ನು ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಚಂದ್ರಶೇಖರ ಕಂಬಾರ ಅವರು ಅಭಿನಂದಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:42 pm, Thu, 22 December 22

BPL ಕಾರ್ಡ್ ರದ್ದಾದ್ರೆ ಗೃಹಲಕ್ಷ್ಮಿ ಹಣ ಬರಲ್ವಾ? ಸಚಿವೆ ಹೇಳಿದ್ದೇನು?
BPL ಕಾರ್ಡ್ ರದ್ದಾದ್ರೆ ಗೃಹಲಕ್ಷ್ಮಿ ಹಣ ಬರಲ್ವಾ? ಸಚಿವೆ ಹೇಳಿದ್ದೇನು?
ಕೊಡೊ ಕಾಟಕ್ಕೆ ತಾಯ್ತ ಕಟ್ಟಿಸ್ಕೋಬೇಕು: ನಗುತ್ತಲೇ ಎಚ್ಚರಿಕೆ ಕೊಟ್ಟ ರಜತ್
ಕೊಡೊ ಕಾಟಕ್ಕೆ ತಾಯ್ತ ಕಟ್ಟಿಸ್ಕೋಬೇಕು: ನಗುತ್ತಲೇ ಎಚ್ಚರಿಕೆ ಕೊಟ್ಟ ರಜತ್
ಅತೃಪ್ತ ಶಾಸಕರಿಗೆ ಅನುದಾನ ನೀಡಲು ಬಿಪಿಎಲ್ ಕಾರ್ಡ್ ರದ್ದು: ಅಶೋಕ
ಅತೃಪ್ತ ಶಾಸಕರಿಗೆ ಅನುದಾನ ನೀಡಲು ಬಿಪಿಎಲ್ ಕಾರ್ಡ್ ರದ್ದು: ಅಶೋಕ
ದೆಹಲಿ: ನಂದಿನಿ ಉತ್ಪನ್ನಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಸಿಎಂ
ದೆಹಲಿ: ನಂದಿನಿ ಉತ್ಪನ್ನಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಸಿಎಂ
ಬಿಪಿಎಲ್ ಕಾರ್ಡ್ ರದ್ದಾಗಿರುವ ಬಗ್ಗೆ ಯಾವುದೇ ನೋಟೀಸ್ ನೀಡದ ಇಲಾಖೆ
ಬಿಪಿಎಲ್ ಕಾರ್ಡ್ ರದ್ದಾಗಿರುವ ಬಗ್ಗೆ ಯಾವುದೇ ನೋಟೀಸ್ ನೀಡದ ಇಲಾಖೆ
ರಸ್ತೆ ಬದಿ ವಾಲಿದ ​ವಿಕ್ರಂಗೌಡ ಮೃತದೇಹ ಸಾಗಿಸುತ್ತಿದ್ದ ಆ್ಯಂಬುಲೆನ್ಸ್
ರಸ್ತೆ ಬದಿ ವಾಲಿದ ​ವಿಕ್ರಂಗೌಡ ಮೃತದೇಹ ಸಾಗಿಸುತ್ತಿದ್ದ ಆ್ಯಂಬುಲೆನ್ಸ್
ಮುಖ್ಯಮಂತ್ರಿಯವರು ಜಾತಿಗಣತಿ ವರದಿಯ ಅಧ್ಯಯನ ಮಾಡುತ್ತಿದ್ದಾರೆ: ಪರಮೇಶ್ವರ್
ಮುಖ್ಯಮಂತ್ರಿಯವರು ಜಾತಿಗಣತಿ ವರದಿಯ ಅಧ್ಯಯನ ಮಾಡುತ್ತಿದ್ದಾರೆ: ಪರಮೇಶ್ವರ್
ಮಹಿಳಾ ಪ್ರಯಾಣಿಕರಿಂದ ತುಂಬಿದ ಬಸ್: ಮೂಡಿಗೆರೆಯಲ್ಲಿ ವಿದ್ಯಾರ್ಥಿಗಳ ಪರದಾಟ
ಮಹಿಳಾ ಪ್ರಯಾಣಿಕರಿಂದ ತುಂಬಿದ ಬಸ್: ಮೂಡಿಗೆರೆಯಲ್ಲಿ ವಿದ್ಯಾರ್ಥಿಗಳ ಪರದಾಟ
ಚಿಕ್ಕಂದಿನಲ್ಲಿ ಅಪ್ಪನ ಕಳೆದುಕೊಂಡಿದ್ದ ವಿಕ್ರಂಗೌಡ ತಂಗಿಯ ಮದುವೆ ಮಾಡಿಸಿದ್ದ
ಚಿಕ್ಕಂದಿನಲ್ಲಿ ಅಪ್ಪನ ಕಳೆದುಕೊಂಡಿದ್ದ ವಿಕ್ರಂಗೌಡ ತಂಗಿಯ ಮದುವೆ ಮಾಡಿಸಿದ್ದ
ಶೋರೂಮಲ್ಲಿದ್ದ ಬ್ಯಾಟರಿಗಳು ಸ್ಪೋಟಗೊಂಡ ಕಾರಣ ಹೆಚ್ಚಿದ ಬೆಂಕಿ ಪ್ರಮಾಣ
ಶೋರೂಮಲ್ಲಿದ್ದ ಬ್ಯಾಟರಿಗಳು ಸ್ಪೋಟಗೊಂಡ ಕಾರಣ ಹೆಚ್ಚಿದ ಬೆಂಕಿ ಪ್ರಮಾಣ