ಅಂಬಾನಿ ಮನೆ ಮುಂದೆ ಕಾರಿನಲ್ಲಿ ಜಿಲೆಟಿನ್ ಪ್ರಕರಣ; ಶವವಾಗಿ ಪತ್ತೆಯಾದ ಮನಸುಖ್ ಹಿರೇನ್

Mukesh Ambani: ಸ್ಫೋಟಕವಿರಿಸಿದ್ದ ಎಸ್​ಯುವಿ ಕಾರಿನ ಹಿಂದೆ ತನ್ನ ಕೈವಾಡವಿದೆಯೆಂದು ಜೈಶ್-ಉಲ್-ಹಿಂದ್ ಸಂಘಟನೆ ಹೇಳಿಕೊಂಡಿದೆ. ಕಾರಿನೊಳಗೆ 20 ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಅಂಬಾನಿ ಕುಟುಂಬಕ್ಕೆ ಬೆದರಿಕೆಯೊಡ್ಡಿರುವ ಪತ್ರವೂ ಇತ್ತು. ಟೆಲಿಗ್ರಾಂ ಆ್ಯಪ್​ನಲ್ಲಿ ಸಂದೇಶ ಕಳುಹಿಸುವ ಮೂಲಕ ಈ ಕೃತ್ಯದ ಹೊಣೆಯನ್ನು ಜೈಶ್ ಉಲ್ ಹಿಂದ್ ಹೊತ್ತಿತ್ತು.

ಅಂಬಾನಿ ಮನೆ ಮುಂದೆ ಕಾರಿನಲ್ಲಿ ಜಿಲೆಟಿನ್ ಪ್ರಕರಣ; ಶವವಾಗಿ ಪತ್ತೆಯಾದ ಮನಸುಖ್ ಹಿರೇನ್
ಮನಸುಖ್ ಹಿರೇನ್.
Follow us
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Mar 05, 2021 | 7:28 PM

ಮುಂಬೈ: ಮುಕೇಶ್ ಅಂಬಾನಿ ಅವರ ನಿವಾಸದ ಬಳಿ ಜಿಲೆಟಿನ್ ಕಡ್ಡಿಗಳನ್ನು ಇರಿಸಿದ ಮಹೇಂದ್ರಾ ಸ್ಕಾರ್ಪಿಯೋ ಕಾರನ್ನು ನಿರ್ವಹಿಸುತ್ತಿದ್ದ ಮನಸುಖ್ ಹಿರೇನ್ ಅವರ ಮೃತದೇಹ ಪತ್ತೆಯಾಗಿದೆ. ಮುಂಬೈ ಪೊಲೀಸರು ಮನಸುಖ್ ಹಿರೇನ್ ಅವರ ಮೃತದೇಹವನ್ನು ಪತ್ತೆಹಚ್ಚಿದ್ದು, ಕೆಲ ದಿನಗಳಿಂದ ಮನಸುಖ್ ಹಿರೇನ್ ನಾಪತ್ತೆಯಾಗಿದ್ದರು ಎಂದು ಅವರ ಸಂಬಂಧಿಕರೋರ್ವರು ಪ್ರಕರಣ ದಾಖಲಿಸಿದ್ದರು. ಸ್ಫೋಟಕ ತುಂಬಿದ್ದ ಕಾರು ಮಾಲೀಕ ಶವವಾಗಿ ಪತ್ತೆ ಹಿನ್ನೆಲೆ ಪ್ರಕರಣದ ತನಿಖೆ ಎನ್‌ಐಎಗೆ ವಹಿಸಲು ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಆಗ್ರಹಿಸಿದ್ದಾರೆ. 

ಕಾರಿನ ನೈಜ ಮಾಲೀಕ ಸ್ಯಾಮ್ ಮ್ಯೂಟನ್ , ಮನಸುಖ್ ಹಿರೇನ್ ಅವರಿಗೆ ಕಾರಿನ  ನಿರ್ವಹಣೆಗಾಗಿ ಕಾರನ್ನು ನೀಡಿದ್ದರು. ಆದರೆ ಸ್ಯಾಮ್ ಮ್ಯೂಟನ್, ನೀಡಬೇಕಿದ್ದ ಹಣವನ್ನು ಪಾವತಿಸದಿದ್ದ ಕಾರಣ ಮನಸುಖ್ ಹಿರೇನ್ ಅವರೇ ಕಾರನ್ನು ಇಟ್ಟುಕೊಮಡಿದ್ದರು ಎಂದು ತಿಳಿದುಬಂದಿದೆ.

ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಕಾರಿನಲ್ಲಿ ಜಿಲೆಟಿನ್ ಕಡ್ಡಿಗಳ ಜತೆ ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿಯವರಿಗೆ ಬೆದರಿಕೆಯೊಡ್ಡಿರುವ ಪತ್ರವೊಂದು ಲಭಿಸಿತ್ತು. ಈ ಕಾರಿನಲ್ಲಿ ಸ್ಫೋಟಕವನ್ನು ಅಸೆಂಬಲ್ ಮಾಡಿಲ್ಲ, ಮುಂದಿನ ಬಾರಿ ಇದೇ ರೀತಿಯಲ್ಲಿರುವುದಿಲ್ಲ ಎಂದು ಪತ್ರದಲ್ಲಿ ಬರೆದಿತ್ತು. ಈ ಪತ್ರ ಹಿಂದಿಯಿಂದ ಇಂಗ್ಲಿಷಿಗೆ ತರ್ಜುಮೆ ಮಾಡಿ ಬರೆದದ್ದಾಗಿದ್ದು, ಹಲವಾರು ಅಕ್ಷರ ದೋಷಗಳಿದ್ದವು. ಪತ್ರವನ್ನು ನೋಡಿದರೆ ಪತ್ರ ಬರೆದ ವ್ಯಕ್ತಿಗೆ ಸರಿಯಾಗಿ ಬರೆಯಲು ಬರುವುದಿಲ್ಲ ಅಥವಾ ಬರೆಯಲು ಗೊತ್ತಿಲ್ಲ ಎಂಬಂತೆ ನಟಿಸಿದ್ದಾಗಿರಬಹುದು ಎಂದು ಮುಂಬೈ ಪೊಲೀಸರು ಹೇಳಿರುವುದಾಗಿ ವರದಿಯಾಗಿತ್ತು.

ಗಾಂದೇವಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವಾಹನ ಪತ್ತೆಯಾಗಿತ್ತು. ಪೊಲೀಸರಿಗೆ ಮಾಹಿತಿ ಲಭಿಸಿದ ಕೂಡಲೇ ಬಾಂಬ್ ಪತ್ತೆ ಹಾಗೂ ನಿಷ್ಕ್ರಿಯ ದಳ ಮತ್ತು ಇತರ ಪೊಲೀಸ್ ತಂಡಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದವು. ಕಾರನ್ನು ತಪಾಸಣೆಗೊಳಪಡಿಸಿದಾಗ ಅದರೊಳಗೆ ಜಿಲೆಟಿನ್ ಪತ್ತೆಯಾಗಿದೆ. ಅದು ಬಿಡಿ ಬಿಡಿಯಾಗಿಯೇ ಇದ್ದುಸ್ಫೋಟಕವನ್ನು ಸಿದ್ಧಪಡಿಸಿರಲಿಲ್ಲ. ಈ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಮುಂಬೈ ಪೊಲೀಸ್ ವಕ್ತಾರ, ಉಪ ಪೊಲೀಸ್ ಆಯುಕ್ತ ಚೈತನ್ಯ. ಎಸ್ ಹೇಳಿದ್ದರು.

ಹೊಣೆ ಹೊತ್ತಿತ್ತು ಜೈಶ್ ಉಲ್ ಹಿಂದ್ ಸ್ಫೋಟಕವಿರಿಸಿದ್ದ ಎಸ್​ಯುವಿ ಕಾರಿನ ಹಿಂದೆ ತನ್ನ ಕೈವಾಡವಿದೆಯೆಂದು ಜೈಶ್-ಉಲ್-ಹಿಂದ್ ಸಂಘಟನೆ ಹೇಳಿಕೊಂಡಿದೆ. ಕಾರಿನೊಳಗೆ 20 ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಅಂಬಾನಿ ಕುಟುಂಬಕ್ಕೆ ಬೆದರಿಕೆಯೊಡ್ಡಿರುವ ಪತ್ರವೂ ಇತ್ತು. ಟೆಲಿಗ್ರಾಂ ಆ್ಯಪ್​ನಲ್ಲಿ ಸಂದೇಶ ಕಳುಹಿಸುವ ಮೂಲಕ ಈ ಕೃತ್ಯದ ಹೊಣೆಯನ್ನು ಜೈಶ್ ಉಲ್ ಹಿಂದ್ ಹೊತ್ತಿತ್ತು.

ಉದ್ಯಮಿ ಮುಕೇಶ್ ಅಂಬಾನಿ ಅವರಿಂದ ಬಿಟ್​ಕಾಯಿನ್ ಮೂಲಕ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಜೈಶ್-ಉಲ್-ಹಿಂದ್, ದೆಹಲಿಯ ಇಸ್ರೇಲ್ ರಾಯಭಾರ ಕಚೇರಿಯ ಬಳಿ ನಡೆದಿದ್ದ ಸ್ಫೋಟದ ಹಿಂದಿನ ಕೈಗಳನ್ನು ಪತ್ತೆಹಚ್ಚಲು ಸಾಧ್ಯವಾಗದೇ ಇರುವುದರ ಕುರಿತು ತನಿಖಾ ಸಂಸ್ಥೆಗಳಿಗೆ ಸವಾಲು ಎಸೆದಿತ್ತು. ರಾಷ್ಟ್ರೀಯ ತನಿಖಾ ದಳ (National Investigation Agency) ಇಸ್ರೇಲಿ ಗುಪ್ತದಳ ಜತೆ ಕೈಜೋಡಿಸಿ ರಾಯಭಾರ ಕಚೇರಿ ಬಳಿಯ ಸ್ಫೋಟದ ಕುರಿತು ತನಿಖೆ ನಡೆಸಿದರೂ ಕೃತ್ಯದ ಮೂಲವನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ ಎಂದು ಜೈಶ್-ಉಲ್-ಹಿಂದ್ ಸಂಘಟನೆ ಸವಾಲೆಸೆದಿತ್ತು.

ಇದನ್ನೂ ಓದಿ: ಅಂಬಾನಿ ಕುಟುಂಬಕ್ಕೆ ಬೆದರಿಕೆ ಪ್ರಕರಣ: ಸ್ಫೋಟಕವಿರಿಸಿದ್ದ ಎಸ್​ಯುವಿ ಕಾರಿನ ಮಾಲೀಕ ಪತ್ತೆ

Mukesh Ambani | ಮುಕೇಶ್ ಅಂಬಾನಿ ನಿವಾಸದ ಬಳಿ ಕಾರಿನಲ್ಲಿ ಜಿಲೆಟಿನ್ ಕಡ್ಡಿಗಳು​ ಪತ್ತೆ

Published On - 6:47 pm, Fri, 5 March 21

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್