ಮುಲಾಯಂ ಸಿಂಗ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ, ಜೀವ ರಕ್ಷಕ ಔಷಧಿ ನೀಡಲಾಗುತ್ತಿದೆ: ಮೇದಾಂತ ಆಸ್ಪತ್ರೆ

| Updated By: ರಶ್ಮಿ ಕಲ್ಲಕಟ್ಟ

Updated on: Oct 09, 2022 | 5:50 PM

ಮಾಜಿ ಯುಪಿ ಸಿಎಂ ಮತ್ತು ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಗಂಭೀರವಾಗಿದೆ. ಜೀವರಕ್ಷಕ ಔಷಧಿ ನೀಡಲಾಗುತ್ತಿದೆ. ಆಸ್ಪತ್ರೆಯ ಐಸಿಯುನಲ್ಲಿ...

ಮುಲಾಯಂ ಸಿಂಗ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ, ಜೀವ ರಕ್ಷಕ ಔಷಧಿ ನೀಡಲಾಗುತ್ತಿದೆ: ಮೇದಾಂತ ಆಸ್ಪತ್ರೆ
ಮುಲಾಯಂ ಸಿಂಗ್ ಯಾದವ್
Follow us on

ದೆಹಲಿ: ಸಮಾಜವಾದಿ ಪಕ್ಷದ (Samajwadi Party) ಸಂಸ್ಥಾಪಕ ಮತ್ತು ಉತ್ತರ ಪ್ರದೇಶದ (Uttar Pradesh) ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ (Mulayam Singh Yadav) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರಿಗೆ ಜೀವರಕ್ಷಕ ಔಷಧಿಗಳನ್ನು ನೀಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ವೈದ್ಯರು ಭಾನುವಾರ ತಿಳಿಸಿದ್ದಾರೆ. ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಸಂಜೀವ್ ಗುಪ್ತಾ ಅವರು ಆರೋಗ್ಯದ ಕುರಿತು ಮಾಹಿತಿ ನೀಡುತ್ತಾ ಸಮಗ್ರ ತಜ್ಞರ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದಿದ್ದಾರೆ. ಈ ಬುಲೆಟಿನ್ ಅನ್ನು ಸಮಾಜವಾದಿ ಪಕ್ಷ ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದೆ. ಮುಲಾಯಂ ಯಾದವ್ (82) ಆಗಸ್ಟ್ 22 ರಿಂದ ಮೇದಾಂತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಈ ಹಿಂದೆ ಜುಲೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಮೂಲಗಳು ತಿಳಿಸಿವೆ.


ಮುಲಾಯಂ ಸಿಂಗ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿರುವ ಬಗ್ಗೆ ಸಮಾಜವಾದಿ ಪಕ್ಷ ಭಾನುವಾರ ಮಾಹಿತಿ ನೀಡಿದ ನಂತರ, ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಅವರು ಅಖಿಲೇಶ್ ಅವರಿಗೆ ಕರೆ ಮಾಡಿ ಅಪ್ಪ ಮುಲಾಯಂ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಮೂಲಗಳ ಪ್ರಕಾರ, ಪ್ರಧಾನಿ ಮೋದಿ, ಮುಲಾಯಂ ಅವರಿಗೆ ಸಾಧ್ಯವಿರುವ ಎಲ್ಲ ನೆರವು ಮತ್ತು ಸಹಾಯವನ್ನು ಭರವಸೆ ನೀಡಿದ್ದಾರೆ.