AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಲಾಯಂ ಸಿಂಗ್ ಯಾದವ್ ಕಿರಿಯ ಪುತ್ರ ಪ್ರತೀಕ್ ಯಾದವ್ ಹೃದಯಾಘಾತದಿಂದ ನಿಧನ

ಮುಲಾಯಂ ಸಿಂಗ್ ಯಾದವ್ ಅವರ ಕೊನೆಯ ಮಗ ಪ್ರತೀಕ್ ಯಾದವ್ ತಮ್ಮ 38ನೇ ವಯಸ್ಸಿನಲ್ಲಿ ಸಾವನ್ನಪ್ಪಿದ್ದಾರೆ. ಮುಲಾಯಂ ಸಿಂಗ್ ಅವರ ಮಗನ ಸಾವಿಗೆ ಹೃದಯಾಘಾತವೇ ಕಾರಣ ಎಂದು ಮರಣೋತ್ತರ ಪರೀಕ್ಷೆಯ ವರದಿ ಬಹಿರಂಗಪಡಿಸಿದೆ. ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಪುತ್ರ ಪ್ರತೀಕ್ ಯಾದವ್ ಅವರ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಹೃದಯಾಘಾತವೇ ಅವರ ಸಾವಿಗೆ ಕಾರಣ ಎಂದು ಬಯಲಾಗಿದೆ.

ಮುಲಾಯಂ ಸಿಂಗ್ ಯಾದವ್ ಕಿರಿಯ ಪುತ್ರ ಪ್ರತೀಕ್ ಯಾದವ್ ಹೃದಯಾಘಾತದಿಂದ ನಿಧನ
Prateek Yadav With Mulayam Singh YadavImage Credit source: x
ಸುಷ್ಮಾ ಚಕ್ರೆ
|

Updated on:May 13, 2026 | 5:45 PM

Share

ನವದೆಹಲಿ, ಮೇ 13: ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಮಗ ಪ್ರತೀಕ್ ಯಾದವ್ (Prateek Yadav) ಇಂದು ಮೃತಪಟ್ಟಿದ್ದಾರೆ. ಅವರಿಗೆ ಕೇವಲ 38 ವರ್ಷವಾಗಿತ್ತು. ಅವರ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಅವರ ದೇಹದಲ್ಲಿ ರಕ್ತ ಹೆಪ್ಪುಗಟ್ಟಿರುವುದು ಕಂಡುಬಂದಿದೆ. ಪ್ರಾಥಮಿಕ ವರದಿಗಳ ಪ್ರಕಾರ, ರಕ್ತ ಹೆಪ್ಪುಗಟ್ಟುವಿಕೆಯು ದೇಹದ ಕೆಳಗಿನ ಭಾಗದಿಂದ ಮೇಲ್ಭಾಗಕ್ಕೆ ಸಾಗಿ, ಶ್ವಾಸಕೋಶಗಳಲ್ಲಿ ತೊಂದರೆಗೆ ಕಾರಣವಾಯಿತು. ಇದರಿಂದಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

38 ವರ್ಷದ ಪ್ರತೀಕ್ ಯಾದವ್ ಲಕ್ನೋದಲ್ಲಿ ನಿಧನರಾದರು. ಅವರನ್ನು ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರನ್ನು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ನಂತರ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು. ಪ್ರತೀಕ್ ಯಾದವ್ ಅಖಿಲೇಶ್ ಯಾದವ್ ಅವರ ಮಲಸಹೋದರ ಮತ್ತು ಅಪರ್ಣಾ ಯಾದವ್ ಅವರ ಪತಿ. ಅವರ ಮರಣದ ಸಮಯದಲ್ಲಿ ಅಪರ್ಣಾ ಯಾದವ್ ದೆಹಲಿಯಲ್ಲಿದ್ದರು. ಈ ಸುದ್ದಿ ತಿಳಿದ ನಂತರ ಲಕ್ನೋಗೆ ತೆರಳಿದ್ದರು.

ಇದನ್ನೂ ಓದಿ: Mulayam Singh Yadav Obituary: ಶಿಕ್ಷಕ, ಕುಸ್ತಿಪಟು, ರಾಜಕಾರಣಿ; ಮುಲಾಯಂ ಸಿಂಗ್ ಯಾದವ್ ನಡೆದುಬಂದ ಹಾದಿ ಸುಲಭದ್ದಾಗಿರಲಿಲ್ಲ!

ಪ್ರತೀಕ್ ಅವರ ಮೃತದೇಹವನ್ನು ಆಸ್ಪತ್ರೆಯಿಂದ ಅವರ ನಿವಾಸಕ್ಕೆ ತರಲಾಯಿತು. ಅಲ್ಲಿ ಕುಟುಂಬ ಸದಸ್ಯರು, ಸಂಬಂಧಿಕರು ಮತ್ತು ಸಮಾಜವಾದಿ ಪಕ್ಷದ ಹಿರಿಯ ನಾಯಕರು ಅಂತಿಮ ನಮನ ಸಲ್ಲಿಸಲು ಸೇರಿದ್ದರು. ಕುಟುಂಬದ ಮೂಲಗಳ ಪ್ರಕಾರ, ಪ್ರತೀಕ್ ಯಾದವ್ ಅವರ ಅಂತ್ಯಕ್ರಿಯೆ ಗುರುವಾರ ಲಕ್ನೋದ ಪಿಪ್ರಾ ಘಾಟ್‌ನಲ್ಲಿ ನಡೆಯಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:44 pm, Wed, 13 May 26

Follow Us
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ