ಮುಂಬೈನ ಬಾಂದ್ರಾ ವರ್ಲಿ ಸೀ ಲಿಂಕ್ನಲ್ಲಿ ಕಾರುಗಳ ಸರಣಿ ಅಪಘಾತ, 3 ಮಂದಿ ಸಾವು 7ಕ್ಕೂ ಅಧಿಕ ಮಂದಿಗೆ ಗಾಯ
ಮುಂಬೈನ ಬಾಂದ್ರಾ ವರ್ಲಿ ಸೀ ಲಿಂಕ್ನಲ್ಲಿ ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 3 ಮಂದಿ ಸಾವನ್ನಪ್ಪಿದ್ದು, 7ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮುಂಬೈನ ಬಾಂದ್ರಾ ವರ್ಲಿ ಸೀ ಲಿಂಕ್ನಲ್ಲಿ ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 3 ಮಂದಿ ಸಾವನ್ನಪ್ಪಿದ್ದು, 7ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಟೋಲ್ಬೂತ್ನಲ್ಲಿ ನಿಲ್ಲಿಸಿದ್ದ ಎರಡು ವಾಹನಗಳಿಗೆ ಹಿಂದಿನಿಂದ ವೇಗವಾಗಿ ಕಾರು ಬಂದು ಡಿಕ್ಕಿ ಹೊಡೆದಿದೆ. ಈ ಅಪಘಾತವು ಎಷ್ಟು ಭೀಕರವಾಗಿತ್ತೆಂದರೆ ಮನುಷ್ಯರ ಜತೆ ವಾಹನ ಕೂಡ ಛಿದ್ರವಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಡಿಕ್ಕಿ ಹೊಡೆದ ಇನ್ನೋವಾ ವರ್ಲಿಗೆ ಕಡೆಗೆ ವೇಗವಾಗಿ ಬರುತ್ತಿತ್ತು, ಚಾಲಕ ಸಿ-ಲಿಂಕ್ ಮಧ್ಯದಲ್ಲಿ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಪೆಟ್ಟು ಬಿದ್ದಾಗ ಬಾಂದ್ರಾ ಕಡೆಗೆ ಓಡಿ ಹೋಗಲು ಪ್ರಯತ್ನಿಸಿದ್ದಾರೆ. ಆಗ ಮತ್ತೊಂದಷ್ಟು ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ, ಆರೋಪಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮತ್ತಷ್ಟು ಓದಿ: ಲಾರಿ ಡಿಕ್ಕಿಯಾಗಿ ಇಬ್ಬರು ಸಾವು: ಪ್ರತಿಭಟನೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದವರು ಮಸಣ ಸೇರಿದರು!
ಈ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ, ಮೃತರಲ್ಲಿ ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷ ಸೇರಿದ್ದಾರೆ. ಈ ಅಪಘಾತದಲ್ಲಿ ಚಾಲಕ ಕೂಡ ಗಾಯಗೊಂಡಿದ್ದಾರೆ.
#WATCH | Maharashtra | Around 12 people injured after a speeding car collided with a total of 6 vehicles parked at the toll plaza in the Bandra direction. The speeding car was coming from Worli towards Bandra. 3 of the injured are in serious condition: Mumbai Police
(Warning:… pic.twitter.com/3ijVwEls71
— ANI (@ANI) November 9, 2023
ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಡಿಸ್ಚಾರ್ಜ್ ಆದ ನಂತರ ಚಾಲಕನನ್ನು ಬಂಧಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವರಲ್ಲಿ 2 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ, ಮುಂಬೈ ಪೊಲೀಸರ ಪ್ರಕಾರ, ವರ್ಲಿಯಿಂದ ಬಾಂದ್ರಾ ಕಡೆಗೆ ವೇಗವಾಗಿ ಬಂದ ಕಾರು ಟೋಲ್ ಪ್ಲಾಜಾ ಬಳಿ ನಿಂತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಅದರಲ್ಲಿ ಪ್ರಯಾಣಿಸುತ್ತಿದ್ದ ಹಲವರಿಗೆ ಗಂಭೀರ ಗಾಯಗಳಾಗಿವೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ