ಮುಂಬೈನ ಬಾಂದ್ರಾ ವರ್ಲಿ ಸೀ ಲಿಂಕ್​ನಲ್ಲಿ ಕಾರುಗಳ ಸರಣಿ ಅಪಘಾತ, 3 ಮಂದಿ ಸಾವು 7ಕ್ಕೂ ಅಧಿಕ ಮಂದಿಗೆ ಗಾಯ

ಮುಂಬೈನ ಬಾಂದ್ರಾ ವರ್ಲಿ ಸೀ ಲಿಂಕ್​ನಲ್ಲಿ ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 3 ಮಂದಿ ಸಾವನ್ನಪ್ಪಿದ್ದು, 7ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮುಂಬೈನ ಬಾಂದ್ರಾ ವರ್ಲಿ ಸೀ ಲಿಂಕ್​ನಲ್ಲಿ ಕಾರುಗಳ ಸರಣಿ ಅಪಘಾತ, 3 ಮಂದಿ ಸಾವು 7ಕ್ಕೂ ಅಧಿಕ ಮಂದಿಗೆ ಗಾಯ
ಕಾರು ಅಪಘಾತ
Image Credit source: Jagaran.com

Updated on: Nov 10, 2023 | 7:59 AM

ಮುಂಬೈನ ಬಾಂದ್ರಾ ವರ್ಲಿ ಸೀ ಲಿಂಕ್​ನಲ್ಲಿ ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 3 ಮಂದಿ ಸಾವನ್ನಪ್ಪಿದ್ದು, 7ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಟೋಲ್​ಬೂತ್​ನಲ್ಲಿ ನಿಲ್ಲಿಸಿದ್ದ ಎರಡು ವಾಹನಗಳಿಗೆ ಹಿಂದಿನಿಂದ ವೇಗವಾಗಿ ಕಾರು ಬಂದು ಡಿಕ್ಕಿ ಹೊಡೆದಿದೆ. ಈ ಅಪಘಾತವು ಎಷ್ಟು ಭೀಕರವಾಗಿತ್ತೆಂದರೆ ಮನುಷ್ಯರ ಜತೆ ವಾಹನ ಕೂಡ ಛಿದ್ರವಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಡಿಕ್ಕಿ ಹೊಡೆದ ಇನ್ನೋವಾ ವರ್ಲಿಗೆ ಕಡೆಗೆ ವೇಗವಾಗಿ ಬರುತ್ತಿತ್ತು, ಚಾಲಕ ಸಿ-ಲಿಂಕ್ ಮಧ್ಯದಲ್ಲಿ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಪೆಟ್ಟು ಬಿದ್ದಾಗ ಬಾಂದ್ರಾ ಕಡೆಗೆ ಓಡಿ ಹೋಗಲು ಪ್ರಯತ್ನಿಸಿದ್ದಾರೆ. ಆಗ ಮತ್ತೊಂದಷ್ಟು ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ, ಆರೋಪಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮತ್ತಷ್ಟು ಓದಿ: ಲಾರಿ ಡಿಕ್ಕಿಯಾಗಿ ಇಬ್ಬರು ಸಾವು: ಪ್ರತಿಭಟನೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದವರು ಮಸಣ ಸೇರಿದರು!

ಈ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ, ಮೃತರಲ್ಲಿ ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷ ಸೇರಿದ್ದಾರೆ. ಈ ಅಪಘಾತದಲ್ಲಿ ಚಾಲಕ ಕೂಡ ಗಾಯಗೊಂಡಿದ್ದಾರೆ.

ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಡಿಸ್ಚಾರ್ಜ್​ ಆದ ನಂತರ ಚಾಲಕನನ್ನು ಬಂಧಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡವರಲ್ಲಿ 2 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ, ಮುಂಬೈ ಪೊಲೀಸರ ಪ್ರಕಾರ, ವರ್ಲಿಯಿಂದ ಬಾಂದ್ರಾ ಕಡೆಗೆ ವೇಗವಾಗಿ ಬಂದ ಕಾರು ಟೋಲ್ ಪ್ಲಾಜಾ ಬಳಿ ನಿಂತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಅದರಲ್ಲಿ ಪ್ರಯಾಣಿಸುತ್ತಿದ್ದ ಹಲವರಿಗೆ ಗಂಭೀರ ಗಾಯಗಳಾಗಿವೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us