Video: ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಟ್ರಕ್ ಬ್ರೇಕ್ ಫೇಲ್; 12 ಕಾರುಗಳಿಗೆ ಡಿಕ್ಕಿ

ಮಹಾರಾಷ್ಟ್ರದ ಖೋಪೋಲಿ ಬಳಿ ನಡೆದ ಈ ಅಪಘಾತದಲ್ಲಿ ಸುಮಾರು ಏಳೆಂಟು ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದವು. ರಸ್ತೆಯಲ್ಲಿ ಧ್ವಂಸಗೊಂಡ ಕಾರುಗಳು, ಗಾಯಗೊಂಡವರು ಆಂಬುಲೆನ್ಸ್ ಒಳಗೆ ಕುಳಿತಿರುವ ವಿಡಿಯೊವನ್ನು ಎಎನ್ಐ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ.

Video: ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಟ್ರಕ್ ಬ್ರೇಕ್ ಫೇಲ್; 12 ಕಾರುಗಳಿಗೆ ಡಿಕ್ಕಿ
ರಸ್ತೆ ಅಪಘಾತ

Updated on: Apr 27, 2023 | 6:52 PM

ಮುಂಬೈ: ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ (Mumbai-Pune Expressway) ಗುರುವಾರ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಬ್ರೇಕ್ ಫೇಲ್ ಆದ ನಂತರ ಟ್ರಕ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದರಿಂದ ಅಪಘಾತ (Road Accident) ಸಂಭವಿಸಿದ್ದು ಟ್ರಕ್ ಕನಿಷ್ಠ 12 ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಮಹಾರಾಷ್ಟ್ರದ ಖೋಪೋಲಿ ಬಳಿ ನಡೆದ ಈ ಅಪಘಾತದಲ್ಲಿ ಸುಮಾರು ಏಳೆಂಟು ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದವು. ರಸ್ತೆಯಲ್ಲಿ ಧ್ವಂಸಗೊಂಡ ಕಾರುಗಳು, ಗಾಯಗೊಂಡವರು ಆಂಬುಲೆನ್ಸ್ ಒಳಗೆ ಕುಳಿತಿರುವ ವಿಡಿಯೊವನ್ನು ಎಎನ್ಐ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ.

ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ಇನ್ನೂ ವರದಿಯಾಗಿಲ್ಲ. ಯಾರಿಗೂ ಹೆಚ್ಚಿನ ಗಾಯಗಳಾಗಿಲ್ಲ.


ಈ ತಿಂಗಳ ಆರಂಭದಲ್ಲಿ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದು ನಾಲ್ಕು ಜನರು ಸಾವನ್ನಪ್ಪಿದರು.

ಪ್ರಾಥಮಿಕವಾಗಿ, ಕಾರು ವೇಗವಾಗಿ ಬಂದಂತೆ ತೋರುತ್ತಿದೆ. ಅದು ಮೊದಲು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ನಂತರ ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:51 pm, Thu, 27 April 23