AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಮುಂದುವರೆದ ಬಾಂಬ್ ಬೆದರಿಕೆ ಕರೆ: 8 ತಿಂಗಳಲ್ಲಿ 150ಕ್ಕೂ ಹೆಚ್ಚು ಶಾಲಾ-ಕಾಲೇಜುಗಳಿಗೆ ಬೆದರಿಕೆ ಸಂದೇಶ

ಇತ್ತೀಚೆಗೆ ದೆಹಲಿಯ ಶಾಲೆ ಕಾಲೇಜುಗಳಿಗೆ ಸರಣಿ ಬಾಂಬ್ ಬೆದರಿಕೆ ಹೆಚ್ಚಾಗಿದೆ. ಇದೀಗ ಶನಿವಾರದಂದು ದೆಹಲಿಯ ಹಲವು ಶಾಲೆಗಳಿಗೆ ದುಷ್ಕರ್ಮಿಗಳಿಂದ ಇ-ಮೇಲ್ ಮೂಲಕ​ ಬಾಂಬ್​ ಬೆದರಿಕೆ ಸಂದೇಶ ರವಾನಿಸಲಾಗಿದೆ. ಕಳೆದ 8 ತಿಂಗಳಲ್ಲಿ 150ಕ್ಕೂ ಹೆಚ್ಚು ಶಾಲಾ-ಕಾಲೇಜುಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿವೆ.

ದೆಹಲಿಯಲ್ಲಿ ಮುಂದುವರೆದ ಬಾಂಬ್ ಬೆದರಿಕೆ ಕರೆ: 8 ತಿಂಗಳಲ್ಲಿ 150ಕ್ಕೂ ಹೆಚ್ಚು ಶಾಲಾ-ಕಾಲೇಜುಗಳಿಗೆ ಬೆದರಿಕೆ ಸಂದೇಶ
ದೆಹಲಿಯ ಶಾಲೆ
ಗಂಗಾಧರ​ ಬ. ಸಾಬೋಜಿ
|

Updated on: Sep 20, 2025 | 10:17 AM

Share

ದೆಹಲಿ, ಸೆಪ್ಟೆಂಬರ್ 20: ದೆಹಲಿಯಲ್ಲಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ (Bomb threat) ಮುಂದುವರೆದಿದೆ. ದ್ವಾರಕ ಡಿಪಿಎಸ್ ಸೇರಿದಂತೆ ಹಲವು ಶಾಲೆಗಳಿಗೆ ದುಷ್ಕರ್ಮಿಗಳಿಂದ ಇ-ಮೇಲ್ ಮೂಲಕ​ ಬಾಂಬ್​ ಬೆದರಿಕೆ ಸಂದೇಶ ರವಾನಿಸಲಾಗಿದೆ. ಬಾಂಬ್ ಬೆದರಿಕೆ ಬೆನ್ನಲ್ಲೇ ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಸ್ಥಳಾಂತರ ಮಾಡಲಾಗಿದೆ. ಶಾಲೆಗಳಲ್ಲಿ ಬಾಂಬ್ ಪತ್ತೆ ದಳ ಹಾಗೂ ಶ್ವಾನ ದಳದಿಂದ ಪರಿಶೀಲನೆ ಮಾಡಲಾಗುತ್ತಿದೆ.

ಡಿಪಿಎಸ್​ ದ್ವಾರಕಾ ಹಾಗೂ ನಜಾಫ್ ಗಡ, ದೆಹಲಿ ಪಬ್ಲಿಕ್ ಸ್ಕೂಲ್, ಕೃಷ್ಣ ಮಾಡೆಲ್ ಪಬ್ಲಿಕ್ ಸ್ಕೂಲ್ ಹಾಗೂ ಸರ್ವೋದಯ ವಿದ್ಯಾಲಯ ಸೇರಿ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಪರೀಕ್ಷೆಗಳ ಸಮಯದಲ್ಲಿ ಬಾಂಬ್ ಬೆದರಿಕೆ ಕರೆ ಹಲವು ಅನುಮಾನಗಳಿಗೂ ಕಾರಣವಾಗಿದೆ.

ಕಳೆದ 8 ತಿಂಗಳಲ್ಲಿ 150ಕ್ಕೂ ಹೆಚ್ಚು ಬಾಂಬ್ ಬೆದರಿಕೆ ಕರೆ 

ದೆಹಲಿಯ ಶಾಲೆಗಳಿಗೆ ಸರಣಿ ಬಾಂಬ್ ಬೆದರಿಕೆಗಳು ಬರುತ್ತಿವೆ. ಕಳೆದ 8 ತಿಂಗಳಲ್ಲಿ 150ಕ್ಕೂ ಹೆಚ್ಚು ಶಾಲಾ-ಕಾಲೇಜುಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿವೆ. ಸದ್ಯ ದೆಹಲಿ ಪೊಲೀಸರಿಗೆ ಈ ಬಾಂಬ್ ಬೆದರಿಕೆ ಸಂದೇಶಗಳು ತಲೆನೋವಾಗಿ ಪರಿಣಮಿಸಿದೆ.

ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಿಷ್ಟು

ಈ ವಿಚಾರವಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ನಾವು ಕ್ಯಾಂಪಸ್​ನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದ್ದೇವೆ. ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ. ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯ ತಾಜ್ ಪ್ಯಾಲೇಸ್ ಹೋಟೆಲ್‌ಗೆ ಬಾಂಬ್ ಬೆದರಿಕೆ; ಪೊಲೀಸರಿಂದ ಬಿಗಿ ಭದ್ರತೆ

ಇನ್ನು ಇತ್ತೀಚೆಗೆ ದೆಹಲಿ ಹೈಕೋರ್ಟ್​ಗೆ ಬಾಂಬ್ ಬೆದರಿಕೆ ಬಂದಿತ್ತು. ಕೋರ್ಟ್‌ಗೆ ಈ ಮೇಲ್ ಮೂಲಕ ಬಂದ ಬಾಂಬ್ ಬೆದರಿಕೆ ಕೆಲಕಾಲ ತಲ್ಲಣವನ್ನುಂಟು ಮಾಡಿತ್ತು. ವಿಷಯ ತಿಳಿಯುತ್ತಿದ್ದಂತೆ ಕೋರ್ಟ್‌ನಿಂದ ಎಲ್ಲರನ್ನು ತೆರವುಗೊಳಿಸಲಾಗಿತ್ತು. ಬಾಂಬ್ ನಿಷ್ಕ್ರಿಯ ದಳ, ಪೊಲೀಸರು, ಶ್ವಾನ ದಳ ಸ್ಥಳಕ್ಕೆ ದಾಡಾಯಿಸಿದ್ದವು. ಭದ್ರತಾ ಸಿಬ್ಬಂದಿ ಇಡೀ ಕೋರ್ಟ್‌ ಆವರಣ ಸುತ್ತುವರಿದಿದ್ದರು.

ಕೋರ್ಟ್‌ನಲ್ಲಿದ್ದ ವಕೀಲರು ಆತಂಕದಿಂದಲೇ ಹೊರ ಬಂದರು. ಬಾಂಬ್ ನಿಷ್ಕ್ರಿಯ ದಳ, ಪೊಲೀಸರು, ಶ್ವಾನ ದಳ ಕೋರ್ಟ್‌ನಲ್ಲಿ ಶೋಧ ನಡೆಸಿದರು ಯಾವುದೇ ಸ್ಫೋಟಕ ಪತ್ತೆಯಾಗಲಿಲ್ಲ. ಇದರಿಂದ ವಕೀಲರು ನಿಟ್ಟಿಸಿರು ಬಿಟ್ಟಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?