AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai 1992 Riots: 1992ರ ಗಲಭೆ ಪ್ರಕರಣ; 18 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

1992ರ ಗಲಭೆಯ ಸಂದರ್ಭದಲ್ಲಿ ಕಾನೂನುಬಾಹಿರ ಸಭೆ, ಗಲಾಟೆ, ಕೊಲೆ ಯತ್ನ ಮತ್ತು ಸರ್ಕಾರಿ ನೌಕರನ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ದಿಂಡೋಶಿ ಪೊಲೀಸರು ಚಾರ್ಜ್ ಶೀಟ್ ಮಾಡಿದ 9 ಜನರಲ್ಲಿ ತಬ್ರೇಜ್ ಖಾನ್ ಕೂಡ ಒಬ್ಬನಾಗಿದ್ದ.

Mumbai 1992 Riots: 1992ರ ಗಲಭೆ ಪ್ರಕರಣ; 18 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ
ಆರೋಪಿ ತಬ್ರೇಜ್ ಖಾನ್Image Credit source: Republic World
TV9 Web
| Updated By: ಸುಷ್ಮಾ ಚಕ್ರೆ|

Updated on: Dec 12, 2022 | 11:11 AM

Share

ಮುಂಬೈ: ಮುಂಬೈನಲ್ಲಿ (Mumbai Riots) 1992ರಲ್ಲಿ ನಡೆದ ಗಲಭೆಗೆ ಸಂಬಂಧಿಸಿದ ದಂಗೆ (1992 Riots) ಮತ್ತು ಕೊಲೆ ಯತ್ನ ಪ್ರಕರಣದಲ್ಲಿ 2004ರಿಂದ ತಲೆಮರೆಸಿಕೊಂಡಿದ್ದ ಆರೋಪಿ ತಬ್ರೇಜ್ ಖಾನ್​​ನನ್ನು ಪೊಲೀಸರು ಬಂಧಿಸಿದ್ದಾರೆ. 2004ರಲ್ಲಿ ಜಾಮೀನು ಪಡೆದಿದ್ದ 47 ವರ್ಷದ ತಬ್ರೇಜ್ ಖಾನ್ ಅದಾದ ಬಳಿಕ ನಾಪತ್ತೆಯಾಗಿದ್ದ. ಆತನನ್ನು 18 ವರ್ಷಗಳ ಬಳಿಕ ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ.

1992ರ ಗಲಭೆಯ ಸಂದರ್ಭದಲ್ಲಿ ಕಾನೂನುಬಾಹಿರ ಸಭೆ, ಗಲಾಟೆ, ಕೊಲೆ ಯತ್ನ ಮತ್ತು ಸರ್ಕಾರಿ ನೌಕರನ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ದಿಂಡೋಶಿ ಪೊಲೀಸರು ಚಾರ್ಜ್ ಶೀಟ್ ಮಾಡಿದ 9 ಜನರಲ್ಲಿ ತಬ್ರೇಜ್ ಖಾನ್ ಕೂಡ ಒಬ್ಬನಾಗಿದ್ದ. ಆ 9 ಆರೋಪಿಗಳ ಪೈಕಿ ಇಬ್ಬರನ್ನು ಖುಲಾಸೆಗೊಳಿಸಲಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: 26/11 Mumbai Attack: ಮುಂಬೈ ದಾಳಿಯನ್ನು ಮರೆತಿಲ್ಲ, ಮರೆಯುವುದೂ ಇಲ್ಲ; ಉಗ್ರರಿಗೆ ಕೇಂದ್ರ ಸಚಿವರಿಂದ ಖಡಕ್ ಸಂದೇಶ

ತಬ್ರೇಜ್ ಖಾನ್​ಗೆ ಇತರ ಆರೋಪಿಗಳೊಂದಿಗೆ ಆಗ ಜಾಮೀನು ನೀಡಲಾಯಿತು. ಆದರೆ ಆತ ಜಾಮೀನು ಪಡೆದು ಪರಾರಿಯಾಗಿದ್ದ. ಸೆಷನ್ಸ್ ನ್ಯಾಯಾಲಯವು ಆತ ತಲೆಮರೆಸಿಕೊಂಡಿದ್ದಾನೆ ಎಂದು ಘೋಷಿಸಿತ್ತು. 2014ರಲ್ಲಿ ಆತನ ವಿರುದ್ಧ ವಾರಂಟ್ ಹೊರಡಿಸಿತ್ತು ಎಂದು ದಿಂಡೋಶಿ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಜೀವನ್ ಖಾರತ್ ಹೇಳಿದ್ದಾರೆ.

ನಾವು ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸುತ್ತೇವೆ. ಆತ ಈಗ 1992ರ ಗಲಭೆ ಪ್ರಕರಣದ ವಿಚಾರಣೆಯನ್ನು ಎದುರಿಸಲಿದ್ದಾನೆ ಎಂದು ಖಾರತ್ ಹೇಳಿದ್ದಾರೆ. 1992ರಲ್ಲಿ ಮುಂಬೈನಲ್ಲಿ ಕೋಮು ಗಲಭೆಗಳು ಭುಗಿಲೆದ್ದವು, ಇದರಿಂದಾಗಿ ಹಲವಾರು ಜನ ಸಾವನ್ನಪ್ಪಿದರು, ಆಸ್ತಿಪಾಸ್ತಿ ನಷ್ಟವಾಯಿತು. ಗಲಭೆಯ ನಂತರ 1993ರಲ್ಲಿ ನಗರದ ಹಲವಾರು ಭಾಗಗಳಲ್ಲಿ ಬಾಂಬ್ ಸ್ಫೋಟಗಳು ನಡೆದವು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ