AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಲ್ಲಿ ರೈಲಿನ ಬಾತ್ ರೂಂ ಒಳಗೆ 3 ವರ್ಷದ ಬಾಲಕನ ನಿಗೂಢ ಸಾವು

ಮುಂಬೈನಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಕುಶಿನಗರ ಎಕ್ಸ್​ಪ್ರೆಸ್ ರೈಲಿನ ಬಾತ್ ರೂಮ್​​ನಲ್ಲಿ ಕಸದ ತೊಟ್ಟಿಯೊಳಗೆ 3 ವರ್ಷದ ಬಾಲಕನ ಶವ ಪತ್ತೆಯಾಗಿದೆ. ಈ ನಿಗೂಢ ಸಾವಿನ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ರೈಲು ಮುಂಬೈನಲ್ಲಿ ತನ್ನ ಕೊನೆಯ ನಿಲ್ದಾಣವನ್ನು ತಲುಪಿದ ನಂತರ ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಕೋಚ್ ಅನ್ನು ಸ್ವಚ್ಛಗೊಳಿಸುತ್ತಿದ್ದಾಗ ಮಗುವಿನ ಶವ ಪತ್ತೆಯಾಗಿದೆ. ತನಿಖೆಯ ಭಾಗವಾಗಿ ಪೊಲೀಸರು ಪ್ರಸ್ತುತ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ತನಿಖೆ ನಡೆಸುತ್ತಿದ್ದಾರೆ.

ಮುಂಬೈನಲ್ಲಿ ರೈಲಿನ ಬಾತ್ ರೂಂ ಒಳಗೆ 3 ವರ್ಷದ ಬಾಲಕನ ನಿಗೂಢ ಸಾವು
Bathroom Dustbin
ಸುಷ್ಮಾ ಚಕ್ರೆ
|

Updated on: Aug 23, 2025 | 9:50 PM

Share

ಮುಂಬೈ, ಆಗಸ್ಟ್ 23: ಮಹಾರಾಷ್ಟ್ರದ ಮುಂಬೈನಲ್ಲಿ (Mumbai Crime News) ತೀವ್ರ ಆತಂಕಕಾರಿ ಘಟನೆಯೊಂದು ನಡೆದಿದೆ. ಇಂದು (ಶನಿವಾರ) ಮುಂಜಾನೆ ಕುಶಿನಗರ ಎಕ್ಸ್‌ಪ್ರೆಸ್ ನ ಎಸಿ ಕೋಚ್ ಬಿ 2ರ ಬಾತ್ ರೂಂನಲ್ಲಿನ ಕಸದ ತೊಟ್ಟಿಯೊಳಗೆ (Railway Dustbin) 3 ವರ್ಷದ ಬಾಲಕನ ಶವ ಪತ್ತೆಯಾಗಿದೆ. ಗೋರಖ್‌ಪುರದಿಂದ ಪ್ರಯಾಣ ಬೆಳೆಸಿದ ರೈಲು ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್ (ಎಲ್‌ಟಿಟಿ)ಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.

ಉತ್ತರ ಪ್ರದೇಶದ ಗೋರಖ್‌ಪುರ ಮತ್ತು ಮುಂಬೈನ ಎಲ್‌ಟಿಟಿ ನಡುವೆ ಪ್ರತಿದಿನ ಚಲಿಸುವ ಕುಶಿನಗರ ಎಕ್ಸ್‌ಪ್ರೆಸ್ ರೈಲಿನ ಎಸಿ ಬಿ2 ಕೋಚ್‌ನಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ರೈಲು ತನ್ನ ಕೊನೆಯ ನಿಲ್ದಾಣವನ್ನು ತಲುಪಿದ ನಂತರ ಬೆಳಿಗ್ಗೆ 6 ಗಂಟೆ ಸುಮಾರಿಗೆ ರೈಲ್ವೆ ಕೋಚ್ ಅನ್ನು ಸ್ವಚ್ಛಗೊಳಿಸುತ್ತಿದ್ದಾಗ ಈ ಮೃತದೇಹವನ್ನು ನೋಡಿದ್ದಾರೆ.

ಇದನ್ನೂ ಓದಿ: ಬೀದಿ ನಾಯಿ ಕಚ್ಚಿದ್ದರಿಂದ ಕಾನ್ಪುರದ ಕಾಲೇಜು ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ!

ಶವ ಪತ್ತೆಯಾದ ತಕ್ಷಣ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿಗೆ ಶುಚಿಗೊಳಿಸುವ ಸಿಬ್ಬಂದಿ ಎಚ್ಚರಿಕೆ ನೀಡಿದರು. ಆರ್‌ಪಿಎಫ್, ಸರ್ಕಾರಿ ರೈಲ್ವೆ ಪೊಲೀಸರಿಗೆ (ಜಿಆರ್‌ಪಿ) ಮಾಹಿತಿ ನೀಡಿತು. ಅವರು ಸ್ಥಳಕ್ಕೆ ತಲುಪಿ ಪ್ರಕರಣ ದಾಖಲಿಸಿದ್ದಾರೆ. “ಜಿಆರ್‌ಪಿ ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದೆ. ಮೃತದೇಹ ಪತ್ತೆಯಾದ ನಂತರ ಆರ್‌ಪಿಎಫ್ ದೂರು ದಾಖಲಿಸಿದೆ” ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಕುಶಿನಗರ ಎಕ್ಸ್‌ಪ್ರೆಸ್ ಮುಂಬೈಯನ್ನು ಗೋರಖ್‌ಪುರ ಮತ್ತು ಉತ್ತರ ಪ್ರದೇಶದ ಇತರ ಭಾಗಗಳೊಂದಿಗೆ ಸಂಪರ್ಕಿಸುವ ಅತ್ಯಂತ ಜನನಿಬಿಡ ರೈಲುಗಳಲ್ಲಿ ಒಂದಾಗಿದೆ. ರೈಲಿನ ಶೌಚಾಲಯದ ಕಸದ ತೊಟ್ಟಿಯೊಳಗೆ ಮಗುವಿನ ಮೃತದೇಹ ಹೇಗೆ ಬಿದ್ದಿತು ಎಂಬುದನ್ನು ಅಧಿಕಾರಿಗಳು ಇನ್ನೂ ಕಂಡುಹಿಡಿದಿಲ್ಲ. ಆ ಮಗು ಯಾರದ್ದು ಎಂಬುದು ಕೂಡ ತಿಳಿದುಬಂದಿಲ್ಲ.

ಇದನ್ನೂ ಓದಿ: ಗೆಳೆಯನ ಹೆಂಡತಿಯನ್ನು ತಾನಿಟ್ಟುಕೊಂಡು ತನ್ನ ಪತ್ನಿಯನ್ನು ಆತನಿಗೆ ಕೊಟ್ಟ ಸ್ನೇಹಿತ!

“ಮಗುವಿಗೆ ಸುಮಾರು 3 ವರ್ಷ ವಯಸ್ಸು. ಜಿಆರ್‌ಪಿ ಮತ್ತು ರಾಜ್ಯ ನಾಗರಿಕ ಪೊಲೀಸರಿಗೆ ಮಾಹಿತಿ ನೀಡಲಾಯಿತು ಎಂಬುದರ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಮಗು ಎಲ್ಲಿಂದ ರೈಲು ಹತ್ತಿತು ಮತ್ತು ಮಗು ಎಲ್ಲಿಗೆ ಹೋಗುತ್ತಿತ್ತು ಎಂಬುದನ್ನು ಕಂಡುಹಿಡಿಯಲು ನಾವು ಪ್ರಯತ್ನಿಸುತ್ತಿದ್ದೇವೆ. ಅವನೊಂದಿಗೆ ಬೇರೆ ಯಾರಾದರೂ ಇದ್ದರಾ? ಎಂದು ತಿಳಿಯಲು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ. ಆರಂಭದಲ್ಲಿ ಮಗುವಿನ ಕುತ್ತಿಗೆಯ ಬಳಿ ಕೆಲವು ಗಾಯದ ಗುರುತುಗಳು ಕಂಡುಬಂದಿವೆ” ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ