
ಮುಂಬೈನ ಸಾಂತಾಕ್ರೂಜ್ ಪ್ರದೇಶದ ಹೋಟೆಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಗ್ಯಾಲಕ್ಸಿ ಹೋಟೆಲ್‌ನಲ್ಲಿ ಮಧ್ಯಾಹ್ನ 1 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, ನಾಲ್ಕು ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿ ನಂದಿಸುವ ಮತ್ತು ಕಟ್ಟಡದಲ್ಲಿ ಸಿಲುಕಿರುವ ಜನರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಸಾಂತಾಕ್ರೂಜ್ ವೆಸ್ಟ್‌ನಲ್ಲಿರುವ ವಸತಿ ಕಟ್ಟಡದ ಆರನೇ ಮಹಡಿಯಲ್ಲಿನ ಫ್ಲಾಟ್‌ನಲ್ಲಿ ಬೆಂಕಿ ಕಾಣಿಸಿಕೊಂಡು 61 ವರ್ಷದ ವ್ಯಕ್ತಿ ಮೃತಪಟ್ಟ ವಾರದ ಬಳಿಕ ಈ ಘಟನೆ ಸಂಭವಿಸಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ