ಭಯೋತ್ಪಾದನಾ ನಿಗ್ರಹ ಕಾಯ್ದೆಯಡಿ ಮುಂಬೈ ದಾಳಿ ಆರೋಪಿ ತಹವ್ವೂರ್ ರಾಣಾ ಬಂಧನ

ಭಾರತಕ್ಕೆ ಹಸ್ತಾಂತರಿಸಿದ ನಂತರ NIA ಮುಂಬೈ ದಾಳಿಯ ಆರೋಪಿ ತಹವ್ವೂರ್ ರಾಣಾನನ್ನು ಬಂಧಿಸಿದೆ. ಇದಾದ ಬಳಿಕ ಪಟಿಯಾಲ ಹೌಸ್ ನ್ಯಾಯಾಲಯಕ್ಕೆ ಕರೆದೊಯ್ಯಲು ನಿರ್ಧರಿಸಲಾಗಿದೆ. 2008ರ ದಾಳಿಯ ಪ್ರಮುಖ ಆರೋಪಿ ತಹವ್ವೂರ್ ರಾಣಾ ಅವರ ಅರ್ಜಿಯನ್ನು ಅಮೆರಿಕ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ತಿರಸ್ಕರಿಸಿದ್ದರಿಂದ ಗಡೀಪಾರು ಮಾಡಲಾಗಿತ್ತು. ಇದಾದ ನಂತರ ಇಂದು ವಿಶೇಷ ವಿಮಾನದಲ್ಲಿ ಭಾರತಕ್ಕೆ ಕರೆತರಲಾಯಿತು.

ಭಯೋತ್ಪಾದನಾ ನಿಗ್ರಹ ಕಾಯ್ದೆಯಡಿ ಮುಂಬೈ ದಾಳಿ ಆರೋಪಿ ತಹವ್ವೂರ್ ರಾಣಾ ಬಂಧನ
Nia

Updated on: Apr 10, 2025 | 7:49 PM

ನವದೆಹಲಿ, ಏಪ್ರಿಲ್ 10: 26/11 ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾ ಅವರನ್ನು ಇಂದು ಭಾರತಕ್ಕೆ ಹಸ್ತಾಂತರಿಸಿದ ನಂತರ ಬಂಧಿಸಲಾಯಿತು. ತಹವ್ವೂರ್ ರಾಣಾ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವ ಮೊದಲು ಹಿರಿಯ ವಕೀಲ ದಯಾನ್ ಕೃಷ್ಣನ್ ಮತ್ತು NIA ಪರ ವಿಶೇಷ ಸಾರ್ವಜನಿಕ ಅಭಿಯೋಜಕ, ವಕೀಲ ನರೇಂದರ್ ಮಾನ್ ಅವರು ರಾಷ್ಟ್ರ ರಾಜಧಾನಿಯ ಪಟಿಯಾಲ ಹೌಸ್ ನ್ಯಾಯಾಲಯಕ್ಕೆ ಆಗಮಿಸಿದ್ದಾರೆ. ರಾಣಾ ಅವರನ್ನು ಪಟಿಯಾಲ ಹೌಸ್ ನ್ಯಾಯಾಲಯಕ್ಕೆ ಕರೆದೊಯ್ಯಲಾಗುವುದು.

2008 ರ ಗಲಭೆಯ ಹಿಂದಿನ ಪ್ರಮುಖ ಸಂಚುಕೋರನನ್ನು ನ್ಯಾಯಕ್ಕೆ ತರಲು ವರ್ಷಗಳ ನಿರಂತರ ಮತ್ತು ಸಂಘಟಿತ ಪ್ರಯತ್ನಗಳ ನಂತರ, 26/11 ಮುಂಬೈ ಭಯೋತ್ಪಾದಕ ದಾಳಿಯ ಸಂಚುಕೋರ ರಾಣಾ ಅವರನ್ನು ಹಸ್ತಾಂತರಿಸುವಲ್ಲಿ ಯಶಸ್ವಿಯಾಗಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಹೇಳಿದೆ.

NIA ಪ್ರಕಾರ, ರಾಣಾ ಅವರನ್ನು ಭಾರತ-ಅಮೆರಿಕ ಹಸ್ತಾಂತರ ಒಪ್ಪಂದದ ಅಡಿಯಲ್ಲಿ ಆರಂಭಿಸಲಾದ ವಿಚಾರಣೆಯ ಪ್ರಕಾರ ಅಮೆರಿಕದಲ್ಲಿ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು. ಈ ಕ್ರಮವನ್ನು ತಡೆಯಲು ರಾಣಾ ಎಲ್ಲಾ ಕಾನೂನು ಮಾರ್ಗಗಳನ್ನು ಬಳಸಿದ ನಂತರ ಹಸ್ತಾಂತರ ಪ್ರಕ್ರಿಯೆ ಕೊನೆಗೊಂಡಿತು. ರಾಣಾ ಅವರನ್ನು ಭಾರತಕ್ಕೆ ಹಸ್ತಾಂತರಿಸುವುದನ್ನು ತುರ್ತು ತಡೆಹಿಡಿಯುವಂತೆ ಕೋರಿ ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ದೇಶದ ಸುಪ್ರೀಂ ಕೋರ್ಟ್ ವಜಾಗೊಳಿಸಿದ ನಂತರ ಭಾರತದ ತನಿಖಾಧಿಕಾರಿಗಳ ತಂಡ ಅಮೆರಿಕಕ್ಕೆ ಪ್ರಯಾಣ ಬೆಳೆಸಿತ್ತು.

ಇದನ್ನೂ ಓದಿ
ಬಸ್‌ ತಡೆದು ನಡು ರಸ್ತೆಯಲ್ಲಿ ಪಾನಮತ್ತ ಮಹಿಳೆಯ ಕಿರಿಕ್; ವಿಡಿಯೋ ವೈರಲ್‌
ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಸೇರಿ ಹಲವೆಡೆ ಇಡಿ ದಾಳಿ
ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು
ಮದುವೆ ಮನೆಗಳಲ್ಲಿ ಇನ್ಮುಂದೆ ನೀರಿನ ಪ್ಲಾಸ್ಟಿಕ್ ಬಾಟಲಿ ಬಳಕೆ ಮಾಡುವಂತಿಲ್ಲ

ಇದನ್ನೂ ಓದಿ: ಭಾರತಕ್ಕೆ ಬರಲಿರುವ ಉಗ್ರ ತಹವ್ವೂರ್ ರಾಣಾ; ಮುಂಬೈ ದಾಳಿಯಲ್ಲಿ ಈತನ ಪಾತ್ರವೇನು?

ರಾಣಾ ಪಾಕಿಸ್ತಾನ ಮೂಲದ ಕೆನಡಾ ಪ್ರಜೆ ಮತ್ತು 2008ರ ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ಸಂಚುಕೋರರಲ್ಲಿ ಒಬ್ಬನಾದ ಡೇವಿಡ್ ಕೋಲ್ಮನ್ ಹೆಡ್ಲಿ ಅಲಿಯಾಸ್ ದಾವೂದ್ ಗಿಲಾನಿಯ ನಿಕಟ ಸಹಚರ. ನವೆಂಬರ್ 26, 2008ರಂದು ಪಾಕಿಸ್ತಾನದ 10 ಲಷ್ಕರ್-ಎ-ತೋಯ್ಬಾ ಭಯೋತ್ಪಾದಕರ ಗುಂಪು ಅರೇಬಿಯನ್ ಸಮುದ್ರದಲ್ಲಿ ಸಮುದ್ರ ಮಾರ್ಗವನ್ನು ಬಳಸಿಕೊಂಡು ಭಾರತದ ಆರ್ಥಿಕ ರಾಜಧಾನಿ ಮುಂಬೈಗೆ ನುಸುಳಿ ಮುಂಬೈ ಸಿಎಸ್‌ಟಿ ರೈಲು ನಿಲ್ದಾಣ, ಎರಡು ಐಷಾರಾಮಿ ಹೋಟೆಲ್‌ಗಳು ಮತ್ತು ಯಹೂದಿ ಕೇಂದ್ರದ ಮೇಲೆ ಸಂಘಟಿತ ದಾಳಿ ನಡೆಸಿತ್ತು. ಮುಂಬೈನಲ್ಲಿ ನಡೆದ ಸುಮಾರು 60 ಗಂಟೆಗಳ ದಾಳಿಯಲ್ಲಿ 166 ಜನರು ಸಾವನ್ನಪ್ಪಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ