ದಾವೂದ್ ಇಬ್ರಾಹಿಂ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಮುಂಬೈ ಸ್ಫೋಟದ ಪ್ರಮುಖ ಆರೋಪಿ
1933ರ ಮುಂಬೈ ಸರಣಿ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಾಲ್ವರು ಆರೋಪಿಗಳು ಬಾಂಬ್ ಉತ್ಪಾದನಾ ತರಬೇತಿಗೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.
1933ರ ಮುಂಬೈ ಸರಣಿ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಾಲ್ವರು ಆರೋಪಿಗಳು ಬಾಂಬ್ ಉತ್ಪಾದನಾ ತರಬೇತಿಗೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ದಾವೂದ್ ಇಬ್ರಾಹಿಂ ಆಯ್ಕೆ ಮಾಡಿದ್ದ ಉಗ್ರರು ಪಾಕಿಸ್ತಾನದಲ್ಲಿ ಬಾಂಬ್ ತಯಾರಿಕಾ ತರಬೇತಿಯನ್ನು ಪಡೆದಿದ್ದರು. 15 ದಿನಗಳ ಕಾಲ ನಡೆದ ಬಾಂಬ್ ತಯಾರಿಕಾ ತರಬೇತಿ ಸಂದರ್ಭದಲ್ಲಿ ಉಗ್ರ ದಾವೂದ್ ಇಬ್ರಾಹಿಂ ಕೂಡ ಪಾಕಿಸ್ತಾನದಲ್ಲಿದ್ದ ಎಂದು ಹೇಳಿಕೆ ನೀಡಿದ್ದಾರೆ.
1933 ರ ಸರಣಿ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಅಬೂಬಕರ್, ಸೈಯದ್ ಖುರೇಷಿ, ಮೊಹಮ್ಮದ್ ಶೋಯೆಬ್ ಖುರೇಷಿ ಹಾಗೂ ಮೊಹಮ್ಮದ್ ಯೂಸುಫ್ ಇಸ್ಮಾಯಿಲ್ ಆರ್ಡಿಎಕ್ಸ್ ಅನ್ನು ಮುಂಬೈ ತಂದು ಬಳಿಕ ಸಾಕ್ಷ್ಯ ನಾಶ ಮಾಡಿದ್ದರು. ಮುಂಬೈನ ಹಲವು ಪ್ರದೇಶಗಳಲ್ಲಿ ಬಾಂಬ್ ಇರಿಸಿದ್ದರು.
1993ರ ಮುಂಬೈ ಸರಣಿ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಈಚೆಗೆ ಗುಜರಾತ್‌ನಲ್ಲಿ ಬಂಧಿಸಲಾಗಿದ್ದ ನಾಲ್ವರು ಆರೋಪಿಗಳಿಗೆ ಸಿಬಿಐ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಮುಂಬೈ ನಿವಾಸಿಗಳಾದ ಸೈಯದ್ ಖುರೇಷಿ, ಅಬುಬಕರ್, ಮೊಹಮ್ಮದ್ ಶೋಯಿಬ್ ಖುರೇಷಿ ಮತ್ತು ಮೊಹಮ್ಮದ್ ಯೂಸುಫ್ ಇಸ್ಮಾಯಿಲ್ ಅವರನ್ನು ಮೇ 12 ರಂದು ಗುಜರಾತ್‌ನ ಭಯೋತ್ಪಾದನಾ ನಿಗ್ರಹ ದಳವು ಬಂಧಿಸಿತ್ತು. ಬಳಿಕ ಬಂಧಿತರನ್ನು ಸರಣಿ ಬಾಂಬ್ ಸ್ಫೋಟ ಪ್ರಕರಣ ತನಿಖೆ ಸಂಬಂಧ ಸಿಬಿಐಗೆ ಹಸ್ತಾಂತರಿಸಲಾಗಿತ್ತು.
ಸಿಬಿಐನ ವಿಶೇಷ ನ್ಯಾಯಾಧೀಶರಾದ ಆರ್.ಆರ್.ಭೋಸಲೆ ಅವರ ಮುಂದೆ ನಾಲ್ವರು ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಈ ವೇಳೆ ಆರೋಪಿಗಳನ್ನು ತಮ್ಮ ವಶದಲ್ಲಿಯೇ ಇಟ್ಟುಕೊಳ್ಳಲು ಇನ್ನಷ್ಟು ಅವಕಾಶ ನೀಡಬೇಕೆಂಬ ಸಿಬಿಐನ ಮನವಿ ತಿರಸ್ಕರಿಸಿದ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಆದೇಶಿಸಿದೆ.
1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ನಾಲ್ವರು ಬೇಕಾಗಿದ್ದರು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಗುಜರಾತ್ ಪೊಲೀಸರು ಈಚೆಗೆ ಹೇಳಿದ್ದರು.
ಮುಂಬೈ ಬಾಂಬ್ ಸ್ಫೋಟದ ಮಾಹಿತಿ 1993ರ ಮಾರ್ಚ್‌ನಲ್ಲಿ ಮುಂಬೈನಲ್ಲಿ 12 ಕಡೆ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ 257 ಮಂದಿ ಸಾವನ್ನಪ್ಪಿದ್ದರು, 1400 ಮಂದಿ ಗಾಯಗೊಂಡಿದ್ದರು. ಈ ಪ್ರಮುಖ ಆರೋಪಿಗಳು ತಮ್ಮ ಗುರುತನ್ನು ಮರೆಮಾಚಿ, ನಕಲಿ ದಾಖಲೆಗಳನ್ನು ಸೃಷ್ಟಿಸಿ ಪಾಸ್‌ಪೋರ್ಟ್ ತಯಾರಿಸಿಕೊಂಡು 29 ವರ್ಷಗಳಿಂದ ತಲೆ ಮರೆಸಿಕೊಂಡಿದ್ದರು ಎಂದು ಹೇಳಲಾಗಿದೆ.
ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ