ಮುಂಬೈ ಏರ್ಪೋರ್ಟ್ ಶೌಚಾಲಯದ ಕಸದ ಬುಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ
ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಶೌಚಾಲಯದೊಳಗಿನ ಕಸದ ಬುಟ್ಟಿಯಲ್ಲಿ ಮಂಗಳವಾರ ರಾತ್ರಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾತ್ರಿ 10.30 ರ ಸುಮಾರಿಗೆ ಈ ಶವ ಪತ್ತೆಯಾಗಿತ್ತು. ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ತ್ವರಿತ ಕ್ರಮ ಕೈಗೊಂಡು,ಕೂಡಲೇ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದರು. ಶಿಶುವನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಮಗು ಮೃತಪಟ್ಟಿರುವುದಾಗಿ ದೃಢಪಡಿಸಿದರು.

ಮುಂಬೈ, ಮಾರ್ಚ್ 26: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಶೌಚಾಲಯದೊಳಗಿನ ಕಸದ ಬುಟ್ಟಿಯಲ್ಲಿ ಮಂಗಳವಾರ ರಾತ್ರಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾತ್ರಿ 10.30 ರ ಸುಮಾರಿಗೆ ಈ ಶವ ಪತ್ತೆಯಾಗಿತ್ತು. ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ತ್ವರಿತ ಕ್ರಮ ಕೈಗೊಂಡು,ಕೂಡಲೇ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದರು. ಶಿಶುವನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಮಗು ಮೃತಪಟ್ಟಿರುವುದಾಗಿ ದೃಢಪಡಿಸಿದರು.
ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ವಿವರವಾದ ತನಿಖೆ ಆರಂಭಿಸಿದ್ದಾರೆ. ನವಜಾತ ಶಿಶುವನ್ನು ಕಸದ ಬುಟ್ಟಿಗೆ ಎಸೆದವರನ್ನು ಪತ್ತೆಹಚ್ಚಲು ಅಧಿಕಾರಿಗಳು ವಿಮಾನ ನಿಲ್ದಾಣದ ಆವರಣದಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಮತ್ತು ಇತರ ವಿಧಿವಿಜ್ಞಾನ ಸಾಕ್ಷ್ಯಗಳನ್ನು ವಿಶ್ಲೇಷಿಸುತ್ತಿದ್ದಾರೆ.
ಶಂಕಿತರನ್ನು ಪತ್ತೆ ಹಚ್ಚಲು ಅಧಿಕಾರಿಗಳು ವಿಮಾನಯಾನ ಸಂಸ್ಥೆಗಳು ಮತ್ತು ಪ್ರಯಾಣಿಕರ ದಾಖಲೆಗಳೊಂದಿಗೆ ಸಮನ್ವಯ ಸಾಧಿಸುತ್ತಿದ್ದಾರೆ. ತನಿಖೆಗೆ ಸಹಾಯವಾಗುವ ಯಾವುದೇ ಮಾಹಿತಿಯೊಂದಿಗೆ ಮುಂದೆ ಬರುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ವಿಮಾನದಲ್ಲಿ ನಾಯಿ ಕೊಂಡೊಯ್ಯುವಂತಿಲ್ಲ ಎಂದಿದ್ದಕ್ಕೆ ಟಾಯ್ಲೆಟ್ ನೀರಿನಲ್ಲಿ ಮುಳುಗಿಸಿ ಕೊಂದ ಮಹಿಳೆ ಸಾಕು ಪ್ರಾಣಿಗಳಿಗೋಸ್ಕರ ಜೀವವನ್ನೇ ಕೊಡುವ ಜನರ ನಡುವೆ, ಇಲ್ಲೊಬ್ಬ ಸ್ವಾರ್ಥಿ ತನಗೋಸ್ಕರ ನಾಯಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಅಮೆರಿಕದ ವಿಮಾನ ನಿಲ್ದಾಣದಲ್ಲಿ ವಿಮಾನದಲ್ಲಿ ನಾಯಿಯನ್ನು ಕರೆದೊಯ್ಯುವಂತಿಲ್ಲ ಎಂದು ಸಿಬ್ಬಂದಿ ಹೇಳಿದ್ದಕ್ಕೆ, ಮಹಿಳೆ ಟಾಯ್ಲೆಟ್ ನೀರಿನಲ್ಲಿ ನಾಯಿಯನ್ನು ಮುಳುಗಿಸಿ ಕೊಂದಿದ್ದಾರೆ. 57 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ ಎಂದು ದಿ ಇಂಡಿಪೆಂಡೆಂಟ್ ವರದಿ ಮಾಡಿದೆ.
ಮತ್ತಷ್ಟು ಓದಿ: ಪುಣೆಯ ಕಸದ ರಾಶಿಯಲ್ಲಿ ಎಸೆದ ಪ್ಲಾಸ್ಟಿಕ್ ಕಂಟೇನರ್‌ನಲ್ಲಿ ನವಜಾತ ಶಿಶುವಿನ ಶವ ಪತ್ತೆ
ಕಳೆದ ವರ್ಷ ಡಿಸೆಂಬರ್‌ನಲ್ಲಿ ಆರ್ಲ್ಯಾಂಡೊ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಭದ್ರತಾ ಚೆಕ್ಪೋಸ್ಟ್ ಬಳಿ ಇರುವ ಶೌಚಾಲಯದಲ್ಲಿ ನಾಯಿ ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿತ್ತು. ಮಹಿಳೆ ತನ್ನ ಶ್ವಾನದೊಂದಿಗೆ ವಿಮಾನ ಹತ್ತಲು ಪ್ರಯತ್ನಿಸಿದ್ದಳು ಆದರೆ ಅಗತ್ಯವಾದ ದಾಖಲೆಗಳ ಕೊರತೆ ಇತ್ತು.
ನಂತರ ಮಹಿಳೆ ತನ್ನ ನಾಯಿಯನ್ನು ವಿಮಾನ ನಿಲ್ದಾಣದ ಶೌಚಾಲಯದಲ್ಲಿ ಮುಳುಗಿಸಿ ಭದ್ರತಾ ಚೆಕ್ಪೋಸ್ಟ್ಗಳ ಮೂಲಕ ಹೋಗುವ ಮೊದಲು ಅದರ ಅವಶೇಷಗಳನ್ನು ಕಸದ ಪುಟ್ಟಿಗೆ ಎಸೆದಿದ್ದಳು. ವಿಮಾನ ನಿಲ್ದಾಣ ಶುಚಿಗೊಳಿಸುವ ಸಿಬ್ಬಂದಿಗೆ ನಾಯಿಯ ಶವ ಕಂಡಿತ್ತು.
ಘಟನೆ ನಡೆದ ದಿನದ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಪೊಲೀಸರು ಲಾರೆನ್ಸ್ ಬಂಧನಕ್ಕೆ ವಾರಂಟ್ ಹೊರಡಿಸಿದ ನಂತರ ಅವರನ್ನು ಬಂಧಿಸಲಾಯಿತು. ಸುಮಾರು ಮೂರು ತಿಂಗಳ ನಂತರ ಅವರನ್ನು ಬಂಧಿಸಿ ವಶಕ್ಕೆ ಪಡೆಯಲಾಯಿತು. ಮಂಗಳವಾರದ ಬಂಧನದ ನಂತರ, ಬಂಧನ ದಾಖಲೆಯ ಪ್ರಕಾರ, ಅವರು 5,000 ಡಾಲರ್ ಬಾಂಡ್ ಸಲ್ಲಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ