ಅಟಲ್ ಸೇತುವಿನಿಂದ ಜಿಗಿದು ಮುಂಬೈ ಉದ್ಯಮಿ ಸಾವು; 2 ದಿನಗಳಲ್ಲಿ ಇದು ಎರಡನೇ ಪ್ರಕರಣ

ಪೊಲೀಸರ ಪ್ರಕಾರ, ಮೃತರನ್ನು ಫಿಲಿಪ್ ಹಿತೇಶ್ ಶಾ ಎಂದು ಗುರುತಿಸಲಾಗಿದೆ, ಅವರು ಮಾಟುಂಗಾದಲ್ಲಿ ತಮ್ಮ ಕುಟುಂಬದೊಂದಿಗೆ ವಾಸಿಸುತ್ತಿದ್ದರು. ಕಳೆದ ಕೆಲವು ತಿಂಗಳುಗಳಿಂದ ಫಿಲಿಪ್ ಶಾ ಖಿನ್ನತೆಗೆ ಒಳಗಾಗಿದ್ದರು. ಇದರಿಂದಾಗಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬದವರು ಶಂಕಿಸಿದ್ದಾರೆ.

ಅಟಲ್ ಸೇತುವಿನಿಂದ ಜಿಗಿದು ಮುಂಬೈ ಉದ್ಯಮಿ ಸಾವು; 2 ದಿನಗಳಲ್ಲಿ ಇದು ಎರಡನೇ ಪ್ರಕರಣ
ಅಟಲ್ ಸೇತು
Follow us
ರಶ್ಮಿ ಕಲ್ಲಕಟ್ಟ
|

Updated on: Oct 03, 2024 | 6:38 PM

ಮುಂಬೈ ಅಕ್ಟೋಬರ್ 03: ಮಾಟುಂಗಾದ 52 ವರ್ಷದ ಉದ್ಯಮಿಯೊಬ್ಬರು ಬುಧವಾರ ಮುಂಜಾನೆ ಮುಂಬೈ ಟ್ರಾನ್ಸ್ ಹಾಬರ್ ಲಿಂಕ್ (MTHL) ನ ಭಾಗವಾದ ಅಟಲ್ ಸೇತುದಿಂದ (Atal Setu) ಜಿಗಿದು ಸಾವಿಗೀಡಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ರಾಷ್ಟ್ರೀಕೃತ ಬ್ಯಾಂಕ್‌ನ ಡೆಪ್ಯುಟಿ ಮ್ಯಾನೇಜರ್ ಒಬ್ಬರು ಅಟಲ್ ಸೇತು ಮೇಲಿಂದ ಹಾರಿ ಪ್ರಾಣ ಬಿಟ್ಟ ಎರಡು ದಿನಗಳ ನಂತರ ಈ ಘಟನೆ ನಡೆದಿದೆ. ಮಂಗಳವಾರ ನವಿ ಮುಂಬೈನ ಸಮುದ್ರ ತೀರದಲ್ಲಿ ಅವರ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ

ಪೊಲೀಸರ ಪ್ರಕಾರ, ಮೃತರನ್ನು ಫಿಲಿಪ್ ಹಿತೇಶ್ ಶಾ ಎಂದು ಗುರುತಿಸಲಾಗಿದೆ, ಅವರು ಮಾಟುಂಗಾದಲ್ಲಿ ತಮ್ಮ ಕುಟುಂಬದೊಂದಿಗೆ ವಾಸಿಸುತ್ತಿದ್ದರು. ಕಳೆದ ಕೆಲವು ತಿಂಗಳುಗಳಿಂದ ಫಿಲಿಪ್ ಶಾ ಖಿನ್ನತೆಗೆ ಒಳಗಾಗಿದ್ದರು. ಇದರಿಂದಾಗಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬದವರು ಶಂಕಿಸಿದ್ದಾರೆ.

ಉದ್ಯಮಿ ಫಿಲಿಪ್ ಶಾ ಬುಧವಾರ ಬೆಳಗ್ಗೆ ಅಟಲ್ ಸೇತು ಮೇಲಿಂದ ಹಾರಿ ಆತ್ಮಹತ್ಯೆ ಮಾಡಿದ್ದಾರೆ. ಸೆಂಟ್ರಲ್ ಮುಂಬೈನ ಮಾಟುಂಗಾ ನಿವಾಸಿಯಾದ ಶಾ, ತನ್ನ ಸೆಡಾನ್ ಕಾರನ್ನು ಅಟಲ್ ಸೇತು ಮೇಲೆ ಚಲಾಯಿಸಿ, ಅಲ್ಲೊಂದು ಕಡೆ ನಿಲ್ಲಿಸಿ ಸಮುದ್ರಕ್ಕೆ ಹಾರಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೇತುವೆಯ ಮೇಲೆ ಕಾರು ನಿಂತಿರುವುದನ್ನು ಸೇತುವೆಯ ಸಿಸಿಟಿವಿ ನಿಯಂತ್ರಣ ಕೊಠಡಿಯ ಸಿಬ್ಬಂದಿ ಗಮನಿಸಿದ್ದು, ನಂತರ ರಕ್ಷಣಾ ತಂಡಕ್ಕೆ ಎಚ್ಚರಿಕೆ ನೀಡಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಅದರ ಸಿಬ್ಬಂದಿ ಫಿಲಿಪ್ ಶಾ ಸಮುದ್ರಕ್ಕೆ ಹಾರಿದ ಸ್ಥಳಕ್ಕೆ ಧಾವಿಸಿದ್ದಾರೆ. “ಅಲ್ಲಿ ಹುಡುಕಾಟ ನಡೆಸಿದ ಮೇಲೆ ಅವರಿಗೆ ಶಾ ಅವರ ದೇಹ ಸಿಕ್ಕಿದೆ” ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಫಿಲಿಪ್ ಶಾ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ದಾಖಲಿಸಿದ ನಂತರ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಕಾರಿನಲ್ಲಿ ಪತ್ತೆಯಾದ ಆಧಾರ್ ಕಾರ್ಡ್‌ನ ಆಧಾರದ ಮೇಲೆ ಮೃತ ವ್ಯಕ್ತಿಯ ಗುರುತು ಹಿಡಿಯಲಾಗಿದೆ. ಶಾ ಸಾಯುವ ಹಿಂದಿನ ಕೆಲವು ದಿನಗಳಲ್ಲಿ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎಂದು ಅಧಿಕಾರಿಹೇಳಿದರು. ನವಿ ಮುಂಬೈನ ನ್ಹವಾ ಶೇವಾ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವಿನ ಪ್ರಕರಣ ದಾಖಲಾಗಿದೆ.

ನವಿ ಮುಂಬೈ ತೀರದಲ್ಲಿ ಬ್ಯಾಂಕರ್ ಮೃತದೇಹ ಪತ್ತೆ

ಸೋಮವಾರ ಬೆಳಗ್ಗೆ ರಾಷ್ಟ್ರೀಕೃತ ಬ್ಯಾಂಕ್‌ನ ಉಪ ವ್ಯವಸ್ಥಾಪಕ ಸುಶಾಂತ್ ಚಕ್ರವರ್ತಿ ಅವರು ಸೇವ್ರಿಯ ಸೇತುವೆಯ ಮೇಲೆ ತಮ್ಮ ಎಸ್‌ಯುವಿಯನ್ನು ನಿಲ್ಲಿಸಿ ಸಮುದ್ರಕ್ಕೆ ಹಾರಿದ್ದಾರೆ. ಅವರು ದಕ್ಷಿಣ ಮುಂಬೈನ ಬ್ಯಾಂಕ್‌ನ ಫೋರ್ಟ್ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಅವರಿಗೆ ಕೆಲಸದ ಒತ್ತಡವಿದೆ ಎಂದು ಚಕ್ರವರ್ತಿ ಅವರ ಪತ್ನಿ ಹೇಳಿದ್ದಾರೆ.

ಹುಡುಕಾಟ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತ. ವಾಹನದ ನಂಬರ್ ಪ್ಲೇಟ್ ಆಧರಿಸಿ ಸೆವ್ರಿ ಪೊಲೀಸರು ಕುಟುಂಬವನ್ನು ಪತ್ತೆಹಚ್ಚಿದ್ದಾರೆ ಎಂದು ಸೇವ್ರಿ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ರೋಹಿತ್ ಖೋಟ್ ಪಿಟಿಐಗೆ ತಿಳಿಸಿದ್ದಾರೆ. ಮಂಗಳವಾರ, ನವಿ ಮುಂಬೈನ ಜೆಎನ್‌ಪಿಟಿಯ ತೀರದಲ್ಲಿ ಶವವೊಂದು ಕೊಚ್ಚಿಹೋಗಿದೆ ಎಂದು ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಅದನ್ನು ಗುರುತಿಸಲಾಗಿದೆ. ಚಕ್ರವರ್ತಿ ಅವರು ಪತ್ನಿ ಮತ್ತು ಏಳು ವರ್ಷದ ಮಗಳನ್ನು ಅಗಲಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ದೆಹಲಿ ವಾಯುಮಾಲಿನ್ಯ: ಕೇಂದ್ರ, ಹರ್ಯಾಣ ಮತ್ತು ಪಂಜಾಬ್​​ಗೆ ಸುಪ್ರೀಂ ತರಾಟೆ

ಮುಂಬೈನಲ್ಲಿ ಅಟಲ್ ಸೇತು

ಮುಂಬೈ ಟ್ರಾನ್ಸ್-ಹಾರ್ಬರ್ ಲಿಂಕ್ (MTHL) ಎಂದೂ ಕರೆಯಲ್ಪಡುವ ‘ಅಟಲ್ ಬಿಹಾರಿ ವಾಜಪೇಯಿ ಸೇವ್ರಿ-ನವ ಶೇವಾ ಅಟಲ್ ಸೇತು’ ದಕ್ಷಿಣ ಮುಂಬೈ ಅನ್ನು ನವಿ ಮುಂಬೈನೊಂದಿಗೆ ಸಂಪರ್ಕಿಸುತ್ತದೆ. ಇದು, ಈ ವರ್ಷದ ಜನವರಿಯಲ್ಲಿ ಉದ್ಘಾಟನೆಯಾಯಿತು. ಆರು ಪಥಗಳ ಸೇತುವೆಯು 21.8-ಕಿಮೀ ಉದ್ದವಿದ್ದು, ದೇಶದ ಅತಿ ಉದ್ದದ ಸಮುದ್ರ ಸೇತುವೆ ಎಂದು ಹೇಳಲಾಗುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ