ಚಲಿಸುತ್ತಿದ್ದ ಜೈಪುರ ಎಕ್ಸ್​ಪ್ರೆಸ್​ ರೈಲಿನಲ್ಲಿ ಗುಂಡಿನ ದಾಳಿ, ನಾಲ್ವರು ಸಾವು

ಜೈಪುರ ಎಕ್ಸ್​ಪ್ರೆಸ್​ನಲ್ಲಿ ಅಪರಿಚಿತರಿಂದ ಗುಂಡಿನ ದಾಳಿ ನಡೆದಿದ್ದು, ನಾಲ್ವರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರ ಪಾಲ್ಗಢದಲ್ಲಿ ನಡೆದಿದೆ. ಆರ್​​ಪಿಎಫ್​​ ಎಎಸ್ಐ ಸೇರಿ ಮೂವರು ಪ್ರಯಾಣಿಕರು ಮೃತಪಟ್ಟಿದ್ದಾರೆ, ರೈಲು ಮುಂಬೈಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ.

ಚಲಿಸುತ್ತಿದ್ದ ಜೈಪುರ ಎಕ್ಸ್​ಪ್ರೆಸ್​ ರೈಲಿನಲ್ಲಿ ಗುಂಡಿನ ದಾಳಿ, ನಾಲ್ವರು ಸಾವು
ರೈಲು

Updated on: Jul 31, 2023 | 3:17 PM

ಜೈಪುರ ಎಕ್ಸ್​ಪ್ರೆಸ್​ನಲ್ಲಿ ಗುಂಡಿನ ದಾಳಿ ನಡೆದಿದ್ದು, ನಾಲ್ವರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರ ಪಾಲ್ಗಢದಲ್ಲಿ ನಡೆದಿದೆ.
ಆರ್​​ಪಿಎಫ್​​ ಎಎಸ್ಐ ಸೇರಿ ಮೂವರು ಪ್ರಯಾಣಿಕರು ಮೃತಪಟ್ಟಿದ್ದಾರೆ, ರೈಲು ಮುಂಬೈಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಈ ಗುಂಡಿನ ದಾಳಿಯಲ್ಲಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೆಲ ಪ್ರಯಾಣಿಕರು ಗಾಯಗೊಂಡಿರುವ ಬಗ್ಗೆ ಪ್ರಾಥಮಿಕ ಮಾಹಿತಿ ಲಭಿಸುತ್ತಿದೆ. ಜಿಆರ್‌ಪಿ ಪೊಲೀಸರು ಮತ್ತು ಆರ್‌ಪಿಎಫ್ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ. ಗುಂಡಿನ ದಾಳಿ ಬಳಿಕ ದಾಳಿಕೋರರು ಪರಾರಿಯಾಗಿದ್ದಾರೆ.

ರೈಲ್ವೇ ರಕ್ಷಣಾ ಪಡೆಯ ಕಾನ್​ಸ್ಟೆಬಲ್ ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಸೋಮವಾರ ಮುಂಜಾನೆ 5 ಗಂಟೆ ಸುಮಾರಿಗೆ ವಾಪಿಯಿಂದ ಬೊರಿವಲಿಯಿಂದ ಮೀರಾ ರೋಡ್ ನಿಲ್ದಾಣದ ನಡುವೆ ಈ ಘಟನೆ ನಡೆದಿದೆ. ಆರೋಪಿ ಕಾನ್‌ಸ್ಟೆಬಲ್‌ನನ್ನು ಮುಂಬೈ ರೈಲ್ವೇ ಪೊಲೀಸರು ಬಂಧಿಸಿದ್ದಾರೆ.

 

 

 

 

 

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:24 am, Mon, 31 July 23

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us