ಮಾನನಷ್ಟ ಪ್ರಕರಣ: ಸಂಜಯ್ ರಾವತ್ಗೆ 15 ದಿನಗಳ ಜೈಲು ಶಿಕ್ಷೆ
ಮಾನನಷ್ಟ ಪ್ರಕರಣವೊಂದರಲ್ಲಿ ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಅವರಿಗೆ ನ್ಯಾಯಾಲಯ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ. ಬಿಜೆಪಿಯ ಮಾಜಿ ಸಂಸದ ಕಿರೀಟ್ ಸೋಮಯ್ಯ ಅವರ ಪತ್ನಿ ಮೇಧಾ ಸೋಮಯ್ಯ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಮುಂಬೈ ನ್ಯಾಯಾಲಯವು ಸಂಜಯ್ ರಾವತ್ ಅವರಿಗೆ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ.
ಮಾನನಷ್ಟ ಪ್ರಕರಣವೊಂದರಲ್ಲಿ ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಅವರಿಗೆ ನ್ಯಾಯಾಲಯ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ. ಬಿಜೆಪಿಯ ಮಾಜಿ ಸಂಸದ ಕಿರೀಟ್ ಸೋಮಯ್ಯ ಅವರ ಪತ್ನಿ ಮೇಧಾ ಸೋಮಯ್ಯ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಮುಂಬೈ ನ್ಯಾಯಾಲಯವು ಸಂಜಯ್ ರಾವತ್ ಅವರಿಗೆ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ. ಮಾನನಷ್ಟಕ್ಕಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 500 ರ ಅಡಿಯಲ್ಲಿ ರಾವತ್ ಅವರನ್ನು ದೋಷಿ ಎಂದು ಘೋಷಿಸಲಾಯಿತು ಮತ್ತು 15 ದಿನಗಳ ಕಾಲ ಸರಳ ಜೈಲು ಶಿಕ್ಷೆ ವಿಧಿಸಲಾಯಿತು. 25,000 ದಂಡವನ್ನೂ ವಿಧಿಸಲಾಗಿದೆ.
ಬಿಜೆಪಿ ನಾಯಕನ ಪತ್ನಿ ಮೇಧಾ ಸೋಮಯ್ಯ ರಾವುತ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಮೀರಾ ಭಯಂದರ್‌ನಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣದಲ್ಲಿ 100 ಕೋಟಿ ರೂಪಾಯಿ ಹಗರಣದಲ್ಲಿ ಭಾಗಿಯಾಗಿರುವ ಬಗ್ಗೆ ರಾವತ್ ತನ್ನ ಮತ್ತು ತನ್ನ ಪತಿ ವಿರುದ್ಧ ಆಧಾರರಹಿತ ಮತ್ತು ಮಾನಹಾನಿಕರ ಆರೋಪಗಳನ್ನು ಮಾಡಿದ್ದಾರೆ ಎಂದು ಅವರು ಹೇಳಿದರು.
ಜನಸಾಮಾನ್ಯರ ಮುಂದೆ ನನ್ನ ವರ್ಚಸ್ಸು ಹಾಳು ಮಾಡಲು ಆರೋಪ ಮಾಡಲಾಗಿತ್ತು. ಸಂಜಯ್ ರಾವುತ್ ಅವರ ಈ ಹೇಳಿಕೆ ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ಸಂಜಯ್ ವಿರುದ್ಧ ಸೇಡು ತೀರಿಸಿಕೊಂಡ ಮೇಧಾ ಅವrಉ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.
ಮತ್ತಷ್ಟು ಓದಿ: ಸಿಎಂ ನನ್ನ ಮಗನನ್ನು ಕೊಲೆ ಮಾಡಲು ಸುಪಾರಿ ನೀಡಿದ್ದಾರೆ: ಸಂಜಯ್ ರಾವತ್ ಗಂಭೀರ ಆರೋಪ
ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವ ವೇಳೆ ಮೇಧಾ ಅವರು ಸಂಜಯ್ ಸಿಂಗ್ ಅವರ ಆರೋಪ ಸುಳ್ಳು ಎಂದು ಹೇಳಿದ್ದರು. ಸಂಜಯ್ ರಾವತ್ ಮತ್ತು ಮೇಧಾ ಸೋಮಯ್ಯ ಅವರ ಈ ಪ್ರಕರಣ ಮುಂಬೈನ ಕೆಳ ನ್ಯಾಯಾಲಯದಲ್ಲಿ ನಡೆಯುತ್ತಿತ್ತು. ವಿಚಾರಣೆ ವೇಳೆ ಸಂಜಯ್ ರಾವುತ್ ತಪ್ಪಿತಸ್ಥ ಎಂದು ಕೋರ್ಟ್ ತೀರ್ಪು ನೀಡಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:46 pm, Thu, 26 September 24