ತಂಗಿ ಜತೆ ಸೇರಿ ಪತ್ನಿಯ ಕೊಂದು ಆಕಸ್ಮಿಕ ಸಾವು ಎಂದು ಬಿಂಬಿಸಿದ ಪತಿ ಅರೆಸ್ಟ್
ಪತ್ನಿಯನ್ನು ಕೊಂದು ಆಕಸ್ಮಿಕ ಸಾವು ಎಂದು ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ವಿರಾರ್ನ ಪತಿ ಜಯಂತಿಲಾಲ್ ಸೋನಿ, ತಂಗಿ ದಿವಾಲಿಲಾಲ್ ಸೋನಿಯನ್ನು ಪೊಲೀಸರು ಬಂಧಿಸಿದ್ದಾರೆ. ತಮ್ಮ ನೆರೆಹೊರೆಯವರ ಸಹಾಯದಿಂದ ಕಲ್ಪನಾ ಸೋನಿ (36) ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಾಗ ಘಟನೆ ಬೆಳಕಿಗೆ ಬಂದಿತ್ತು. ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಮತ್ತು ಮಹಿಳೆಯ ಅತ್ತೆ-ಮಾವ ಕಿರುಕುಳ ನೀಡುತ್ತಿದ್ದರು ಎಂದು ಅಕ್ಕಪಕ್ಕದ ಮನೆಯವರು ಹೇಳಿದ್ದಾರೆಂದು ಪೊಲೀಸರಿಗೆ ತಿಳಿಸಿದ್ದಾರೆ.

ಮುಂಬೈ, ಡಿಸೆಂಬರ್ 29: ತಂಗಿ ಜತೆ ಸೇರಿ ಪತ್ನಿಯನ್ನು ಕೊಲೆ(Murder) ಮಾಡಿ ಆಕಸ್ಮಿಕ ಸಾವು ಎಂದು ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ವಿರಾರ್ನ ಜಯಂತಿಲಾಲ್ ಸೋನಿ, ತಂಗಿ ದಿವಾಲಿಲಾಲ್ ಸೋನಿಯನ್ನು ಪೊಲೀಸರು ಬಂಧಿಸಿದ್ದಾರೆ. ತಮ್ಮ ನೆರೆಹೊರೆಯವರ ಸಹಾಯದಿಂದ ಕಲ್ಪನಾ ಸೋನಿ (36) ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಾಗ ಘಟನೆ ಬೆಳಕಿಗೆ ಬಂದಿತ್ತು.
ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಮತ್ತು ಮಹಿಳೆಯ ಅತ್ತೆ-ಮಾವ ಕಿರುಕುಳ ನೀಡುತ್ತಿದ್ದರು ಎಂದು ಅಕ್ಕಪಕ್ಕದ ಮನೆಯವರು ಹೇಳಿದ್ದಾರೆಂದು ಪೊಲೀಸರಿಗೆ ತಿಳಿಸಿದ್ದಾರೆ. ದೇವಸ್ಥಾನಕ್ಕೆ ಭೇಟಿ ನೀಡಲು ಸಿದ್ಧವಾಗುತ್ತಿದ್ದಾಗ ಸ್ನಾನಗೃಹದಲ್ಲಿ ಜಾರಿ ಬಿದ್ದಿದ್ದಾಳೆ ಎಂದು ಅವರು ಹೇಳಿದ್ದರು.ಆಕೆಯ ದೇಹದ ಮೇಲೆ ಅನೇಕ ಗಾಯದ ಗುರುತುಗಳನ್ನು ಗಮನಿಸಿದ ನಂತರ ಆಸ್ಪತ್ರೆ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದರು.
ಆಕೆ ಬರುವಷ್ಟರಲ್ಲಿಯೇ ಮೃತಪಟ್ಟಿದ್ದಾರೆಂದು ಘೋಷಿಸಲಾಯಿತು.ಆಕೆಯ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿತ್ತು,ವರದಿಗಳ ಪ್ರಕಾರ ಕಲ್ಪನಾ ಅಸಹಜ ಸಾವು ಎಂದು ತಿಳಿದುಬಂದಿದೆ. ಜಯಂತಿಲಾಲ್ ಮತ್ತು ದಿವಾಲಿ ಕೊಲೆಯಲ್ಲಿ ಭಾಗಿಯಾಗಿದ್ದಾರೆಂದು ನಮ್ಮ ತನಿಖೆಯಿಂದ ತಿಳಿದುಬಂದ ನಂತರ, ನಾವು ಅವರನ್ನು ಬಂಧಿಸಿದ್ದೇವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮತ್ತಷ್ಟು ಓದಿ: ಅಮೆರಿಕದಿಂದ ಭಾರತಕ್ಕೆ ಬಂದು ಕೊಲೆ ಮಾಡಿ ಪರಾರಿಯಾಗುವಾಗ ಸಿಕ್ಕಿಬಿದ್ದ ಎನ್ಆರ್ಐ
ಅತ್ತಿಗೆ ಶೌಚಾಲಯದಲ್ಲಿ ಬಿದ್ದು ರಕ್ತಸ್ರಾವವಾಗುತ್ತಿದ್ದು, ಆಸ್ಪತ್ರೆಗೆ ಸಾಗಿಸಲು ಸಹಾಯ ಕೇಳಿದ್ದಾರೆ ಎಂದು ಪಕ್ಕದ ಮನೆಯವರೊಬ್ಬರು ಹೇಳಿದ್ದಾರೆ. ಕಲ್ಪನಾ ಬಾತ್ರೂಮ್ ನೆಲದ ಮೇಲೆ ಪ್ರಜ್ಞಾಹೀನಳಾಗಿ ಬಿದ್ದಿದ್ದಳು, ಸೀರೆಯನ್ನು ಸಡಿಲವಾಗಿ ಉಟ್ಟುಕೊಂಡಿದ್ದಳು. ಅವರು ಆಭರಣಗಳನ್ನು ಧರಿಸಿದ್ದರು ಮತ್ತು ಹಣೆಯ ಮೇಲೆ ಸಿಂಧೂರವಿತ್ತು ಎಂದು ಪೊಲೀಸರಿಗೆ ತಿಳಿಸಿದ್ದಾರೆ.
ನಾವು ಆರೋಪಿಗಳನ್ನು ಬಂಧಿಸಿದ್ದೇವೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಬೊಲಿಂಜ್ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




