ಮುಂಬೈನ ಅಪಾರ್ಟ್​ಮೆಂಟ್​ನಲ್ಲಿ ಭಾರೀ ಅಗ್ನಿ ದುರಂತ; ಓರ್ವ ಸಾವು, 26 ಜನರ ರಕ್ಷಣೆ

| Updated By: ಸುಷ್ಮಾ ಚಕ್ರೆ

Updated on: Oct 22, 2021 | 3:02 PM

Mumbai Fire: ಮುಂಬೈನ ಕರೇ ರಸ್ತೆಯಲ್ಲಿರುವ ಲೋವರ್ ಪರೇಲ್ ಏರಿಯಾದ ಅವಿಜ್ಞಾ ಪಾರ್ಕ್ ಅಪಾರ್ಟ್​ಮೆಂಟ್​ನ 19ನೇ ಮಹಡಿಯಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದೆ. ಕಟ್ಟಡದೊಳಗೆ ಸಾಕಷ್ಟು ಜನರು ಸಿಲುಕಿರುವ ಸಾಧ್ಯತೆಯಿದೆ.

ಮುಂಬೈನ ಅಪಾರ್ಟ್​ಮೆಂಟ್​ನಲ್ಲಿ ಭಾರೀ ಅಗ್ನಿ ದುರಂತ; ಓರ್ವ ಸಾವು, 26 ಜನರ ರಕ್ಷಣೆ
ಮುಂಬೈನಲ್ಲಿ ಹೊತ್ತಿ ಉರಿಯುತ್ತಿರುವ ಕಟ್ಟಡ
Follow us on

ಮುಂಬೈ: ಮಹಾರಾಷ್ಟ್ರದ ಮುಂಬೈನಲ್ಲಿ ಮತ್ತೊಮ್ಮೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಬಹುಮಹಡಿ ಕಟ್ಟಡವೊಂದರಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಮುಂಬೈನ ಕರೇ ರಸ್ತೆಯಲ್ಲಿರುವ ಲೋವರ್ ಪರೇಲ್ ಏರಿಯಾದ ಅವಿಜ್ಞಾ ಪಾರ್ಕ್ ಅಪಾರ್ಟ್​ಮೆಂಟ್​ನ 19ನೇ ಮಹಡಿಯಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದು, ಅಗ್ನಿಶಾಮಕ ದಳದ ವಾಹನಗಳು ಆಗಮಿಸಿ, ಬೆಂಕಿ ನಂದಿಸುವ ಪ್ರಯತ್ನದಲ್ಲಿವೆ. ಈ ದುರಂತದಲ್ಲಿ ಬೆಂಕಿ ಹೊತ್ತಿಕೊಂಡಿರುವ ಫ್ಲಾಟ್​ನ ಕಿಟಕಿಯಿಂದ ಬಚಾವಾಗಲು ಪ್ರಯತ್ನಿಸಿದ ವ್ಯಕ್ತಿಯೊಬ್ಬ ಮೇಲಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ. 

ಇದು ರೆಸಿಡೆನ್ಷಿಯಲ್ ಕಟ್ಟಡವಾಗಿರುವುದರಿಂದ ಕಟ್ಟಡದೊಳಗೆ ಕುಟುಂಬಗಳು ವಾಸವಾಗಿದ್ದಾರೆ. ಹೀಗಾಗಿ, ಬೆಂಕಿ ಹೊತ್ತಿಕೊಂಡ ಕಟ್ಟಡದೊಳಗೆ ಸಾಕಷ್ಟು ಜನರು ಸಿಲುಕಿರುವ ಸಾಧ್ಯತೆಯಿದೆ. ಮುಂಬೈನ 60 ಮಹಡಿಯ ಅಪಾರ್ಟ್​ಮೆಂಟ್​ನ 19ನೇ ಮಹಡಿಯಲ್ಲಿ ಅಗ್ನಿ ಆಕಸ್ಮಿಕ ನಡೆದಿದ್ದು, 17ರಿಂದ 25ನೇ ಮಹಡಿಯವರೆಗೂ ಬೆಂಕಿ ವ್ಯಾಪಿಸಿದೆ. ಕಟ್ಟಡದ ಮೇಲಿಂದ ಬಿದ್ದು ಸಾವನನ್ಪ್ಪಿದ ವ್ಯಕ್ತಿಯನ್ನು 30 ವರ್ಷದ ಅರುಣ್​ ತಿವಾರಿ ಎಂದು ಗುರುತಿಸಲಾಗಿದೆ. ಬೆಂಕಿಯಿಂದ ರಕ್ಷಿಸಿಕೊಳ್ಳುವಾಗ ಕೆಳಗೆ ಬಿದ್ದು ಆತ ಸಾವನ್ನಪ್ಪಿದ್ದಾನೆ.

60 ಮಹಡಿಗಳಿರುವ ಈ ಪಾರ್ಟ್​ಮೆಂಟ್​ನ 19ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಈಗಾಗಲೇ 26 ಜನರನ್ನು ರಕ್ಷಿಸಲಾಗಿದೆ. ಮೇಯರ್ ಸೇರಿದಂತೆ ಬಿಎಂಸಿಯ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ  ನಡೆಸಿದ್ದಾರೆ. ವ್ಯಾಪಿಸುತ್ತಲೇ ಇರುವ ಬೆಂಕಿಯನ್ನು ಆರಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

 

ಈ ಅಗ್ನಿ ಅವಘಡದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಬಿಎಂಸಿ ಮುಖ್ಯಸ್ಥ ಇಕ್ಬಾಲ್ ಸಿಂಗ್ ಚಹಾಲ್ ಆದೇಶ ನೀಡಿದ್ದಾರೆ. ಅಪಾರ್ಟ್​ಮೆಂಟ್​ ನಿವಾಸಿಗಳ ಪ್ರಕಾರ ಆ ಅಪಾರ್ಟ್​ಮೆಂಟ್​ನಲ್ಲಿ ಎಲ್ಲ ರೀತಿಯ ಬೆಂಕಿ ಸುರಕ್ಷತಾ ಕ್ರಮಗಳನ್ನು ಅಳವಡಿಸಲಾಗಿತ್ತು. ಆದರೂ ಬೆಂಕಿ ದುರಂತ ಸಂಭವಿಸಿದೆ.

ಇದನ್ನೂ ಓದಿ: Bengaluru: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ; ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ

ಸೂರತ್​ನ ಪ್ಯಾಕೇಜಿಂಗ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ; ಇಬ್ಬರು ಸಾವು, 125 ಮಂದಿಗೆ ಗಾಯ

Published On - 12:43 pm, Fri, 22 October 21