ಮುಂಬೈ: ರೆಸ್ಟೋರೆಂಟ್​ನಲ್ಲಿ ಅಗ್ನಿ ಅವಘಡ, ಓರ್ವ ಸಾವು

ಮುಂಬೈನ ರೆಸ್ಟೋರೆಂಟ್​ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಓರ್ವ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಮುಂಜಾನೆ ಮುಂಬೈನ ಗ್ರಾಂಟ್ ರಸ್ತೆಯ ಕಮಾತಿಪುರದ ರೆಸ್ಟೋರೆಂಟ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಹತ್ತಿರದ ಮಾಲ್ ಮತ್ತು ಬಹುಮಹಡಿ ಕಟ್ಟಡವನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ ಎಂದು ಮುಂಬೈ ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಆವರಣದಲ್ಲಿ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ದೇಹ ಪತ್ತೆಯಾಗಿದೆ.

ಬೆಂಕಿ
Follow us
|

Updated on: Jan 26, 2024 | 8:50 AM

ಮುಂಬೈನ ರೆಸ್ಟೋರೆಂಟ್​ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಓರ್ವ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಮುಂಜಾನೆ ಮುಂಬೈನ ಗ್ರಾಂಟ್ ರಸ್ತೆಯ ಕಮಾತಿಪುರದ ರೆಸ್ಟೋರೆಂಟ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಹತ್ತಿರದ ಮಾಲ್ ಮತ್ತು ಬಹುಮಹಡಿ ಕಟ್ಟಡವನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ ಎಂದು ಮುಂಬೈ ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಆವರಣದಲ್ಲಿ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ದೇಹ ಪತ್ತೆಯಾಗಿದೆ.

ಬೆಳಗಿನ ಜಾವ 2 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡ ನಂತರ 16 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಒಟ್ಟು 16 ಅಗ್ನಿಶಾಮಕ ವಾಹನಗಳು ಕಾರ್ಯನಿರ್ವಹಿಸುತ್ತಿವೆ. ಬೆಂಕಿಯ ಕಾರಣ, ಹತ್ತಿರದ ಮಾಲ್ ಮತ್ತು ಬಹುಮಹಡಿ ಕಟ್ಟಡವನ್ನು ಖಾಲಿ ಮಾಡಲಾಗಿದೆ. ಇಲ್ಲಿಯವರೆಗೆ ಯಾರಿಗೂ ಯಾವುದೇ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಮುಂಬೈ ಅಗ್ನಿಶಾಮಕ ಸೇವೆ ತಿಳಿಸಿದೆ.

ಒಬ್ಬ ಅಪರಿಚಿತ ವ್ಯಕ್ತಿಯ ಸುಟ್ಟ ದೇಹವು ಆವರಣದಲ್ಲಿನ ಸ್ನಾನಗೃಹದಲ್ಲಿ ಕಂಡುಬಂದಿದೆ, ಯಾವುದೇ ಗಾಯಾಳು ಅಥವಾ ಕಾಣೆಯಾದ ವ್ಯಕ್ತಿಯ ಬಗ್ಗೆ ವಿಚಾರಣೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಮತಿಪುರದಲ್ಲಿ ಬೆಂಕಿ ಹತೋಟಿಗೆ ಬಂದರೂ ಹಿಂಬದಿಯಲ್ಲಿ ಮತ್ತೆ ಹೊಗೆ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಜೆಸಿಬಿ ಸಹಾಯದಿಂದ ಮುಂದೆ ಸಾಗಲು ಯತ್ನಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ

ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ

ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ

ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ

ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...

ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ

Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ

Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ