ಮುಂಬೈನ ರೆಸ್ಟೋರೆಂಟ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಓರ್ವ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ.
ಮುಂಜಾನೆ ಮುಂಬೈನ ಗ್ರಾಂಟ್ ರಸ್ತೆಯ ಕಮಾತಿಪುರದ ರೆಸ್ಟೋರೆಂಟ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಹತ್ತಿರದ ಮಾಲ್ ಮತ್ತು ಬಹುಮಹಡಿ ಕಟ್ಟಡವನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ ಎಂದು ಮುಂಬೈ ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಆವರಣದಲ್ಲಿ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ದೇಹ ಪತ್ತೆಯಾಗಿದೆ.
ಬೆಳಗಿನ ಜಾವ 2 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡ ನಂತರ 16 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ.
ಒಟ್ಟು 16 ಅಗ್ನಿಶಾಮಕ ವಾಹನಗಳು ಕಾರ್ಯನಿರ್ವಹಿಸುತ್ತಿವೆ. ಬೆಂಕಿಯ ಕಾರಣ, ಹತ್ತಿರದ ಮಾಲ್ ಮತ್ತು ಬಹುಮಹಡಿ ಕಟ್ಟಡವನ್ನು ಖಾಲಿ ಮಾಡಲಾಗಿದೆ. ಇಲ್ಲಿಯವರೆಗೆ ಯಾರಿಗೂ ಯಾವುದೇ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಮುಂಬೈ ಅಗ್ನಿಶಾಮಕ ಸೇವೆ ತಿಳಿಸಿದೆ.
ಒಬ್ಬ ಅಪರಿಚಿತ ವ್ಯಕ್ತಿಯ ಸುಟ್ಟ ದೇಹವು ಆವರಣದಲ್ಲಿನ ಸ್ನಾನಗೃಹದಲ್ಲಿ ಕಂಡುಬಂದಿದೆ, ಯಾವುದೇ ಗಾಯಾಳು ಅಥವಾ ಕಾಣೆಯಾದ ವ್ಯಕ್ತಿಯ ಬಗ್ಗೆ ವಿಚಾರಣೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
#UPDATE | One death has been reported so far in the fire that broke out at a restaurant in Kamathipura, Grant Road. One unknown male person’s charred body was found in the bathroom at said premises and was moved to J.J. Hospital in Amb 108. Enquiry about any other injured or… https://t.co/w7Bb9XKNFe
— ANI (@ANI) January 26, 2024
ಕಾಮತಿಪುರದಲ್ಲಿ ಬೆಂಕಿ ಹತೋಟಿಗೆ ಬಂದರೂ ಹಿಂಬದಿಯಲ್ಲಿ ಮತ್ತೆ ಹೊಗೆ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಜೆಸಿಬಿ ಸಹಾಯದಿಂದ ಮುಂದೆ ಸಾಗಲು ಯತ್ನಿಸುತ್ತಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ