ಮುಂಬೈನ ಕಂದೀವಾಲಿಯ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹಾವೀರ ನಗರದ ಪವನ್ಧಾಮ್ ವೀಣಾ ಸಂತೂರ್ ಕಟ್ಟಡದಲ್ಲಿ ಘಟನೆ ನಡೆದಿದೆ, ಮೊದಲ ಮಹಡಿಯಲ್ಲಿದ್ದ ಎಲೆಕ್ಟ್ರಿಕ್ ವಸ್ತುಗಳಿಗೆ ಬೆಂಕಿ ತಗುಲಿತ್ತು. ಅಗ್ನಿಶಾಮಕ ದಳದ 10 ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ಮುಂದುವರೆದಿದೆ.
ಮಾಹಿತಿ ಪ್ರಕಾರ, ಮಧ್ಯಾಹ್ನ 12.27 ರ ಸುಮಾರಿಗೆ ಪವನ್ ಧಾಮ್ ವೀಣಾ ಸಂತೂರ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡಕ್ಕೆ ಬೆಂಕಿ ತಗುಲಿರುವ ಬಗ್ಗೆ ಮಾಹಿತಿ ಪಡೆದ ತಕ್ಷಣ ಎಂಟು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸಪಟ್ಟು ಕಟ್ಟಡದಲ್ಲಿ ಬೆಂಕಿಯನ್ನು ನಿಯಂತ್ರಿಸಿದರು. ಎಲ್ಲಾ ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ