AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಲ್ಲಿ ಕಳೆದ 24 ಗಂಟೆಗಳಲ್ಲಿ ಮೂರು ವಾರಗಳಲ್ಲೇ ಅತಿ ಕಡಿಮೆ ಕೊರೊನಾ ಸೋಂಕಿತರು ಪತ್ತೆ

Mumbai Covid Update: ನಿನ್ನೆ ಮುಂಬೈನಲ್ಲಿ 42 ಸಾವಿರ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಕಳೆದ 24 ಗಂಟೆಗಳಲ್ಲಿ ಮುಂಬೈನಲ್ಲಿ 5,888 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಮುಂಬೈನಲ್ಲಿ ಕಳೆದ 24 ಗಂಟೆಗಳಲ್ಲಿ ಮೂರು ವಾರಗಳಲ್ಲೇ ಅತಿ ಕಡಿಮೆ ಕೊರೊನಾ ಸೋಂಕಿತರು ಪತ್ತೆ
ಕೊರೊನಾವೈರಸ್ ಪರೀಕ್ಷೆ
guruganesh bhat
|

Updated on:Apr 24, 2021 | 9:01 PM

Share

ಮುಂಬೈ: ಕೊವಿಡ್​ನಿಂದ ಬಳಲುತ್ತಿದ್ದ ಮುಂಬೈ ಇಂದು ಚಿಕ್ಕದೊಂದು ನಿಟ್ಟುಸಿರು ಬಿಟ್ಟಿದೆ. ಕಳೆದ 24 ಗಂಟೆಗಳಲ್ಲಿ ಪತ್ತೆಯಾದ ಕೊರೊನಾ ಸೋಂಕಿತರ ಸಂಖ್ಯೆ ಕಳೆದ ಆರು ದಿನಗಳಲ್ಲೇ ಅತಿ ಕಡಿಮೆಯಾಗಿದೆ. ನಿನ್ನೆ 42 ಸಾವಿರ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಕಳೆದ 24 ಗಂಟೆಗಳಲ್ಲಿ ಮುಂಬೈನಲ್ಲಿ 5,888 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಅಲ್ಲದೇ ದಿನದ ಕಳೆದ ವಾರ ದಾಖಲಾಗಿದ್ದ ಶೇ 18ಪಾಸಿಟಿವಿಟಿ ದರ ಇಂದು ಶೇ 15ಕ್ಕೆ ಕುಸಿತವಾಗಿದೆ. ದೆಹಲಿಯಂತೆಯೇ ಮುಂಬೈನ ಹಲವು ಆಸ್ಪತ್ರೆಗಳಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆ ಕಾಣಿಸಿಕೊಂಡಿತ್ತು ಹೀಗಾಗಿ, ಬೃಹನ್ ಮುಂಬೈ ಮಹಾನಗರ ಪಾಲಿಕೆಯು ಹೊಸದಾಗಿ 16 ಆಮ್ಲಜನಕ ಉತ್ಪಾದನಾ ಘಟಕಗಳನ್ನು ರಚಿಸುವುದಾಗಿ ತಿಳಿಸಿತ್ತು. ಇವುಗಳಿಂದ ಮುಂಬೈ ನಗರದ 12 ಆಸ್ಪತ್ರೆಗಳಿಗೆ ಪ್ರತಿದಿನ ಒಟ್ಟು 43 ಮೆಟ್ರಿಕ್ ಟನ್​ಗಳಷ್ಟು ಆಕ್ಸಿಜನ್ ಪೂರೈಕೆ ಆಗಲಿದೆ ಎಂದು ಹೇಳಲಾಗಿತ್ತು. ಈ ಯೋಜನೆಯು ಮುಂದಿನ ಒಂದು ಹಂತದಲ್ಲಿ ಪೂರ್ಣಗೊಳ್ಳುವುದಾಗಿಯೂ, ಒಟ್ಟ 90 ಕೋಟಿ ವೆಚ್ಚದಲ್ಲಿ ಆಮ್ಲಜನಕ ಉತ್ಪಾದನಾ ಘಟಕ ನಿರ್ಮಿಸುವುದಾಗಿಯೂ ಮುಂಬೈ ಮಹಾನಗರ ಪಾಲಿಕೆ ತಿಳಿಸಿದೆ.

ಅಲ್ಲದೇ ಇವರೆಗೆ ಹೆಚ್ಚುತ್ತಿರುವ ಕೊರೊನಾ ಸೋಂಕನ್ನು ತಡೆಯನ್ನು ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದೆ.

ಮಹಾರಾಷ್ಟ್ರದಲ್ಲಿ ಕೊವಿಡ್ ರೋಗಿಗಳು ಆಕ್ಸಿಜನ್ ಲಭಿಸದೆ ಸಂಕಷ್ಟಕ್ಕೀಡಾಗಿರುವ ಹೊತ್ತಲ್ಲಿ ಇದೇ ಮೊದಲ ಬಾರಿ ಆಕ್ಸಿಜನ್ ಎಕ್ಸ್​ಪ್ರೆಸ್ ಗುರುವಾರ ವಿಶಾಖಪಟ್ಟಣಂನಿಂದ ಮಹಾರಾಷ್ಟ್ರಕ್ಕೆ ಆಕ್ಸಿಜನ್ ಸಾಗಿಸಿದೆ.ಆಂಧ್ರ ಪ್ರದೇಶದ ರಾಷ್ಟ್ರೀಯ ಇಸ್ಪತ್ ನಿಗಮ್ ( ಆರ್‌ಐಎನ್‌ಎಲ್) ನಿಂದ ಗುರುವಾರ ಆಕ್ಸಿಜನ್ ಟ್ಯಾಂಕರ್ ಹೊತ್ತು ಈ ರೈಲು ಮಹಾರಾಷ್ಟ್ರಕ್ಕೆ ಹೊರಟಿತ್ತು. ಮಹಾರಾಷ್ಟ್ರದಿಂದ 7 ಖಾಲಿ ಟ್ಯಾಂಕರ್​ಗಳು ಇಂದು ಬೆಳಗ್ಗೆ ವಿಶಾಖಪಟ್ಟಣದ ರಾಷ್ಟ್ರೀಯ ಇಸ್ಪತ್ ನಿಗಮ್ ತಲುಪಿದೆ. ಬೆಳಗ್ಗಿನಿಂದ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ (LMO) ಇದಕ್ಕೆ ತುಂಬಿಸಲಾಗುತ್ತಿದೆ ಎಂದು ರೈಲ್ವೆ ಇಲಾಖೆ ಗುರುವಾರ ತಮ್ಮ ಪ್ರಕಟಣೆಯಲ್ಲಿ ಹೇಳಿದೆ.

ಪ್ರತಿ ಟ್ಯಾಂಕರ್‌ಗೆ 15 ಟನ್‌ಗಳಷ್ಟು ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ತುಂಬಿದೆ ಮತ್ತು ಸಂಜೆ ರೈಲು ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಪೂರ್ವ ಕರಾವಳಿ ರೈಲ್ವೆಯ ವಾಲ್ಟೇರ್ ವಿಭಾಗ ಮತ್ತು ಆರ್‌ಐಎನ್‌ಎಲ್ ಅಧಿಕಾರಿಗಳು ಜಂಟಿ ಪ್ರಯತ್ನದಿಂದ ಯೋಜನೆಯನ್ನು ಯಶಸ್ವಿಗೊಳಿಸಿದರು. ಕೊವಿಡ್ ಪ್ರಕರಣಗಳು ಏರಿಕೆಯಾಗಿರುವ ಈ ಹೊತ್ತಲ್ಲಿ ಇಂದು ಪ್ರಯೋಜನಕಾರಿ ಆಗಿದೆ ಎಂದು ರೈಲ್ವೆ ಹೇಳಿದೆ.

ರೈಲ್ವೆ ಇಲಾಖೆ ದೇಶದ ವಿವಿಧ ಭಾಗಗಳಿಗೆ ಆಮ್ಲಜನಕವನ್ನು ಉತ್ಪಾದಿಸುವ ಉಕ್ಕಿನ ಸ್ಥಾವರಗಳಿಂದ ಆಕ್ಸಿಜನ್  ರೈಲು ಮೂಲಕ ಆಕ್ಸಿಜನ್ ಸಾಗಿಸುತ್ತಿದೆ.

ರೈಲ್ವೆ ಅಗತ್ಯ ಸರಕುಗಳನ್ನು ಸಾಗಿಸುತ್ತದೆ. ಕಳೆದ ವರ್ಷ ಲಾಕ್‌ಡೌನ್ ಸಮಯದಲ್ಲಿ ಸಹ ಇದೇ ರೀತಿ ಅಗತ್ಯ ವಸ್ತುಗಳನ್ನು ಸಾಗಿಸಿದ್ದು ತುರ್ತು ಸಂದರ್ಭಗಳಲ್ಲಿ ರಾಷ್ಟ್ರದ ಸೇವೆಯನ್ನು ಮುಂದುವರೆಸಿದೆ. ಈ ಬಾರಿ ದೇಶದ ವಿವಿಧ ಭಾಗಗಳಿಗೆ ‘ಆಕ್ಸಿಜನ್ ಎಕ್ಸ್‌ಪ್ರೆಸ್’ ಮೂಲಕರೋಗಿಗಳಿಗೆ ಮತ್ತು ವಿವಿಧ ಆಸ್ಪತ್ರೆಗಳಿಗೆ ಸಹಾಯ ಮಾಡುತ್ತದೆ ಎಂದು ರೈಲ್ವೆ ಹೇಳಿದೆ.

ಈ ಕಾರ್ಯವನ್ನು ನಿರ್ವಹಿಸಿದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಚೇತನ್ ಶ್ರೀವಾಸ್ತವ ನೇತೃತ್ವದ ವಾಲ್ಟೇರ್ ತಂಡವನ್ನು ಜನರಲ್ ಮ್ಯಾನೇಜರ್ ವಿದ್ಯಾ ಭೂಷಣ್ ಅಭಿನಂದಿಸಿದ್ದಾರೆ.

ಇದನ್ನೂ ಓದಿ:  Karnataka Covid Update: ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 29,438 ಜನರಿಗೆ ಕೊರೊನಾ ದೃಢ, 208 ಜನರ ಸಾವು

Covid 19 Treatment in Bengaluru: ಬೆಂಗಳೂರಿನಲ್ಲಿ ತುರ್ತು ಕೊರೊನಾ ಆರೋಗ್ಯ ಸೇವೆಗಳಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ

Explainer: ಕೊವಿಡ್ ನಿರ್ವಹಣೆ ಕೈಪಿಡಿ, ನಿಮ್ಮ ಮನೆಯಲ್ಲಿಯೂ ಇರಲಿ ಈ ಆಪ್ತಮಿತ್ರ

(Mumbai first drop in last six days in covid cases reports 5888 cases in last 24 hours)

Published On - 8:51 pm, Sat, 24 April 21

ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಜಾಥಾ
ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಜಾಥಾ
ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು: ಸಿಟಿ ರವಿ ಆರೋಪ
ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು: ಸಿಟಿ ರವಿ ಆರೋಪ
ಕೊಪ್ಪಳದಲ್ಲಿ ಯೂರಿಯಾಗಾಗಿ ಒಂದು ಕಿಮೀ ವರೆಗೂ ಸರತಿ ಸಾಲಿನಲ್ಲಿ ನಿಂತ ರೈತರು‌
ಕೊಪ್ಪಳದಲ್ಲಿ ಯೂರಿಯಾಗಾಗಿ ಒಂದು ಕಿಮೀ ವರೆಗೂ ಸರತಿ ಸಾಲಿನಲ್ಲಿ ನಿಂತ ರೈತರು‌