ಮುಂಬೈ: ಮನೆಗೆ ಬೆಂಕಿ ತಗುಲಿ ಕುಟುಂಬದ ಐವರು ಸಾವು

ಮುಂಬೈನ ಚೆಂಬೂರಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಅಪಘಾತದಲ್ಲಿ 5 ಮಂದಿ ಸಜೀವ ದಹನವಾಗಿರುವ ಬಗ್ಗೆ ವರದಿಯಾಗಿದೆ. ಇಂದು ಮುಂಜಾನೆ ಚೆಂಬೂರಿನ ಸಿದ್ಧಾರ್ಥ್ ಕಾಲೋನಿಯಲ್ಲಿರುವ ಅಂಗಡಿಯೊಂದರಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಇಡೀ ಅಂಗಡಿಗೆ ಬೆಂಕಿ ಆವರಿಸಿದ್ದು, ಅದರ ಮೇಲಿನ ಮಹಡಿಯಲ್ಲಿ ವಾಸಿಸುತ್ತಿದ್ದ ಕುಟುಂಬದ ಐವರು ಸುಟ್ಟು ಕರಕಲಾಗಿದ್ದಾರೆ.

ಮುಂಬೈ: ಮನೆಗೆ ಬೆಂಕಿ ತಗುಲಿ ಕುಟುಂಬದ ಐವರು ಸಾವು
ಅಗ್ನಿ ಅವಘಡ

Updated on: Oct 06, 2024 | 8:55 AM

ಮುಂಬೈನ ಚೆಂಬೂರಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಅಪಘಾತದಲ್ಲಿ 5 ಮಂದಿ ಸಜೀವ ದಹನವಾಗಿರುವ ಬಗ್ಗೆ ವರದಿಯಾಗಿದೆ. ಇಂದು ಮುಂಜಾನೆ ಚೆಂಬೂರಿನ ಸಿದ್ಧಾರ್ಥ್ ಕಾಲೋನಿಯಲ್ಲಿರುವ ಅಂಗಡಿಯೊಂದರಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಇಡೀ ಅಂಗಡಿಗೆ ಬೆಂಕಿ ಆವರಿಸಿದ್ದು, ಅದರ ಮೇಲಿನ ಮಹಡಿಯಲ್ಲಿ ವಾಸಿಸುತ್ತಿದ್ದ ಕುಟುಂಬದ ಐವರು ಸುಟ್ಟು ಕರಕಲಾಗಿದ್ದಾರೆ.

ಬೆಂಕಿ ಅವಘಡದ ಬಗ್ಗೆ ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಒಳಗೆ ಸಿಲುಕಿದ್ದವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಗ್ರೌಂಡ್ ಪ್ಲಸ್ ಒನ್ (ಜಿ+1) ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿಯ ಪ್ರಕಾರ, ಬೆಂಕಿ ಮೀಟರ್ ಬಾಕ್ಸ್‌ಗೆ ತಗುಲಿತು ಮತ್ತು ಶೀಘ್ರದಲ್ಲೇ ಕಟ್ಟಡದ ಇತರ ಭಾಗಗಳಿಗೆ ಹರಡಿತು. ನೆಲ ಮಹಡಿಯಲ್ಲಿ ಅಂಗಡಿಯಿದ್ದು, ಮೇಲಿನ ಮಹಡಿಯಲ್ಲಿ ಕುಟುಂಬ ವಾಸವಾಗಿತ್ತು.

ಮಾಹಿತಿ ಶೀಘ್ರ ಅಪ್​ಡೇಟ್ ಆಗಲಿದೆ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us