ರಿಯಾ ಚಕ್ರವರ್ತಿ ಮುಕ್ತ, ಮುಕ್ತ, ಮುಕ್ತಾ.. ಸಿಕ್ತು ಷರತ್ತು ಬದ್ಧ ಜಾಮೀನು
ಮುಂಬೈ: ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧನದಲ್ಲಿದ್ದ ಬಾಲಿವುಡ್ ನಟಿ ರಿಯಾ ಚಕ್ರವರ್ತಿಗೆ ಜಾಮೀನು ಮಂಜೂರಾಗಿದೆ. ಮುಂಬೈ ಬಿಟ್ಟು ಹೊರಹೋಗುವಂತಿಲ್ಲ ಎಂದು ಬಾಂಬೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಇದರೊಂದಿಗೆ ರಿಯಾ ಚಕ್ರವರ್ತಿ ಜೈಲಿನಿಂದ ಇಂದು ಬಿಡುಗಡೆಯಾಗಲಿದ್ದಾರೆ. ಹೀಗಾಗಿ 28 ದಿನಗಳ ಬಳಿಕ ರಿಯಾ ಚಕ್ರವರ್ತಿ ಜೈಲಿನಿಂದ ಹೊರಬರಲಿದ್ದಾರೆ. ರಿಯಾ ಚಕ್ರವರ್ತಿಗೆ 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ಸಿಕ್ಕಿದೆ. ಅಲ್ಲದೆ ರಿಯಾ ಬಿಡುಗಡೆಯಾದ ನಂತರ 10 ದಿನಗಳ ಕಾಲ ಪೊಲೀಸ್ […]
ಮುಂಬೈ: ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧನದಲ್ಲಿದ್ದ ಬಾಲಿವುಡ್ ನಟಿ ರಿಯಾ ಚಕ್ರವರ್ತಿಗೆ ಜಾಮೀನು ಮಂಜೂರಾಗಿದೆ. ಮುಂಬೈ ಬಿಟ್ಟು ಹೊರಹೋಗುವಂತಿಲ್ಲ ಎಂದು ಬಾಂಬೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಇದರೊಂದಿಗೆ ರಿಯಾ ಚಕ್ರವರ್ತಿ ಜೈಲಿನಿಂದ ಇಂದು ಬಿಡುಗಡೆಯಾಗಲಿದ್ದಾರೆ.
ಹೀಗಾಗಿ 28 ದಿನಗಳ ಬಳಿಕ ರಿಯಾ ಚಕ್ರವರ್ತಿ ಜೈಲಿನಿಂದ ಹೊರಬರಲಿದ್ದಾರೆ. ರಿಯಾ ಚಕ್ರವರ್ತಿಗೆ 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ಸಿಕ್ಕಿದೆ. ಅಲ್ಲದೆ ರಿಯಾ ಬಿಡುಗಡೆಯಾದ ನಂತರ 10 ದಿನಗಳ ಕಾಲ ಪೊಲೀಸ್ ಠಾಣೆಗೆ ಬಂದು ಹಾಜರಾತಿಗೆ ಸಹಿ ಮಾಡಬೇಕು.
ಪಾಸ್ ಪೋರ್ಟ್ ನೀಡಬೇಕು, ನ್ಯಾಯಾಲಯದ ಅನುಮತಿಯಿಲ್ಲದೆ ವಿದೇಶಕ್ಕೆ ಪ್ರಯಾಣಿಸಬಾರದು ಮತ್ತು ಮುಂಬೈ ತೊರೆಯಬೇಕಾದರೆ ತನಿಖಾಧಿಕಾರಿಗೆ ತಿಳಿಸಬೇಕು ಎಂದು ನ್ಯಾಯಾಲಯ ಹೇಳಿದೆ. ಇನ್ನು ರಿಯಾ ಸಹೋದರ ಶೋವಿಕ್ ಚಕ್ರವರ್ತಿ ಜಾಮೀನು ಅರ್ಜಿ ವಜಾಗೊಂಡಿದೆ.
ಇದನ್ನೂ ಓದಿ: ಅತ್ತ, ನಟಿ ರಿಯಾ ಚಕ್ರವರ್ತಿಯನ್ನು ಬಂಧಿಸಿದ NCB ಅಧಿಕಾರಿಗಳು
Published On - 11:24 am, Wed, 7 October 20