ರಿಯಾ ಚಕ್ರವರ್ತಿ ಮುಕ್ತ, ಮುಕ್ತ, ಮುಕ್ತಾ.. ಸಿಕ್ತು ಷರತ್ತು ಬದ್ಧ ಜಾಮೀನು

ಮುಂಬೈ: ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧನದಲ್ಲಿದ್ದ ಬಾಲಿವುಡ್ ನಟಿ ರಿಯಾ ಚಕ್ರವರ್ತಿಗೆ ಜಾಮೀನು ಮಂಜೂರಾಗಿದೆ. ಮುಂಬೈ ಬಿಟ್ಟು ಹೊರಹೋಗುವಂತಿಲ್ಲ ಎಂದು ಬಾಂಬೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದೆ. ಇದರೊಂದಿಗೆ ರಿಯಾ ಚಕ್ರವರ್ತಿ ಜೈಲಿನಿಂದ ಇಂದು ಬಿಡುಗಡೆಯಾಗಲಿದ್ದಾರೆ. ಹೀಗಾಗಿ 28 ದಿನಗಳ ಬಳಿಕ ರಿಯಾ ಚಕ್ರವರ್ತಿ ಜೈಲಿನಿಂದ ಹೊರಬರಲಿದ್ದಾರೆ. ರಿಯಾ ಚಕ್ರವರ್ತಿಗೆ 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ಸಿಕ್ಕಿದೆ. ಅಲ್ಲದೆ ರಿಯಾ ಬಿಡುಗಡೆಯಾದ ನಂತರ 10 ದಿನಗಳ ಕಾಲ ಪೊಲೀಸ್ […]

ರಿಯಾ ಚಕ್ರವರ್ತಿ ಮುಕ್ತ, ಮುಕ್ತ, ಮುಕ್ತಾ.. ಸಿಕ್ತು ಷರತ್ತು ಬದ್ಧ ಜಾಮೀನು
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Oct 07, 2020 | 11:43 AM

ಮುಂಬೈ: ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧನದಲ್ಲಿದ್ದ ಬಾಲಿವುಡ್ ನಟಿ ರಿಯಾ ಚಕ್ರವರ್ತಿಗೆ ಜಾಮೀನು ಮಂಜೂರಾಗಿದೆ. ಮುಂಬೈ ಬಿಟ್ಟು ಹೊರಹೋಗುವಂತಿಲ್ಲ ಎಂದು ಬಾಂಬೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದೆ. ಇದರೊಂದಿಗೆ ರಿಯಾ ಚಕ್ರವರ್ತಿ ಜೈಲಿನಿಂದ ಇಂದು ಬಿಡುಗಡೆಯಾಗಲಿದ್ದಾರೆ.

ಹೀಗಾಗಿ 28 ದಿನಗಳ ಬಳಿಕ ರಿಯಾ ಚಕ್ರವರ್ತಿ ಜೈಲಿನಿಂದ ಹೊರಬರಲಿದ್ದಾರೆ. ರಿಯಾ ಚಕ್ರವರ್ತಿಗೆ 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ಸಿಕ್ಕಿದೆ. ಅಲ್ಲದೆ ರಿಯಾ ಬಿಡುಗಡೆಯಾದ ನಂತರ 10 ದಿನಗಳ ಕಾಲ ಪೊಲೀಸ್ ಠಾಣೆಗೆ ಬಂದು ಹಾಜರಾತಿಗೆ ಸಹಿ ಮಾಡಬೇಕು.

ಪಾಸ್ ಪೋರ್ಟ್ ನೀಡಬೇಕು, ನ್ಯಾಯಾಲಯದ ಅನುಮತಿಯಿಲ್ಲದೆ ವಿದೇಶಕ್ಕೆ ಪ್ರಯಾಣಿಸಬಾರದು ಮತ್ತು ಮುಂಬೈ ತೊರೆಯಬೇಕಾದರೆ ತನಿಖಾಧಿಕಾರಿಗೆ ತಿಳಿಸಬೇಕು ಎಂದು ನ್ಯಾಯಾಲಯ ಹೇಳಿದೆ. ಇನ್ನು ರಿಯಾ ಸಹೋದರ ಶೋವಿಕ್ ಚಕ್ರವರ್ತಿ ಜಾಮೀನು ಅರ್ಜಿ ವಜಾಗೊಂಡಿದೆ.

ಇದನ್ನೂ ಓದಿ: ಅತ್ತ, ನಟಿ ರಿಯಾ ಚಕ್ರವರ್ತಿಯನ್ನು ಬಂಧಿಸಿದ NCB ಅಧಿಕಾರಿಗಳು

Published On - 11:24 am, Wed, 7 October 20

ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Loading...
Unable to load recommendations.
Follow Us