Mumbai: ನಿರ್ಮಾಣ ಹಂತದಲ್ಲಿದ್ದ ಲಿಫ್ಟ್​ ಕುಸಿದುಬಿದ್ದು 6 ಮಂದಿ ಸಾವು; ಗುತ್ತಿಗೆದಾರ, ಮೇಲ್ವಿಚಾರಕ ಅರೆಸ್ಟ್​

ಎನ್​​ಎಂ ಜೋಶಿ ಮಾರ್ಗ್​ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದರಲ್ಲಿ ಕೇವಲ ಗುತ್ತಿಗೆದಾರ, ಮೇಲ್ವಿಚಾರಕನ ಪಾತ್ರವಷ್ಟೇ ಅಲ್ಲ, ಇನ್ನೂ ಹಲವರು ಆರೋಪಿಗಳು ಇದ್ದಾರೆ ಎಂದು ತಿಳಿಸಿದ್ದಾರೆ.

Mumbai: ನಿರ್ಮಾಣ ಹಂತದಲ್ಲಿದ್ದ ಲಿಫ್ಟ್​ ಕುಸಿದುಬಿದ್ದು 6 ಮಂದಿ ಸಾವು; ಗುತ್ತಿಗೆದಾರ, ಮೇಲ್ವಿಚಾರಕ ಅರೆಸ್ಟ್​
ಲಿಫ್ಟ್ ಕುಸಿತವಾದ ಕಟ್ಟಡ
Follow us
TV9 Web
| Updated By: Lakshmi Hegde

Updated on: Jul 25, 2021 | 6:23 PM

ಮುಂಬೈನ ವರ್ಲಿ ಏರಿಯಾದಲ್ಲಿ ನಿರ್ಮಾಣ ಹಂತದಲ್ಲಿರುವ ಲಿಫ್ಟ್​ ಕುಸಿದು ಬಿದ್ದು(Lift Collapse) 6 ಮಂದಿ ಮೃತಪಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಟ್ಟಡದ ಗುತ್ತಿಗೆದಾರ (Contractor) ಮತ್ತು ಮೇಲ್ವಿಚಾರಕ(Supervisor)ನನ್ನು ಪೊಲೀಸರು ಬಂಧಿಸಿದ್ದಾರೆ. ಲಿಫ್ಟ್​ ನಿರ್ಮಾಣ ಮಾಡುವಾಗ ತೆಗೆದುಕೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ, ಕೆಲಸಗಾರರ ಪ್ರಾಣವನ್ನೇ ಪಣಕ್ಕಿಟ್ಟಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಲಲಿತ್​ ಅಂಬಿಕಾ ಬಿಲ್ಡರ್​ಗಳಿಗೆ ಸೇರಿದ ಸೈಟ್​​ನಲ್ಲಿರುವ ಕಟ್ಟಡದಲ್ಲಿ ನಿರ್ಮಾಣ ಹಂತದಲ್ಲಿದ್ದ ಲಿಫ್ಟ್ ಇಂದು ಬೆಳಗ್ಗೆ ಕುಸಿದಿತ್ತು. ಸ್ಥಳದಲ್ಲೇ ಐವರು ಮೃತಪಟ್ಟಿದ್ದು, ಇನ್ನೊಬ್ಬಾತ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರೂ ಸಹ ಇದೀಗ ಸಾವನ್ನಪ್ಪಿದ್ದಾರೆ. ಮೃತರದನ್ನು ಚಿನ್ಮಯ್​ ಆನಂದ್​ ಮಂಡಲ್​, ಭಾರತ್ ಆನಂದ್​ ಮಂಡಲ್​, ಅನಿಲ್​ಕುಮಾರ್​ ನಂದಲಾಲ್ ಯಾದವ್​, ಅವಿನಾಶ್​ ದಾಸ್​, ಅಭಯ್​ ಮಿಸ್ಟ್ರಿ ಯಾದವ್​, ಲಕ್ಷ್ಮಣ್​ ಮಂಡಲ್​​ ಎಂದು ಗುರುತಿಸಲಾಗಿದೆ. ಇವರೆಲ್ಲ 30 ರಿಂದ 35 ವರ್ಷದ ಆಸುಪಾಸಿನವರೇ ಆಗಿದ್ದಾರೆ.

ಎನ್​​ಎಂ ಜೋಶಿ ಮಾರ್ಗ್​ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದರಲ್ಲಿ ಕೇವಲ ಗುತ್ತಿಗೆದಾರ, ಮೇಲ್ವಿಚಾರಕನ ಪಾತ್ರವಷ್ಟೇ ಅಲ್ಲ, ಇನ್ನೂ ಹಲವರು ಆರೋಪಿಗಳು ಇದ್ದು, ಅವರನ್ನೆಲ್ಲ ಶೀಘ್ರವೇ ಬಂಧಿಸುತ್ತೇವೆ ಎಂದೂ ಪೊಲೀಸರು ಹೇಳಿದ್ದಾರೆ.

ಘಟನೆ ನಡೆದದ್ದು ಹೇಗೆ? ನಿರ್ಮಾಣ ಹಂತದಲ್ಲಿದ್ದ ಲಿಫ್ಟ್​ನ 9ನೇ ಫ್ಲೋರ್​ನಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಅದು ಕುಸಿದಿದೆ. ಕಳಪೆ ಕಾಮಗಾರಿಯೇ ಲಿಫ್ಟ್ ಕುಸಿಯಲು ಕಾರಣ ಎಂದು ಹೇಳಲಾಗಿದೆ. ಮಹಾರಾಷ್ಟ್ರ ಸಚಿವ ಆದಿತ್ಯ ಠಾಕ್ರೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವಿಚಾರದಲ್ಲಿ ಸೂಕ್ತ ತನಿಖೆ ನಡೆಸಲು ಪೊಲೀಸರಿಗೆ ಹೇಳಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಫಿನಾಲೆಗೂ ಮೊದಲೇ ರಘು ಗೌಡ-ರಾಜೀವ್ ಅಭಿಮಾನಿಗಳಿಗೆ ಗುಡ್ ನ್ಯೂಸ್​

Karnataka Rains: ದಾವಣಗೆರೆ ಜಿಲ್ಲೆಯಲ್ಲಿ ನಿಲ್ಲದ ಪ್ರವಾಹ: ಸಾಲಬಾಳು-ಗಂಜೇನಹಳ್ಳಿ ನಡುವೆ ಸಂಪರ್ಕ ಕಡಿತ

Mumbai lift collapse 6 People Died and contractor supervisor arrested

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ