AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai: ಮುಂಬ್ರಾ ನಿಲ್ದಾಣದಲ್ಲಿ ಟ್ರ್ಯಾಕ್ ಬಿಟ್ಟು ಪ್ಲಾಟ್​ಫಾರಂಗೆ ಗುದ್ದಿದ ರೈಲು

ಮುಂಬೈ ಲೋಕಲ್ ರೈಲೊಂದು ಥಾಣೆಯ ಮುಂಬ್ರಾ ನಿಲ್ದಾಣದಲ್ಲಿ ಟ್ರ್ಯಾಕ್​ ಬಿಟ್ಟು ಪ್ಲಾಟ್​ಫಾರಂಗೆ ಡಿಕ್ಕಿ ಹೊಡೆದಿದೆ. ಮುಂಬ್ರಾ ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್‌ನ ಅಂಚಿಗೆ ಬಡಿದ ಪರಿಣಾಮ ರೈಲುಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು.

Mumbai: ಮುಂಬ್ರಾ ನಿಲ್ದಾಣದಲ್ಲಿ ಟ್ರ್ಯಾಕ್ ಬಿಟ್ಟು ಪ್ಲಾಟ್​ಫಾರಂಗೆ ಗುದ್ದಿದ ರೈಲು
ರೈಲುImage Credit source: Mid-Day.com
ನಯನಾ ರಾಜೀವ್
|

Updated on: Jul 06, 2023 | 7:47 AM

Share

ಮುಂಬೈ ಲೋಕಲ್ ರೈಲೊಂದು ಥಾಣೆಯ ಮುಂಬ್ರಾ ನಿಲ್ದಾಣದಲ್ಲಿ ಟ್ರ್ಯಾಕ್​ ಬಿಟ್ಟು ಪ್ಲಾಟ್​ಫಾರಂಗೆ ಡಿಕ್ಕಿ ಹೊಡೆದಿದೆ. ಮುಂಬ್ರಾ ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್‌ನ ಅಂಚಿಗೆ ಬಡಿದ ಪರಿಣಾಮ ರೈಲುಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ನಿಂದ (ಸಿಎಸ್‌ಎಂಟಿ) ಪ್ರಯಾಣ ಆರಂಭಿಸಿದ ರೈಲು ಮುಂಬ್ರಾ ನಿಲ್ದಾಣಕ್ಕೆ ಆಗಮಿಸುತ್ತಿದ್ದಾಗ ಈ ಘಟನೆ ನಡೆದಿದೆ. ಯಾರಿಗೂ ಯಾವುದೇ ರೀತಿಯ ಅಪಾಯವಾಗಿಲ್ಲ.

ಪಿಟಿಐ ಜೊತೆ ಮಾತನಾಡಿದ ಸೆಂಟ್ರಲ್ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಶಿವರಾಜ್ ಮನಸ್ಪುರೆ, ರಾತ್ರಿ 9.20 ರ ಸುಮಾರಿಗೆ ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 1 ಕ್ಕೆ ರೈಲು ನಿಧಾನವಾಗಿ ಆಗಮಿಸುತ್ತಿದ್ದಾಗ ಈ ಘಟನೆ ನಡೆದಿದೆ.

ಮತ್ತಷ್ಟು ಓದಿ: Odisha Train Accident: ಒಡಿಶಾ ರೈಲು ದುರಂತದಲ್ಲಿ ಬೆಂಗಳೂರಿನ ಹೊಟೇಲ್ ಕಾರ್ಮಿಕ ಸಾವು

ಪ್ಲಾಟ್​ಫಾರಂಗೆ ರೈಲು ತಗುಲುತ್ತಿದ್ದಂತೆಯೇ ರೈಲನ್ನು ನಿಲ್ಲಿಸಲಾಗಿತ್ತು. ರೈಲು ಹಳಿತಪ್ಪಿಲ್ಲ ಎಂದು ಕೇಂದ್ರ ರೈಲ್ವೆ ಸ್ಪಷ್ಟಪಡಿಸಿದೆ. ಹಲವು ರೈಲುಗಳ ಸಂಚಾರವನ್ನು ಕೆಲಕಾಲ ಸ್ಥಗಿತಗೊಳಿಸಲಾಯಿತು ಹೀಗಾಗಿ ಪ್ಲಾಟ್​ಫಾರಂನಲ್ಲಿ ಜನಸಂದಣಿ ಹೆಚ್ಚಾಗಿತ್ತು.

ಇತ್ತೀಚೆಗಷ್ಟೇ ಒಡಿಶಾದ ಬಾಲಸೋರ್​ನಲ್ಲಿ ತ್ರಿವಳಿ ರೈಲು ಅಪಘಾತ ಸಂಭವಿಸಿತ್ತು, ನೂರಾರು ಮಂದಿ ಇದರಲ್ಲಿ ಪ್ರಾಣ ಕಳೆದುಕೊಂಡಿದ್ದರು. ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್