ಮುಂಬೈ: ಲೋಖಂಡವಾಲಾ ಕಾಂಪ್ಲೆಕ್ಸ್‌ನಲ್ಲಿರುವ ಕಟ್ಟಡದಲ್ಲಿ ಅಗ್ನಿ ಅವಘಡ; 3 ಸಾವು

|

Updated on: Oct 16, 2024 | 12:46 PM

ಅಂಧೇರಿ ಪ್ರದೇಶದ ಲೋಖಂಡವಾಲಾ ಕಾಂಪ್ಲೆಕ್ಸ್‌ನ 4 ನೇ ಅಡ್ಡ ರಸ್ತೆಯಲ್ಲಿರುವ ರಿಯಾ ಪ್ಯಾಲೇಸ್ ಕಟ್ಟಡದ 10 ನೇ ಮಹಡಿಯಲ್ಲಿ ಬೆಳಿಗ್ಗೆ 8 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಘಟನೆಯಲ್ಲಿ ಮೂವರಿಗೆ ಗಾಯಗಳಾಗಿದ್ದು ಅವರನ್ನು ಕೂಪರ್ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಗಂಭೀರ ಗಾಯಗೊಂಡ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ

ಮುಂಬೈ: ಲೋಖಂಡವಾಲಾ ಕಾಂಪ್ಲೆಕ್ಸ್‌ನಲ್ಲಿರುವ ಕಟ್ಟಡದಲ್ಲಿ ಅಗ್ನಿ ಅವಘಡ; 3 ಸಾವು
ಮುಂಬೈನಲ್ಲಿ ಅಗ್ನಿ ಅವಘಡ
Follow us on

ಮುಂಬೈ ಅಕ್ಟೋಬರ್ 16: ಮುಂಬೈನ ಲೋಖಂಡವಾಲಾ (Lokhandwala) ಕಾಂಪ್ಲೆಕ್ಸ್‌ನಲ್ಲಿರುವ ಕಟ್ಟಡವೊಂದರಲ್ಲಿ ಬುಧವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ (Mumbai fair) ಮೂವರು ಸಾವಿಗೀಡಾಗಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಅಂಧೇರಿ ಪ್ರದೇಶದ ಲೋಖಂಡವಾಲಾ ಕಾಂಪ್ಲೆಕ್ಸ್‌ನ 4 ನೇ ಅಡ್ಡ ರಸ್ತೆಯಲ್ಲಿರುವ ರಿಯಾ ಪ್ಯಾಲೇಸ್ ಕಟ್ಟಡದ 10 ನೇ ಮಹಡಿಯಲ್ಲಿ ಬೆಳಿಗ್ಗೆ 8 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಘಟನೆಯಲ್ಲಿ ಮೂವರಿಗೆ ಗಾಯಗಳಾಗಿದ್ದು ಅವರನ್ನು ಕೂಪರ್ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಗಂಭೀರ ಗಾಯಗೊಂಡ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರನ್ನು ಚಂದ್ರಪ್ರಕಾಶ್ ಸೋನಿ (74), ಕಾಂತ ಸೋನಿ (74) ಮತ್ತು ಪೆಲುಬೇಟ (42) ಎಂದು ಗುರುತಿಸಲಾಗಿದೆ.

ಬೆಳಗ್ಗೆ 9 ಗಂಟೆ ಸುಮಾರಿಗೆ ಬೆಂಕಿ ನಂದಿಸಲಾಯಿತು ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

ಬೆಳಿಗ್ಗೆ 8 ರ ಸುಮಾರಿಗೆ ಟೆರೇಸ್​​ನಲ್ಲಿ ಕೆಲಸ ಮಾಡುತ್ತಿದ್ದ ನೆರೆಹೊರೆಯವರು 10 ನೇ ಮಹಡಿಯಿಂದ ಹೊಗೆ ಹೊರಹೊಮ್ಮುತ್ತಿರುವುದನ್ನು ಗಮನಿಸಿದರು. ಅವರು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದು ನಂತರ ಅಗ್ನಿಶಾಮಕ ದಳಕ್ಕೆ ತಿಳಿಸಿದರು.  “ನಾವು ಅರ್ಧ ಗಂಟೆಯೊಳಗೆ ಬೆಂಕಿಯನ್ನು ನಂದಿಸಿದೆವು, ನಂತರ ಕೂಲಿಂಗ್  ಕಾರ್ಯಾಚರಣೆಗಳು ಸ್ವಲ್ಪ ಸಮಯ ತೆಗೆದುಕೊಂಡವು. ಬೆಂಕಿ ಅವಘಡದಲ್ಲಿ ಗಾಯಗೊಂಡ  ಮೂವರನ್ನು ಕೂಪರ್ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು. ಸುಟ್ಟಗಾಯಗಳ ಪರಿಣಾಮ ಇಬ್ಬರು ಮೃತಪಟ್ಟರೆ, ಮೂರನೆ ಹೊಗೆ ಸೇವಿಸಿ ಸಾವಿಗೀಡಾಗಿದ್ದಾರೆ. ಅಲ್ಲಿ ಸುತ್ತಲೂ ಹೊಗೆ ಆವರಿಸಿದ್ದು ಸಿಲುಕಿರುವವರನ್ನು ರಕ್ಷಿಸಲು ಸವಾಲಾಗಿತ್ತು ಎಂದು ಪ್ರಭಾರಿ ವಿಭಾಗೀಯ ಅಗ್ನಿಶಾಮಕ ಅಧಿಕಾರಿ ಪುರುಷೋತ್ತಮ್ ಸಂಡಿಕರ್ ಘಟನೆಯನ್ನು ವಿವರಿಸಿದ್ದಾರೆ.

ಇದನ್ನೂ ಓದಿ: Who is Omar Abdullah: ಒಮರ್ ಅಬ್ದುಲ್ಲಾ ಯಾರು? ಪ್ರೀತಿ, ರಾಜಕೀಯ ಪಯಣದ ಬಗ್ಗೆ ಮಾಹಿತಿ ಇಲ್ಲಿದೆ

ಲೋಖಂಡವಾಲಾ ಕಾಂಪ್ಲೆಕ್ಸ್‌ನಲ್ಲಿ ಒಂದು ತಿಂಗಳಲ್ಲಿ ಇದು  ಎರಡನೇ ಅಗ್ನಿ ಅವಘಡ

ಮುಂಬೈನ ಅಂಧೇರಿಯ ಲೋಖಂಡವಾಲಾ ಕಾಂಪ್ಲೆಕ್ಸ್‌ನ ಹತ್ತಿರ ಪ್ರದೇಶದಲ್ಲಿ ಒಂದು ತಿಂಗಳ ಅವಧಿಯಲ್ಲಿ ಇದು ಎರಡನೇ ಬೆಂಕಿ ಅವಘಡವಾಗಿದೆ. ಸೆಪ್ಟೆಂಬರ್ 19 ರಂದು, ಕಾಂಪ್ಲೆಕ್ಸ್‌ನಲ್ಲಿರುವ ಬಂಗಲೆಯಲ್ಲಿ ಬೆಂಕಿ ಕಾಣಿಸಿಕೊಂಡಿತು. ಘಟನೆಯಲ್ಲಿ ಯಾವುದೇ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ. ಆದರೆ, ಬಂಗಲೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ವಿಡಿಯೋ ಅಂತರ್ಜಾಲದಲ್ಲಿ ಕಾಣಿಸಿಕೊಂಡಿದ್ದು, ದಟ್ಟ ಹೊಗೆ ಆವರಿಸಿದ್ದು, ಲೋಖಂಡವಾಲಾ ಕಾಂಪ್ಲೆಕ್ಸ್‌ನ ನಿವಾಸಿಗಳಲ್ಲಿ ಭಯ ಹುಟ್ಟಿಸಿದೆ. ಬಂಗಲೆ ನಂ.11, ಕ್ರಾಸ್ ರೋಡ್ ನಂ 2, ಸ್ಟೆಲ್ಲರ್ ಬಂಗಲೆ, ಲೋಖಂಡವಾಲಾ ಕಾಂಪ್ಲೆಕ್ಸ್, ಅಂಧೇರಿ ಪಶ್ಚಿಮದಲ್ಲಿ ಈ ಘಟನೆ ನಡೆದಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ