Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai Rains: ಮುಂಬೈನಲ್ಲಿ ಮುಂಬರುವ ನಾಲ್ಕು ದಿನ ಭರ್ಜರಿ ಮಳೆ ಸಾಧ್ಯತೆ, ರೆಡ್ ಅಲರ್ಟ್ ಘೋಷಣೆ

Monsoon 2021: ನೈಋತ್ಯ ಮಾನ್ಸೂನ್ ಇಂದು ಮುಂಬೈಗೆ ಆಗಮಿಸಿದ್ದು, ಮುಂಜಾನೆಯಿಂದಲೇ ನಗರ ಮತ್ತು ಉಪನಗರಗಳಲ್ಲಿ ಭಾರಿ ಮಳೆಯಾಗಿದೆ ಎಂದು ಐಎಂಡಿ ಹೇಳಿದೆ. ಇದರಿಂದಾಗಿ ಅನೇಕ ಸ್ಥಳಗಳಲ್ಲಿ ನೀರು ತುಂಬಿದ್ದು, ಸ್ಥಳೀಯ ರೈಲು ಸೇವೆಗಳಿಗೆ ಅಡ್ಡಿಯಾಗಿದೆ.

Mumbai Rains: ಮುಂಬೈನಲ್ಲಿ ಮುಂಬರುವ ನಾಲ್ಕು ದಿನ ಭರ್ಜರಿ ಮಳೆ ಸಾಧ್ಯತೆ, ರೆಡ್ ಅಲರ್ಟ್ ಘೋಷಣೆ
ಮುಂಬೈಯಲ್ಲಿ ಮಳೆಯ ದೃಶ್ಯ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jun 09, 2021 | 6:41 PM

ಮುಂಬೈ: ಮುಂದಿನ ನಾಲ್ಕು ದಿನಗಳವರೆಗೆ ಮುಂಬೈನಲ್ಲಿ ಭಾರೀ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ. ಐಎಂಡಿ ಬುಧವಾರ ಮುಂಬೈಗೆ ರೆಡ್ ಅಲರ್ಟ್ ಮತ್ತು ಮುಂದಿನ ನಾಲ್ಕು ದಿನಗಳವರೆಗೆ ಹಳದಿ ಅಲರ್ಟ್ ಘೋಷಿಸಿದೆ.  ಕೊಂಕಣ ಕಿನರಪಟ್ಟಿಯ (ಕರಾವಳಿ ಪಟ್ಟಿ) ಕೆಲವು ಜಿಲ್ಲೆಗಳಲ್ಲಿ ಸಹ ಮುಂಬರುವ ದಿನಗಳಲ್ಲಿ ಭಾರಿ ಮಳೆಯಾಗಬಹುದು ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ.

ಕೊಂಕಣ ಕಿನರಪಟ್ಟಿಯ (ಕರಾವಳಿ ಪಟ್ಟಿ) ಕೆಲವು ಜಿಲ್ಲೆಗಳಿಗೆ ಹಳದಿ ಮತ್ತು ಕೆಂಪು ಎಚ್ಚರಿಕೆ ನೀಡಲಾಗಿದೆ. ಮುಂಬೈಗೆ ಇಂದು ರೆಡ್ ಅಲರ್ಟ್ ನೀಡಲಾಗಿದೆ ಮತ್ತು ಮುಂದಿನ 4 ದಿನಗಳವರೆಗೆ ಹಳದಿ ಎಚ್ಚರಿಕೆ ನೀಡಲಾಗಿದೆ. ಮುಂಬೈ ಸೇರಿದಂತೆ ಕೊಂಕಣ ಕಿನರಪಟ್ಟಿ ಮುಂದಿನ 4 ದಿನಗಳವರೆಗೆ ಭಾರಿ ಮಳೆಯಾಗಬಹುದು ಎಂದು ಐಎಂಡಿ ಮುಂಬೈನ ವಿಜ್ಞಾನಿ ಶುಭಂಗಿ ಭೂಟೆ ಬುಧವಾರ ಹೇಳಿದ್ದಾರೆ.

ರೆಡ್ ಅಲರ್ಟ್ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯನ್ನು ಸೂಚಿಸುತ್ತದೆ. ಎಚ್ಚರಿಕೆ ಘೋಷಿಸಿದರೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ‘ಹಳದಿ’ ಅಲರ್ಟ್ ಪರಿಸ್ಥಿತಿಯ ಬಗ್ಗೆ ಅಧಿಕಾರಿಗಳು ‘ಅಪ್ ಡೇಟ್ ‘ ಮಾಡಬೇಕು ಎಂದು ಸೂಚಿಸುತ್ತದೆ. ಇದಲ್ಲದೆ, ಮುಂದಿನ ಐದು ದಿನಗಳಲ್ಲಿ ಗೋವಾದಲ್ಲಿ ಭಾರೀ ಮಳೆಯಾಗಲಿದೆ ಎಂದು ಐಎಂಡಿ ಟ್ವೀಟ್ ಮಾಡಿದೆ.

“ಮುಂದಿನ 5 ದಿನಗಳಲ್ಲಿ ಕೊಂಕಣ ಮತ್ತು ಗೋವಾದ ಮೇಲೆ ಜೋರು ಮಳೆಯಾಗಿಲಿದೆ ” ಎಂದು ಐಎಂಡಿ ಹೇಳಿದೆ.

ಮುಂಬೈನ ಸಾಂತಾಕ್ರೂಜ್‌ನಲ್ಲಿ ಬುಧವಾರ ಬೆಳಿಗ್ಗೆ 8:30 ರಿಂದ ಮಧ್ಯಾಹ್ನ 2: 30 ರ ನಡುವೆ 168.8 ಮಿ.ಮೀ ಮಳೆಯಾಗಿದೆ. ಐಎಂಡಿ ಮಾಹಿತಿಯ ಪ್ರಕಾರ, ಅದೇ ಅವಧಿಯಲ್ಲಿ ಕೊಲಾಬಾದಲ್ಲಿ 32.2 ಮಿಮೀ ಮಳೆಯಾಗಿದೆ.

ನೈಋತ್ಯ ಮಾನ್ಸೂನ್ ಇಂದು ಮುಂಬೈಗೆ ಆಗಮಿಸಿದ್ದು, ಮುಂಜಾನೆಯಿಂದಲೇ ನಗರ ಮತ್ತು ಉಪನಗರಗಳಲ್ಲಿ ಭಾರಿ ಮಳೆಯಾಗಿದೆ ಎಂದು ಐಎಂಡಿ ಹೇಳಿದೆ. ಇದರಿಂದಾಗಿ ಅನೇಕ ಸ್ಥಳಗಳಲ್ಲಿ ನೀರು ತುಂಬಿದ್ದು, ಸ್ಥಳೀಯ ರೈಲು ಸೇವೆಗಳಿಗೆ ಅಡ್ಡಿಯಾಗಿದೆ.

ಮುಂಬಯಿಯ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (ಸಿಎಸ್ಎಂಟಿ) ಯಿಂದ ನೆರೆಯ ಥಾಣೆ ಮತ್ತು ನವೀ ಮುಂಬಯಿಯ ವಾಶಿಗೆ ಸ್ಥಳೀಯ ರೈಲು ಸೇವೆಗಳನ್ನು ಬುಧವಾರ ಮಳೆಯಿಂದಾಗಿ ಸ್ಥಗಿತಗೊಳಿಸಲಾಗಿದೆ. ನಗರದ ನಾಗರಿಕ ಸಂಸ್ಥೆಯ ಸಾರಿಗೆ ವಿಭಾಗವನ್ನು ನಡೆಸುವ ಕೆಲವು ಬೆಸ್ಟ್ ಬಸ್‌ಗಳ ಮಾರ್ಗಗಳನ್ನು ಸಹ ತಿರುಗಿಸಲಾಯಿತು.

ಸೆಂಟ್ರಲ್ ರೈಲ್ವೆ (ಸಿಆರ್) ಮಾರ್ಗದಲ್ಲಿ ಸಿಯಾನ್ ಮತ್ತು ಚುನಭಟ್ಟಿ ನಿಲ್ದಾಣಗಳ ಸಮೀಪವಿರುವ ಹಳಿಗಳನ್ನು ಒಳಗೊಂಡಂತೆ ನಗರದ ಹಲವಾರು ಸ್ಥಳಗಳಲ್ಲಿ ಪ್ರವಾಹ ಉಂಟಾಗಿದೆ.  ಸಂಗ್ರಹವಾದ ಮಳೆನೀರನ್ನು ಬೇಗನೆ ಹರಿಸುವುದನ್ನು ಖಚಿತಪಡಿಸಿಕೊಳ್ಳಲು ಸಾರಿಗೆ ಪುನರಾರಂಭಗೊಳ್ಳುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆಡಳಿತಕ್ಕೆ ನಿರ್ದೇಶನ ನೀಡಿದರು.

ಮುಂಬೈನ ನಿಯಂತ್ರಣ ಕೊಠಡಿಗಳೊಂದಿಗೆ ಥಾಣೆ, ರಾಯ್ಗಡ್, ರತ್ನಾಗಿರಿ, ಸಿಂಧುದುರ್ಗ್ ಮತ್ತು ಪಾಲ್ಘರ್ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಠಾಕ್ರೆ ಮಾತನಾಡಿದ್ದಾರೆ. ನಿರಂತರ ಮಳೆಯಿಂದಾಗಿ ಹಲವಾರು ಪ್ರದೇಶಗಳು ಮುಳುಗಿದ್ದು ಜನ ಸಾಮಾನ್ಯರ ಜೀವನದ ಮೇಲೆ ಪರಿಣಾಮ ಬೀರಿದೆ.

ಇದನ್ನೂ ಓದಿ:  Monsoon 2021: ಮುಂಬೈ ಪ್ರವೇಶಿಸಿದ ನೈಋತ್ಯ ಮುಂಗಾರು; ಮಹಾನಗರಿಯಲ್ಲಿ ಭರ್ಜರಿ ಮಳೆ, ರೈಲ್ವೆ ಸಂಚಾರ ಸ್ಥಗಿತ

(Mumbai might witness ‘heavy’ to ‘very heavy’ rainfall for the next 4 days IMD has issued Red alert )

ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ