Video: ಸಾರ್ವಜನಿಕ ಶೌಚಾಲಯದಲ್ಲಿ ಎರಡೂವರೆ ತಿಂಗಳ ನಾಯಿ ಮರಿ ಮೇಲೆ ಅತ್ಯಾಚಾರವೆಸಗಿದ ಕಾಮುಕ

ಎರಡೂವರೆ ತಿಂಗಳ ನಾಯಿ(Dog) ಮರಿ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿರುವ ಘಟನೆ ಮುಂಬೈನ ಮಲಾಡ್ ಪ್ರದೇಶದಲ್ಲಿ ನಡೆದಿದೆ. ಯುವಕನೊಬ್ಬ ಮರಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕ್ರೂರವಾಗಿ ಥಳಿಸಿದ ಆಘಾತಕಾರಿ ಪ್ರಾಣಿ ಹಿಂಸೆಯ ಘಟನೆ ಬೆಳಕಿಗೆ ಬಂದಿದೆ. ರಕ್ಷಣಾ ಕಾರ್ಯಾಚರಣೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಈ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

Video: ಸಾರ್ವಜನಿಕ ಶೌಚಾಲಯದಲ್ಲಿ ಎರಡೂವರೆ ತಿಂಗಳ ನಾಯಿ ಮರಿ ಮೇಲೆ ಅತ್ಯಾಚಾರವೆಸಗಿದ ಕಾಮುಕ
ಆರೋಪಿ-ನಾಯಿ

Updated on: Jan 21, 2026 | 12:40 PM

ಮುಂಬೈ, ಜನವರಿ 21: ಎರಡೂವರೆ ತಿಂಗಳ ನಾಯಿ(Dog) ಮರಿ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿರುವ ಘಟನೆ ಮುಂಬೈನ ಮಲಾಡ್ ಪ್ರದೇಶದಲ್ಲಿ ನಡೆದಿದೆ. ಯುವಕನೊಬ್ಬ ಮರಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕ್ರೂರವಾಗಿ ಥಳಿಸಿದ ಆಘಾತಕಾರಿ ಪ್ರಾಣಿ ಹಿಂಸೆಯ ಘಟನೆ ಬೆಳಕಿಗೆ ಬಂದಿದೆ. ರಕ್ಷಣಾ ಕಾರ್ಯಾಚರಣೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ  ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಪ್ರಾಣಿ ಕಲ್ಯಾಣ ಸಂಸ್ಥೆ ಪಿಎಎಲ್ (ಪ್ಯೂರ್ ಅನಿಮಲ್ ಲವರ್ಸ್) ಫೌಂಡೇಶನ್ ಹಂಚಿಕೊಂಡಿರುವ ಈ ವೀಡಿಯೊದಲ್ಲಿ ಮುಂಬೈ ಪೊಲೀಸ್ ಸಿಬ್ಬಂದಿ ಮತ್ತು ಸ್ಥಳೀಯ ಕಾರ್ಯಕರ್ತರು ಆ ಪ್ರದೇಶದ ಸಾರ್ವಜನಿಕ ಶೌಚಾಲಯಕ್ಕೆ ಪ್ರವೇಶಿಸುತ್ತಿರುವುದನ್ನು ತೋರಿಸಲಾಗಿದ್ದು, ಆರೋಪಿಯು ಕೃತ್ಯ ನಡೆಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ.

ವಿಡಿಯೋದಲ್ಲಿ ಆ ವ್ಯಕ್ತಿ ಆರಂಭದಲ್ಲಿ ಬಾಗಿಲು ತೆರೆಯಲು ನಿರಾಕರಿಸುವುದನ್ನು ಕಾಣಬಹುದು. ನಂತರ ಪೊಲೀಸರು ಬಲವಂತವಾಗಿ ಒಳಗೆ ಪ್ರವೇಶಿಸಿ ಆತನನ್ನು ವಶಕ್ಕೆ ಪಡೆದರು. ಅರೆಬೆತ್ತಲೆಯಾಗಿ ಮತ್ತು ಶಾರ್ಟ್ಸ್ ಧರಿಸಿ ಕಾಣಿಸಿಕೊಂಡ ಆರೋಪಿಯನ್ನು  ವಶಕ್ಕೆ ತೆಗೆದುಕೊಳ್ಳಲಾಯಿತು.

ಮತ್ತಷ್ಟು ಓದಿ: ಬೀದಿ ನಾಯಿ ಅಲ್ಲ, ಪೊಲೀಸ್ ಠಾಣೆ ಮೆಟ್ಟಿಲೇರಿತು ಸಾಕು ನಾಯಿ ಜಗಳ! ಅಸಲಿಗೆ ಆಗಿದ್ದೇನು ಗೊತ್ತೇ?

ಪಿಎಎಲ್ ಫೌಂಡೇಶನ್ ಪ್ರಕಾರ, ನಾಯಿಮರಿಯನ್ನು ತಕ್ಷಣವೇ ರಕ್ಷಿಸಿ ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸಲಾಯಿತು. ನಾಯಿಮರಿ ಈಗ ವೈದ್ಯಕೀಯ ಆರೈಕೆಯಲ್ಲಿದೆ ಮತ್ತು ಗಂಭೀರ ಸ್ಥಿತಿಯಲ್ಲಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದಾರೆ.

 

ರಾಷ್ಟ್ರಿಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:38 pm, Wed, 21 January 26